ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಬಳಸಿ; ಕೋವಿಡ್ ಬೂಸ್ಟರ್ ಡೋಸ್ ತೆಗೆದುಕೊಳ್ಳಿ
News

ಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಬಳಸಿ; ಕೋವಿಡ್ ಬೂಸ್ಟರ್ ಡೋಸ್ ತೆಗೆದುಕೊಳ್ಳಿ

December 22, 2022

ನವದೆಹಲಿ: ಭಾರತದ ಅರ್ಹ ಜನಸಂಖ್ಯೆಯ ಶೇ.27 ರಿಂದ 28ರಷ್ಟು ಜನರು ಮಾತ್ರ ಕೋವಿಡ್-19ರ ಬೂಸ್ಟರ್‍ಡೋಸ್ ಅನ್ನು ತೆಗೆದುಕೊಂಡಿದ್ದಾರೆ ಮತ್ತು ಜನನಿಬಿಡ ಸ್ಥಳಗಳಲ್ಲಿ ಜಾಗ್ರತೆ ವಹಿಸಲು ಮತ್ತು ಮಾಸ್ಕ್ ಧರಿಸಲು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ.ವಿಕೆ ಪೌಲ್ ಬುಧವಾರ ಸಲಹೆ ನೀಡಿದ್ದಾರೆ. ಜನರು ಭಯಭೀತ ರಾಗಬೇಡಿ ಎಂದ ಅವರು, ಅಂತರರಾಷ್ಟ್ರೀಯ ವಿಮಾನ ಪ್ರಯಾಣದ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ‘ಜನಸಂದಣಿ ಇರುವ ಪ್ರದೇಶಗಳಲ್ಲಿ ಜನರು ಮಾಸ್ಕ್ ಧರಿಸಬೇಕು. ಹೃದಯ ರೋಗ, ಬಿಪಿ, ಉಸಿರಾಟದ ತೊಂದರೆ ಇರುವವರು ಅಥವಾ ವಯಸ್ಸಾದವರು ವಿಶೇಷವಾಗಿ ಇದನ್ನು ಅನುಸರಿಸಬೇಕು’ ಎಂದು ಪೌಲ್ ಹೇಳಿದರು. ಜಾಗತಿಕವಾಗಿ, ವಿಶೇಷವಾಗಿ ಚೀನಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ ಕೇಂದ್ರ ಆರೋಗ್ಯ ಸಚಿವ ಮನ್‍ಸುಖ್ ಮಾಂಡವಿಯಾ ಅವರು ನಡೆಸಿದ ಪರಿಶೀಲನಾ ಸಭೆಯ ನಂತರ ಪೌಲ್ ಈ ಹೇಳಿಕೆಗಳನ್ನು ನೀಡಿದ್ದಾರೆ. ‘ಕೆಲವು ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ದೃಷ್ಟಿಯಿಂದ, ನಾನು ಇಂದು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ. ಕೋವಿಡ್ ಇನ್ನೂ ಮುಗಿದಿಲ್ಲ. ಎಲ್ಲರು ಎಚ್ಚರದಿಂದ ಇರುವಂತೆ ಮತ್ತು ಕಣ್ಗಾವಲು ಬಲಪಡಿ ಸುವಂತೆ ಸೂಚಿಸಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಸಿದ್ಧರಿ ದ್ದೇವೆ’ ಎಂದು ಮಾಂಡವಿಯಾ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಆರೋಗ್ಯ ಕಾರ್ಯದರ್ಶಿಗಳು, ಔಷಧೀಯ ಇಲಾಖೆ, ಜೈವಿಕ ತಂತ್ರಜ್ಞಾನ ಇಲಾಖೆ, ಆಯುಷ್, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಹಾನಿರ್ದೇಶಕ ರಾಜೀವ್ ಬಹ್ಲ್, ಪೌಲ್ ಮತ್ತು ಇಮ್ಯುನೈಸೇಶನ್ ಕುರಿತಾದ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‍ಟಿಎಜಿಐ) ಅಧ್ಯಕ್ಷ ಡಾ ಎನ್.ಕೆ. ಅರೋರಾ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಮೈಸೂರು, ಡಿ. 21(ಆರ್‍ಕೆ)-ಮುಡಾ ಅಧ್ಯಕ್ಷರಾಗಿ ಬಿಜೆಪಿ ಹಿರಿಯ ಮುಖಂಡ ಹಾಗೂ ಹೆಸರಾಂತ ಉದ್ಯಮಿ ಯಶಸ್ವಿ ಎಸ್.ಸೋಮಶೇಖರ್ ಇಂದು ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.

ಹೆಚ್.ವಿ. ರಾಜೀವ್ ಅವರ ಅಧಿಕಾರ ಅಂತ್ಯಗೊಂಡ ನಂತರ ಕಳೆದ 5 ತಿಂಗಳಿಂದ ಖಾಲಿ ಇದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷ ಸ್ಥಾನಕ್ಕೆ ಮಂಗಳ ವಾರ ಯಶಸ್ವಿ ಎಸ್.ಸೋಮಶೇಖರ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರ ಡಿಸಿತ್ತು. ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಶಸ್ವಿ ಸೋಮಶೇಖರ್, ನನ್ನ ಮೇಲೆ ವಿಶ್ವಾಸವಿಟ್ಟು ಸರ್ಕಾರ ನನ್ನನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಿಸಿದೆ. ಮೈಸೂರು ನಗರದ ಸಮಗ್ರ ಅಭಿವೃದ್ಧಿಗಾಗಿ ಲಭ್ಯವಿರುವ ಕಡಿಮೆ ಅವಧಿ ಯಲ್ಲಿ ಉತ್ತಮವಾಗಿ ಕೆಲಸ ಮಾಡಿ, ಸರ್ಕಾ ರಕ್ಕೆ ಒಳ್ಳೆಯ ಹೆಸರು ತರಲು ಯತ್ನಿಸು ತ್ತೇನೆ ಎಂದರು. ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಗಿಸಿ ಪ್ರಸ್ತಾಪಿತ ಹೊಸ ಯೋಜನೆಗಳಿಗೆ ಸರ್ಕಾರದ ಹಂತದಲ್ಲಿ ಪ್ರಕ್ರಿಯೆ ನಡೆಸಿ ಅನುಮೋದನೆ ಪಡೆದುಕೊಂಡು ಕಾರ್ಯ ಗತ ಮಾಡುತ್ತೇವೆ ಎಂದು ಅವರು ಇದೇ ಸಂದರ್ಭ ನುಡಿದರು. ಕಬಿನಿ ಕುಡಿಯುವ ನೀರು ಸರಬರಾಜು, ಸಿಎ ನಿವೇಶನಗಳ ಹಂಚಿಕೆ, ಗುಂಪು ಮನೆ ನಿರ್ಮಾಣ, ಪೆರಿ ಫೆರಲ್ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಒತ್ತು ಕೊಟ್ಟು ನನ್ನ ಅಧಿಕಾರಾವಧಿಯಲ್ಲಿ ಉತ್ತಮ ಕೆಲಸ ಮಾಡುವ ಮೂಲಕ ಮೈಸೂರು ನಗರ ಮತ್ತು ಸರ್ಕಾರಕ್ಕೆ ಒಳ್ಳೆಯ ಹೆಸರು ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿಯೂ ಸೋಮಶೇಖರ್ ತಿಳಿಸಿದರು. ನನ್ನ ಮೇಲಿನ ವಿಶ್ವಾಸ, ನಂಬಿಕೆ ಯಿಂದ ಮುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಹಕರಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರು, ಶಾಸಕರು ಹಾಗೂ ಬಿಜೆಪಿ ಎಲ್ಲಾ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಡಾ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಯತ್ನಿಸುವುದಾಗಿ ತಿಳಿಸಿದರು. ಶಾಸಕ ಎಲ್.ನಾಗೇಂದ್ರ, ಮಾಜಿ ವಿಧಾನಪರಿಷತ್ ಸದಸ್ಯರಾದ ಡಿ.ಮಾದೇಗೌಡ, ತೋಂಟ ದಾರ್ಯ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣ ಗೌಡ, ಮುಡಾ ಆಯುಕ್ತ ಜಿ.ಟಿ.ದಿನೇಶ್‍ಕುಮಾರ್, ಸೂಪ ರಿಂಟೆಂಡಿಂಗ್ ಇಂಜಿನಿಯರ್ ಚೆನ್ನಕೇಶವ ಸೇರಿದಂತೆ ಇತರರು ನೂತನ ಅಧ್ಯಕ್ಷರಿಗೆ ಪುಷ್ಪಗುಚ್ಛ ನೀಡಿ ಶುಭ ಕೋರಿದರು.

Translate »