ಮುಂದುವರಿದ ಮೈಸೂರು ವಿವಿ ಮಹಿಳಾ ಪೌರ ಕಾರ್ಮಿಕರ ಅಹೋರಾತ್ರಿ ಧರಣಿ
ಮೈಸೂರು

ಮುಂದುವರಿದ ಮೈಸೂರು ವಿವಿ ಮಹಿಳಾ ಪೌರ ಕಾರ್ಮಿಕರ ಅಹೋರಾತ್ರಿ ಧರಣಿ

September 8, 2018

ಮೈಸೂರು:  ಮೈಸೂರು ವಿವಿ ಮಹಿಳಾ ಪೌರ ಕಾರ್ಮಿಕರು ತಮ್ಮ ಅನಿರ್ಧಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ಇಂದು 4ನೇ ದಿನಕ್ಕೆ ಕಾಲಿಟ್ಟಿತು.

ಕನಿಷ್ಠ ಕೂಲಿ, ಇಪಿಎಫ್ ಹಾಗೂ ಆರೋಗ್ಯ ವಿಮಾ ಸೌಲಭ್ಯಗಳನ್ನು ಕಲ್ಪಿಸು ವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಿಶ್ವವಿದ್ಯಾನಿಲಯಗಳ ಸ್ವಚ್ಛತಾ ಕಾರ್ಯ ನೌಕರರ ಸಂಘದ (ರಾಜ್ಯ ಸಮಿತಿ) ಆಶ್ರಯದಲ್ಲಿ ಮೈಸೂರು ವಿಶ್ವವಿದ್ಯಾ ನಿಲಯದ ಮಹಿಳಾ ಪೌರ ಕಾರ್ಮಿಕರು ಮೈಸೂರು ಮಾನಸಗಂಗೋತ್ರಿಯ ಕುವೆಂಪು ಪ್ರತಿಮೆ ಬಳಿಯ ಮುಖ್ಯ ದ್ವಾರ ದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿ ವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರ ಗಮನಕ್ಕೆ ವಿವಿ ಮಹಿಳಾ ಪೌರ ಕಾರ್ಮಿಕರ ಅಹೋರಾತ್ರಿ ಪ್ರತಿ ಭಟನೆ ಕುರಿತಂತೆ ಸಂಘದ ಅಧ್ಯಕ್ಷ ಚಂದ್ರ ಶೇಖರ ಮೇಟಿ ಮತ್ತು ಉಷಾರಾಣಿ ಅವರು ಸಚಿವರ ಆಪ್ತ ಕಾರ್ಯದರ್ಶಿಗಳ ಮೂಲಕ ತಂದಿದ್ದಾರೆ. ಶನಿವಾರ (ಸೆ.8) ಸಚಿವರು ಮತ್ತು ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಚರ್ಚಿಸಲಿರುವು ದಾಗಿ ಮೂಲಗಳು ತಿಳಿಸಿವೆ.

Translate »