ಕೇಂದ್ರ ಬಜೆಟ್ ಅಧಿವೇಶನ: ಮೋದಿ ಸರ್ಕಾರ ‘ನವ ಭಾರತ’  ನಿರ್ಮಾಣಕ್ಕಾಗಿ ದುಡಿಯುತ್ತಿದೆ: ರಾಷ್ಟ್ರಪತಿ ಕೋವಿಂದ್
ಮೈಸೂರು

ಕೇಂದ್ರ ಬಜೆಟ್ ಅಧಿವೇಶನ: ಮೋದಿ ಸರ್ಕಾರ ‘ನವ ಭಾರತ’ ನಿರ್ಮಾಣಕ್ಕಾಗಿ ದುಡಿಯುತ್ತಿದೆ: ರಾಷ್ಟ್ರಪತಿ ಕೋವಿಂದ್

February 1, 2019

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‍ಡಿಎ ಸರ್ಕಾರ ‘ನವ ಭಾರತ’ ನಿರ್ಮಾಣಕ್ಕಾಗಿ ದುಡಿ ಯುತ್ತಿದ್ದು, ಜನರಿಗೆ ಭರವಸೆ ಮೂಡಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಹೇಳಿದ್ದಾರೆ.

ಪ್ರಧಾನಿ ಮೋದಿ ಸರ್ಕಾರದ ಕೊನೆಯ ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಮನಾಥ್ ಕೋವಿಂದ್ ಭಾಷಣ ಆರಂಭಿಸಿದ್ದಾರೆ. ಪ್ರತೀ ಕ್ಷೇತ್ರದಲ್ಲಿರುವ, ಎಲ್ಲಾ ರೀತಿಯ ಜನರ ಭರವಸೆಗಳು ಹಾಗೂ ಆಸೆಗಳನ್ನು ಈಡೇರಿಸಲು ಸರ್ಕಾರ ಕೆಲಸ ಮಾಡುತ್ತಿದೆ. ಮುಸ್ಲಿಂ ಮಹಿಳೆಯರು ಯಾವುದೇ ರೀತಿಯ ಭಯವಿಲ್ಲದೆ ಜೀವನ ನಡೆಸುವ ಸಲುವಾಗಿ, ಮುಸ್ಲಿಂ ಮಹಿಳೆ ಯರ ಸಬಲೀಕರಣಕ್ಕಾಗಿ ತ್ರಿವಳಿ ತಲಾಖ್ ಮಸೂದೆ ಜಾರಿಗೆ ತರಲು ಸರ್ಕಾರ ಯತ್ನಿಸುತ್ತಿದೆ. 2014ರ ಲೋಕಸಭಾ ಚುನಾ ವಣೆಗೂ ಮುನ್ನ ದೇಶ ಅನಿಶ್ಚಿತತೆಯತ್ತ ಸಾಗುತ್ತಿತ್ತು.
ಚುನಾವಣೆ ಪೂರ್ಣ ಗೊಂಡ ಬಳಿಕ ನಮ್ಮ ಸರ್ಕಾರ ನವ ಭಾರತ ನಿರ್ಮಾಣ ಕ್ಕಾಗಿ ದುಡಿಯಲು ಆರಂಭಿಸಿತು ಎಂದಿದ್ದಾರೆ. ಸಾಕಷ್ಟು ಜನಪರ ಯೋಜನೆ ಗಳನ್ನು ಜಾರಿಗೊಳಿಸುವ ಮೂಲಕ ನಮ್ಮ ಸರ್ಕಾರ ಸಾಧನೆ ಮಾಡಿದೆ. ಪ್ರಧಾನಮಂತ್ರಿ ಜೀವನ್ ವಿಮಾ ಯೋಜನೆ 21 ಕೋಟಿ ಜನರಿಗೆ ಲಾಭವನ್ನು ತಂದಿದೆ. ಪ್ರಧಾನಮಂತ್ರಿ ಸೌಭಾಗ್ಯ ಯೋಜನೆ ಯಡಿಯಲ್ಲಿ 2ಕೋಟಿಗೂ ಹೆಚ್ಚು ಮನೆಗಳಿಗೆ ವಿದ್ಯುತ್ ಲಭಿಸಿದೆ. ಸ್ವಚ್ಛ ಭಾರತ ಅಭಿಯಾನ ಅಡಿಯಲ್ಲಿ ಸರ್ಕಾರ ಈವರೆಗೂ 9 ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡಿದೆ. ಎಂದು ತಿಳಿಸಿದ್ದಾರೆ.

Translate »