ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿ: ಸವಾರ ಸಾವು
ಮಂಡ್ಯ

ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿ: ಸವಾರ ಸಾವು

April 8, 2020

ಮದ್ದೂರು, ಏ.7- ಬೈಕ್‍ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಪಟ್ಟಣದ ಮೈಸೂರು- ಬೆಂಗಳೂರು ರಸ್ತೆಯಲ್ಲಿ ಮಂಗಳವಾರ ನಡೆದಿದೆ. ತಾಲೂಕಿನ ವೈದ್ಯನಾಥಪುರ ಗ್ರಾಮದ ವೆಂಕಟಯ್ಯ(70) ಮೃತಪಟ್ಟ ಸವಾರ. ವೆಂಕಟಯ್ಯ ಸ್ವ ಗ್ರಾಮದಿಂದ ಶಿವಪುರಕ್ಕೆ ಹೋಗುತ್ತಿದ್ದಾಗ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರ ಗಾಯಗೊಂಡು ರಸ್ತೆಯಲ್ಲಿ ಅಶ್ವಸ್ಥಗೊಂಡಿದ್ದ ಅವರನ್ನು ಸ್ಥಳೀಯರು ಮದ್ದೂರು ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ವೆಂಕಟಯ್ಯ ಮೃತಪಟ್ಟಿದ್ದಾರೆ. ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Translate »