ನವದೆಹಲಿ,ಸೆ.23-ಕೇಂದ್ರ ಸಚಿವ ಸುರೇಶ್ ಅಂಗಡಿ(65) ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ನಿಧನರಾದರು.
ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ ಅವರಿಗೆ ಇದೇ ಸೆ.11ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಕೊರೊನಾ ಪಾಸಿಟಿವ್ ವರದಿಯಾಗಿತ್ತು. ಈ ಕುರಿತು ಸೆ.11ರಂದು ಸ್ವತಃ ಅವರೇ ಟ್ವೀಟ್ ಮಾಡಿದ್ದರು. ಅಂದೇ ದೆಹಲಿಯ ಏಮ್ಸ್ ಆಸ್ಪ ತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿ ದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧ ವಾರ ರಾತ್ರಿ ಕೊನೆಯುಸಿರೆಳೆದರು.
ತಾಯಿ, ಪತ್ನಿ, ಇಬ್ಬರು ಪುತ್ರಿಯರನ್ನು ಸಚಿವ ಸುರೇಶ್ ಅಂಗಡಿ ಅಗಲಿದ್ದಾರೆ. ಅಂಗಡಿ ಅವರ ಓರ್ವ ಪುತ್ರಿಯನ್ನು ಜಗದೀಶ್ ಶೆಟ್ಟರ್ ಅವರ ಪುತ್ರನಿಗೆ ವಿವಾಹ ಮಾಡಿಕೊಡಲಾಗಿತ್ತು. ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ ಕೋವಿಡ್ ಟೆಸ್ಟ್ ಮಾಡಿಸಿದ್ದ ಅಂಗಡಿಯವ ರಿಗೆ ಕೊರೊನಾ ಪಾಸಿಟಿವ್ ಬಂದಿತ್ತು.
ಸುರೇಶ್ ಚನ್ನಬಸಪ್ಪ ಅಂಗಡಿ ಅವರು ಬೆಳಗಾವಿ ಜಿಲ್ಲೆ ಮತ್ತು ತಾಲೂಕಿನ ಕೆ.ಕೆ.ಕೊಪ್ಪ ನಿವಾಸಿಗಳು. ಚನ್ನಬಸಪ್ಪ-ಸೋಮವ್ವ ದಂಪ ತಿಯ ಮಗನಾಗಿ 1955ರ ಜೂ.1ರಂದು ಜನಿಸಿದ ಸುರೇಶ್ ಅಂಗಡಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 4 ಬಾರಿ ಬಿಜೆಪಿ ಅಭ್ಯರ್ಥಿಯಾಗಿ ನಿರಂತರವಾಗಿ ಆಯ್ಕೆಯಾಗಿದ್ದರು. 1996ರಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಉಪಾ ಧ್ಯಕ್ಷರಾಗಿದ್ದರು. ಆರ್.ಎಲ್. ಲಾ ಕಾಲೇಜ್ ನಿಂದ ಕಾನೂನು ಪದವಿ ಪಡೆದಿದ್ದರು. 1999 ರಲ್ಲಿ ಬೆಳಗಾವಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಗಿದ್ದರು. 2001ರಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ರಾಗಿ ಕಾರ್ಯನಿರ್ವಹಿಸಿದ್ದರು. 2004ರಲ್ಲಿ ಮೊದಲ ಬಾರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರ ದಿಂದ ಆಯ್ಕೆಯಾಗಿದ್ದರು. 2009, 2014 ಹಾಗೂ 2019ರಲ್ಲಿ ಹೀಗೆ ಸತತವಾಗಿ 4 ಬಾರಿ ಸಂಸತ್ ಪ್ರವೇಶಿಸಿದ್ದರು. 2019ರ ಮೇ 30 ರಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸದ್ಯ, ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟ ದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದರು. ರಾಜ್ಯಕ್ಕೆ ಬಹಳಷ್ಟು ರೈಲ್ವೆ ಯೋಜನೆಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಜನಮನ್ನಣೆಗೆ ಪಾತ್ರರಾಗಿದ್ದರು. ಹುಬ್ಬಳ್ಳಿಯಲ್ಲಿನ ನೈರುತ್ಯ ರೈಲ್ವೆ ವಲಯ ಕಚೇರಿ ಕಾಮಗಾರಿಗಳ ಪರಿಶೀಲನೆ, ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗ ಮಂಜೂರು, ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಶ್ರೀ ಸಿದ್ಧಾರೂಢರ ಹೆಸರಿಡುವುದೂ ಸೇರಿ ದಂತೆ ಹಲವು ಪ್ರಮುಖ ಕಾರ್ಯಗಳನ್ನು ಮಾಡಿದ್ದ ಸುರೇಶ್ ಅಂಗಡಿ, ಉತ್ತರ ಕರ್ನಾಟಕ ಭಾಗದಲ್ಲಿ ಜನಾನುರಾಗಿಯಾಗಿದ್ದರು. ಇವರ ನೇತೃತ್ವದಲ್ಲಿಯೇ ಇತ್ತೀಚೆಗಷ್ಟೇ ದಕ್ಷಿಣದ ಮೊದಲ ಕಿಸಾನ್ ರೈಲು ಉತ್ತರ ಕರ್ನಾಟಕದಿಂದ ಹೊರಟಿತ್ತು.
ರಾಜ್ಯದ ಅಭಿವೃದ್ಧಿಯ ಮಾರ್ಗ ಕಡಿತಗೊಂಡಂತಾಗಿದೆ
ಬೆಳಗಾವಿ ಸಂಸದರು, ಕೇಂದ್ರ ರೈಲ್ವೆ ರಾಜ್ಯ ಸಚಿವರೂ ಆದ ಸುರೇಶ್ ಅಂಗಡಿ ಅವರು ವಿಧಿವಶರಾದದ್ದು ತೀವ್ರ ದಿಗ್ಭ್ರಮೆಯನ್ನುಂಟು ಮಾಡಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸತತ 4 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಅವರು ಈ ಬಾರಿ ಕೇಂದ್ರದಲ್ಲಿ ರೈಲ್ವೆ ಖಾತೆ ರಾಜ್ಯಸಚಿವರಾಗಿ ರಾಜ್ಯದ ರೈಲ್ವೆ ಸಾರಿಗೆ ಅಭಿವೃದ್ದಿಯ ಕನಸುಗಳನ್ನು ಹೊಂದಿದ್ದರು. ದುರಾದೃಷ್ಟವಶಾತ್ ಕೊರೊನಾ ಸೋಂಕಿನಿಂದ ನಮ್ಮನ್ನಗಲಿರುವುದು. ರಾಜ್ಯದ ಅಭಿವೃದ್ಧಿಯ ಮಾರ್ಗವೊಂದು ಕಡಿತಗೊಂಡಂತಾಗಿದೆ. ಸುರೇಶ್ ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಸುದ್ದಿ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ
ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನ ತೀವ್ರ ದಿಗ್ಬ್ರಮೆ ತಂದಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ದಾರೆ. ಬಿಜೆಪಿ ಓರ್ವ ಉನ್ನತ, ಉತ್ತಮ ನಾಯಕನನ್ನು ಹಾಗೂ ಅತ್ಯಂತ ನಿಷ್ಟಾ ವಂತ ಕಟ್ಟಾಳುವನ್ನು ಕಳೆದುಕೊಂಡಿದೆ. ಬೆಳಗಾವಿ ಮಾತ್ರವಲ್ಲದೆ ಇಡೀ ನಾಡಿನ ನೆಚ್ಚಿನ ನಾಯಕರಾಗಿದ್ದರು, ನಮಗೆ ಹಿರಿಯರಾಗಿ ಮಾರ್ಗದರ್ಶನ ಮಾಡು ತ್ತಿದ್ದರು. ರಾಜಕಾರಣದಲ್ಲಿ ಅಜಾತಶತ್ರುವಾಗಿದ್ದರು. ವೈಯಕ್ತಿಕ ಜೀವನದಲ್ಲೂ ಶಿಸ್ತುಬದ್ಧರಾಗಿ ದ್ದರು. ಪ್ರತಿಯೊಬ್ಬರಿಗೂ ಮಾದರಿ ಎನಿಸುವಂಥ ವ್ಯಕ್ತಿತ್ವ ಹೊಂದಿದ್ದರು. ಅಂಗಡಿಯರ ನಿಧನ ಸುದ್ದಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.