ಪ್ರಾಥಮಿಕ ಶಾಲೆ ಮಕ್ಕಳಿಗೆ ಅನಗತ್ಯ ಆನ್‍ಲೈನ್ ಶಿಕ್ಷಣ: ಕ್ರಮಕ್ಕೆ ಸಚಿವ ಸುರೇಶ್‍ಕುಮಾರ್ ಸೂಚನೆ

ಬೆಂಗಳೂರು, ಮೇ 12- ಲಾಕ್‍ಡೌನ್ ಹಿನ್ನೆಲೆಯಲ್ಲಿ ಆನ್‍ಲೈನ್ ಶಿಕ್ಷಣದ ಹೆಸರಿನಲ್ಲಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಶಿಕ್ಷಣ ಸಂಸ್ಥೆಗಳು ಶೋಷಣೆ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಆನ್‍ಲೈನ್ ಮೂಲಕ ಶಿಕ್ಷಣದ ಅವಶ್ಯ ಕತೆ ಇಲ್ಲದಿರುವ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆಗಳಿಗೂ ಸಹ ಆನ್‍ಲೈನ್ ಮೂಲಕ ಶಿಕ್ಷಣ ನೀಡುತ್ತೇವೆಂದು ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳು ಮತ್ತು ಪೆÇೀಷಕರನ್ನು ಶೋಷಿಸುತ್ತಿರುವುದು ತಿಳಿದುಬಂದಿದೆ. ಆನ್‍ಲೈನ್ ತರಗತಿಗಳನ್ನು ನಡೆಸಬೇಕಾದಲ್ಲಿ ಯಾವುದೇ ವೈಜ್ಞಾನಿಕ ಆಧಾರಗಳಿಲ್ಲದೇ ಮಕ್ಕಳ ಅನವಶ್ಯಕ ಶೋಷಣೆಗೆ ಮುಂದಾಗುವುದು ಸರಿಯಲ್ಲ. ತಾಂತ್ರಿಕ ಪರಿಕರಗಳನ್ನು ಉಪಯೋಗಿಸು ವಾಗ ಉಂಟಾಗಬಹುದಾದ ಆರೋಗ್ಯದ ಅಡ್ಡ ಪರಿಣಾಮ ಗಳನ್ನು ಗಮನದಲ್ಲಿಟ್ಟುಕೊಂಡು ಆನ್‍ಲೈನ್ ಶಿಕ್ಷಣವನ್ನು ನೀಡಬೇಕಾಗುತ್ತದೆ.

ಅವೈಜ್ಞಾನಿಕವಾಗಿ ದಿನವಿಡೀ ಆನ್‍ಲೈನ್ ತರಗತಿಗಳನ್ನು ನಡೆಸು ವಂತಹ ಕ್ರಮಗಳಿಗೆ ಕಡಿವಾಣ ಹಾಕಲು ಕೂಡಲೇ ಕಟ್ಟನಿಟ್ಟಾದ ಸುತ್ತೋಲೆ ಹೊರಡಿ ಸಬೇಕೆಂದು ಸಚಿವರು ಇಲಾಖೆ ಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಶಿಕ್ಷಕರಿಗೆ ಪಿಪಿಇ ಕಿಟ್‍ಗಳ ಅಗತ್ಯವಿದೆ: ಕೊರೊನಾ ಪತ್ತೆ ಹಚ್ಚಲು ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರಿಗೆ ಪಿಪಿಇ ಕಿಟ್ಸ್‍ಗಳ ಅಗತ್ಯವಿದೆ ಎಂದು ಸುರೇಶ್ ಕುಮಾರ್, ಮುಖ್ಯಕಾರ್ಯ ದರ್ಶಿಗೆ ಪತ್ರ ಬರೆದಿದ್ದಾರೆ.

ಶಿಕ್ಷಣ ಇಲಾಖೆಗೆ ಪ್ರತ್ಯೇಕ ಟಿವಿ ವಾಹಿನಿ ಶುರು
ತರಗತಿಗಳ ಪುನರ್ ಮನನ, ತಜ್ಞ ಶಿಕ್ಷಕರಿಂದ ಉಪನ್ಯಾಸ ಸೇರಿ ಶೈಕ್ಷಣಿಕ ಚಟುವಟಿಕೆ ನಡೆಸಲು ಶಿಕ್ಷಣ ಇಲಾಖೆಗೆ ಪ್ರತ್ಯೇಕ ಟಿವಿ ವಾಹಿನಿ ಆರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು, ದೂರದರ್ಶನದ ಹೆಚ್ಚುವರಿ ನಿರ್ದೇಶಕ ರಾಜ ಕುಮಾರ್ ಉಪಾಧ್ಯಾಯ ಅವರೊಂದಿಗೆ ಸೋಮವಾರ ಚರ್ಚೆ ನಡೆಸಿದ ಸುರೇಶ್ ಕುಮಾರ್ ಅವರು, ಟಿವಿ ಚಾನೆಲ್ ತೆರೆಯಲು ಕ್ರಿಯಾ ಯೋಜನೆ ಕುರಿತು ವರದಿ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದಾರೆ.