ಅನ್‍ಲಾಕ್ 5 ನವೆಂಬರ್ 30ರವರೆಗೆ ವಿಸ್ತರಣೆ  ಹೊಸ ಮಾರ್ಗಸೂಚಿ ಇಲ್ಲ: ಕೇಂದ್ರ
ಮೈಸೂರು

ಅನ್‍ಲಾಕ್ 5 ನವೆಂಬರ್ 30ರವರೆಗೆ ವಿಸ್ತರಣೆ ಹೊಸ ಮಾರ್ಗಸೂಚಿ ಇಲ್ಲ: ಕೇಂದ್ರ

October 28, 2020

ಬೆಂಗಳೂರು, ಅ.27- ಕೊರೊನಾ ನಿಯಂತ್ರಣ ಸಂಬಂಧ ಜಾರಿಗೊಳಿಸಿದ ನಿರ್ಬಂಧಗಳನ್ನು ಈಗಾಗಲೇ ಸಾಕಷ್ಟು ಸಡಿಲ ಗೊಳಿಸಲಾಗಿದ್ದು, ನವೆಂಬರ್ ತಿಂಗಳಿಗೆ ಹೊಸ ಮಾರ್ಗಸೂಚಿ ಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಈಗ ಜಾರಿಯಲ್ಲಿರುವ ಅನ್‍ಲಾಕ್ 5 ಅನ್ನು ನ.30ರವರೆಗೆ ವಿಸ್ತರಿಸಲಾಗಿದ್ದು, ಯಾವುದೇ ಹೊಸ ಮಾರ್ಗಸೂಚಿಯನ್ನು ಹೊರಡಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೊಸ ಆದೇಶದಲ್ಲಿ ತಿಳಿಸಿದೆ.

ದೇಶಾದ್ಯಂತ ಕಂಟೇನ್ಮೆಂಟ್ ಝೋನ್‍ಗಳಲ್ಲಿ ಲಾಕ್‍ಡೌನ್ ನವೆಂಬರ್ 30ರ ತನಕ ಮುಂದುವರೆಯಲಿದೆ. ಉಳಿದ ಪ್ರದೇಶಗಳಲ್ಲಿ ಅನ್‍ಲಾಕ್ 5.0 ಮಾರ್ಗಸೂಚಿಯಲ್ಲಿ ಪ್ರಕಟಿಸಿದ ನಿಯಮಗಳು ಜಾರಿಯಲ್ಲಿರುತ್ತವೆ.ಅನ್‍ಲಾಕ್ 5 ಮಾರ್ಗ ಸೂಚಿಯಲ್ಲಿ ಚಿತ್ರಮಂದಿರ, ಈಜುಕೊಳ, ಕ್ರೀಡಾ ತರಬೇತಿ, ಮನೋರಂಜನಾ ಪಾರ್ಕ್‍ಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು. ಚಿತ್ರಮಂದಿರಲ್ಲಿ ಶೇ. 50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಬೇಕು ಎಂದು ತಿಳಿಸಲಾಗಿತ್ತು. ಇದು ನವೆಂಬರ್ 30ರ ತನಕ ಮುಂದುವರೆಯಲಿದೆ.

 

 

 

Translate »