ಕೇಂದ್ರದ ವೇತನ ಶ್ರೇಣಿ ನೀಡದೆ ರಾಜ್ಯ ಸರ್ಕಾರಿ ನೌಕರರಿಗೆ ಅನ್ಯಾಯ
ಮೈಸೂರು

ಕೇಂದ್ರದ ವೇತನ ಶ್ರೇಣಿ ನೀಡದೆ ರಾಜ್ಯ ಸರ್ಕಾರಿ ನೌಕರರಿಗೆ ಅನ್ಯಾಯ

December 31, 2021

ಮೈಸೂರು, ಡಿ.30(ಎಟಿವೈ)- ದೇಶದ 24 ರಾಜ್ಯಗಳಲ್ಲಿ ಸರ್ಕಾರಿ ನೌಕರರಿಗೆ ಕೇಂದ್ರದ ಶ್ರೇಣಿಯಂತೆ ವೇತನ ನೀಡಲಾಗುತ್ತಿದ್ದು, ಕರ್ನಾಟಕದಲ್ಲಿ ಮಾತ್ರ ಈ ವೇತನ ಶ್ರೇಣಿ ನೀಡದೆ ಅನ್ಯಾಯ ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ವಿಷಾದ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಸರ್ಕಾರಿ ನೌಕರರ ಸಂಘ ಹೊರ ತಂದಿರುವ 2022ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 2.50 ಲಕ್ಷ ಸರ್ಕಾರದ ವಿವಿಧ ಹಂತದ ಹುದ್ದೆ ಖಾಲಿಯಿದ್ದರೂ, ಹೆಚ್ಚುವರಿ ಕೆಲಸ ವನ್ನು ಕಳೆದ ಹಲವು ವರ್ಷಗಳಿಂದ ನಿಭಾಯಿಸಿಕೊಂಡು ಬರುತ್ತಿದ್ದಾರೆ ಎಂದರು.

ರಾಜ್ಯ ಸರ್ಕಾರಿ ನೌಕರರಿಗೆ 2022ನೇ ಸಾಲಿನಿಂದ ಕೇಂದ್ರದ ವೇತನ ಶ್ರೇಣಿ ಮಂಜೂರು ಮಾಡಬೇಕು. ಜೊತೆಗೆ ಹಳೆಯ ಪಿಂಚಣಿ ವ್ಯವಸ್ಥೆಯನ್ನೇ ಮುಂದು ವರೆಸುವಂತೆ ಮುಂದಿನ ಎರಡು ತಿಂಗಳು ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸ ಲಾಗುವುದು ಎಂದು ಅವರು ಹೇಳಿದರು.
ರಾಜ್ಯ ಸರ್ಕಾರಿ ನೌಕರರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಲಸದ ವೇಳೆ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರಿ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆ ಒತ್ತಾಯಿಸುವುದು ನ್ಯಾಯಯುತವಾಗಿದೆ. ಕೇಂದ್ರದ ವೇತನ ಶ್ರೇಣಿ ನೀಡುವಂತೆ ಹಲವು ವರ್ಷಗಳಿಂದ ಒತ್ತಾಯಿಸಲಾಗುತ್ತಿದೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿ ಸಿದರು. ಪ್ರಮುಖ ಎರಡು ಬೇಡಿಕೆ ಈಡೇರಿಕೆ ಗಾಗಿ ಸರ್ಕಾರಿ ನೌಕರರು ರಾಜ್ಯ ಸರ್ಕಾ ರದ ಗಮನ ಸೆಳೆಯಲು ವಿವಿಧ ಕಾರ್ಯ ಕ್ರಮ ರೂಪಿಸಲಾಗುತ್ತಿದ್ದಾರೆ. ಇದನ್ನು ಪ್ರತಿಭಟನೆ ಎಂದು ಹೇಳಲು ಸಾಧ್ಯವಿಲ್ಲ. ತಮ್ಮದೇ ಆದ ವಿವಿಧ ಸ್ವರೂಪದಲ್ಲಿ ಸರ್ಕಾರಕ್ಕೆ ತಮ್ಮ ಸಂಕಷ್ಟವನ್ನು ಗಮನಕ್ಕೆ ತರುವ ಪ್ರಯತ್ನ ಮಾಡಲಾಗುತ್ತಿದೆ. ನಮಗೆ ರಾಜ್ಯ ಸರ್ಕಾರದ ಮೇಲೆ ವಿಶ್ವಾಸ ವಿದೆ. ನಮ್ಮ ಬೇಡಿಕೆ ಈಡೇರಿಸುತ್ತದೆ ಎಂಬ ನಿರೀಕ್ಷೆಯಲ್ಲಿದ್ದೇವೆ ಎಂದರು.

ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಜೆ.ಗೋವಿಂದರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇವಣ್ಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಶ್ರೀನಿವಾಸ್, ಖಜಾಂಚಿ ಆರ್.ಶ್ರೀನಿವಾಸ್, ಮೈಸೂರು ಜಿಲ್ಲಾ ಘಟಕದ ಗೌರವಾಧ್ಯಕ್ಷ ಎನ್.ಉದಯ್ ಕುಮಾರ್, ಜಿಲ್ಲಾ ಖಜಾಂಚಿ ಸಿ.ಎಸ್. ರಮೇಶ್, ಹಿರಿಯ ಉಪಾಧ್ಯಕ್ಷ ಎಸ್.ಜೆ.ರಮೇಶ್, ಕಾರ್ಯಾಧ್ಯಕ್ಷ ಡಿ.ಆನಂದ, ಜಿಲ್ಲಾ ಕಾರ್ಯದರ್ಶಿ ರಘು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Translate »