ನಾಳೆ ವಿ.ಶ್ರೀನಿವಾಸಪ್ರಸಾದ್ ಹುಟ್ಟುಹಬ್ಬ
ಮೈಸೂರು

ನಾಳೆ ವಿ.ಶ್ರೀನಿವಾಸಪ್ರಸಾದ್ ಹುಟ್ಟುಹಬ್ಬ

August 5, 2018

ಮೈಸೂರು: ಹಿರಿಯ ರಾಜಕೀಯ ಮುತ್ಸದಿ, ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್ ಅವರ ಹುಟ್ಟುಹಬ್ಬವನ್ನು ವಿವಿಧ ಸಾಮಾಜಿಕ ಸೇವಾ ಕಾರ್ಯಗಳೊಂದಿಗೆ ಅವರ ಅಭಿಮಾನಿಗಳ ಬಳಗವು ಆ.6ರಂದು ಹಮ್ಮಿಕೊಂಡಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ಹೂಟಗಳ್ಳಿಯಲ್ಲಿರುವ ಒಡನಾಡಿ ಸೇವಾ ಸಂಸ್ಥೆಯಲ್ಲಿ ಪ್ರಸಾದ್ ಅವರ 71ನೇ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. 10 ಗಂಟೆಗೆ ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ಆಯ್ದ 20 ಮೂತ್ರಪಿಂಡ ರೋಗಿಗಳಿಗೆ ಉಚಿತವಾಗಿ ಡಯಾಲಿಸಿಸ್ ಮಾಡಿಸಲಾಗುತ್ತದೆ. 10.30ಕ್ಕೆ ಮೈಸೂರು ತಾಲೂಕು ಚಿಕ್ಕ ಹರದನಹಳ್ಳಿಯಲ್ಲಿರುವ ಛಾಯಾದೇವಿ ಅನಾಥಾಶ್ರಮದಲ್ಲಿ 11 ಗಂಟೆಗೆ ಅಶೋಕಪುರಂನ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮತ್ತು ಅಲ್ಲಿನ 13ನೇ ಕ್ರಾಸ್‍ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀನಿವಾಸಪ್ರಸಾದ್ ಹುಟ್ಟುಹಬ್ಬ ಆಚರಿಸಲಾಗುವುದು ಎಂದು ವಿ.ಶ್ರೀನಿವಾಸಪ್ರಸಾದ್ ಅಭಿಮಾನಿಗಳ ಬಳಗದ ಪ್ರಧಾನ ಕಾರ್ಯದರ್ಶಿ ಡಿ.ವೆಂಕಟರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »