ನಗರಾಭಿವೃದ್ಧಿ ಇಲಾಖೆ `ಏಕಗವಾಕ್ಷಿ’ ಯೋಜನೆಗೆ ಡಿ.15ರಂದು ಸಿಎಂ ಚಾಲನೆ: ಯು.ಟಿ.ಖಾದರ್
ಮೈಸೂರು

ನಗರಾಭಿವೃದ್ಧಿ ಇಲಾಖೆ `ಏಕಗವಾಕ್ಷಿ’ ಯೋಜನೆಗೆ ಡಿ.15ರಂದು ಸಿಎಂ ಚಾಲನೆ: ಯು.ಟಿ.ಖಾದರ್

December 7, 2018

ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವು ಸುಧಾರಣೆ ಗಳನ್ನು ತರಲಾಗಿದ್ದು, ಏಕಗವಾಕ್ಷಿ ವ್ಯವಸ್ಥೆ ಮೂಲಕ ಸಾರ್ವಜನಿಕ ರಿಗೆ ಸೌಲಭ್ಯ ಒದಗಿಸುವ ಯೋಜನೆಯನ್ನು ಡಿ.15ರಂದು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಕ್ರೆಡಾಯ್ ಸಂಸ್ಥೆ ವತಿಯಿಂದ ಗುರುವಾರ ನಡೆದ ನವಭಾರತ ಸಮ್ಮೇಳನ ದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ನಗರಾಭಿವೃದ್ಧಿ ಇಲಾಖೆಯಿಂದ ವಿವಿಧ ಸೇವೆ ಪಡೆಯಲು ಪರದಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿತ್ತು. ಇದನ್ನು ಸೂಕ್ಷ್ಮವಾಗಿ ಗಮನಿಸಿ ಅರ್ಜಿ ಹಿಡಿದುಕೊಂಡು ಜನರು ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಡೆಗಟ್ಟುವುದಕ್ಕಾಗಿ ಇಲಾಖೆಯಲ್ಲಿ ಮಹತ್ತರ ಬದಲಾವಣೆಯನ್ನು ತರಲಾಗಿದೆ. ಏಕಗವಾಕ್ಷಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಮನೆ ಮತ್ತು ಬೃಹತ್ ಕಟ್ಟಡ ನಿರ್ಮಿಸುವ ಲೈಸನ್ಸ್ ಆನ್‍ಲೈನ್ ಮೂಲಕವೇ ಪಡೆಯಬಹುದಾಗಿದೆ ಎಂದರು.

ರಾಜ್ಯದಲ್ಲಿ 4  ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಬಡವರಿಗೆ ಜಿ+10 ಮಾದರಿಯಲ್ಲಿ 1 ಲP್ಷÀ ಮನೆ ನಿರ್ಮಿಸುವ ಕಾರ್ಯಕ್ರಮ ರೂಪಿಸಿದ್ದರು. ಆ ಯೋಜನೆಯನ್ನು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮುಂದುವರಿಸಿದ್ದಾರೆ. ಡಿ.26ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು. ಬೆಂಗಳೂರಿನಲ್ಲಿ ಲಕ್ಷ ಮನೆ ನಿರ್ಮಿಸುವ ಯೋಜನೆಗೆ ಜನವರಿಯಲ್ಲಿ ಟೆಂಡರ್ ಕರೆಯಲಾಗುತ್ತಿದ್ದು, ಗೃಹ ನಿರ್ಮಾಣ ಸಂಸ್ಥೆಗಳು ಪಾಲ್ಗೊಳ್ಳ ಬೇಕು. ತಮ್ಮ ಶಕ್ತಿಯನುಸಾರ 5ರಿಂದ 10 ಸಾವಿರ ಮನೆಗಳನ್ನು ನಿಗದಿತ ಅವಧಿಯಲ್ಲಿ ನಿರ್ಮಿಸಿಕೊಟ್ಟರೆ ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ವಿತರಿಸಬಹುದಾಗಿದೆ ಎಂದರು.

Translate »