ಅಪರಿಚಿತ ಮಹಿಳೆ ಶವ ಪತ್ತೆ
ಕೊಡಗು

ಅಪರಿಚಿತ ಮಹಿಳೆ ಶವ ಪತ್ತೆ

January 28, 2019

ವಿರಾಜಪೇಟೆ: ವಿರಾಜಪೇಟೆ ಸಮೀಪದ ಅರಮೇರಿ ಗ್ರಾಮದ ಭತ್ತದ ಗದ್ದೆಯ ಬಳಿಯಲ್ಲಿ ಕೊಳೆತ ಸ್ಥಿತಿಯಲ್ಲಿ ರುವ ಮಹಿಳೆಯ ಶವ ಪತ್ತೆಯಾಗಿದ್ದು, ಸುಮಾರು 15 ದಿನಗಳ ಹಿಂದೆ ಯಾರೊ ಕೊಲೆ ಮಾಡಿ ಶವವನ್ನು ಎಸೆದು ಹೋಗಿರಬ ಹುದೆಂದು ಪೊಲೀಸರು ಶಂಕಿಸಿದ್ದಾರೆ.

ಗ್ರಾಮದ ಸುತ್ತಮುತ್ತ ಕೆಟ್ಟ ವಾಸನೆ ಬರು ತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯರು ಸ್ಥಳಕ್ಕೆ ತೆರಳಿದಾಗ ಶವ ಪತ್ತೆಯಾಗಿದೆ. ಕೂಡಲೇ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ ಹಿನ್ನೆಲೆ ಪೊಲೀಸರು ಸ್ಥಳ ಪರಿಶೀ ಲನೆ ನಡೆಸಿದ್ದಾರೆ. ನಾಯಿ ನರಿಗಳು ಕಚ್ಚಿ ತಿಂದಿರುವುದರಿಂದ ಗುರುತು ಸಿಗದ ಕಾರಣ ಪೊಲೀಸ್ ವರಿಷ್ಠಾಧಿಕಾರಿ ಸುಮನ ಡಿ.ಪಣ್ಣೇ ಕರ್ ಅವರ ಮುಂದಾಳತ್ವದಲ್ಲಿ ಸ್ಥಳದಲ್ಲಿಯೇ ಶವ ಪರೀಕ್ಷೆ ನಡೆಸಲಾಯಿತು. ಸರ್ಕಲ್ ಇನ್ಸ್ ಪ್ಯೆಕ್ಟರ್ ಕುಮಾರ್ ಆರಾಧ್ಯ ಅವರಿಗೆ ತನಿಖೆ ನಡೆಸುವಂತೆ ಪೊಲೀಸ್ ವರಿಷ್ಠಾಧಿಕಾರಿ ಅದೇ ಶಿಸಿದ್ದಾರೆ. ಗ್ರಾಮಾಂತರ ಠಾಣಾಧಿಕಾರಿ ಸುರೇಶ್ ಬೋಪಣ್ಣ ಅವರು ಕೊಲೆ ಪ್ರಕರಣ ದಾಖ ಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Translate »