ಇಂದು ವಿ.ಶ್ರೀನಿವಾಸ್ ಪ್ರಸಾದ್ ಉಮೇದುವಾರಿಕೆ ಸಲ್ಲಿಕೆ
ಚಾಮರಾಜನಗರ

ಇಂದು ವಿ.ಶ್ರೀನಿವಾಸ್ ಪ್ರಸಾದ್ ಉಮೇದುವಾರಿಕೆ ಸಲ್ಲಿಕೆ

March 25, 2019

ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ನಾಳೆ(ಮಾ.26) ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ತಿಳಿಸಿದರು.

ನಗರದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಾಹ್ನ 12.15ರಿಂದ 1 ಗಂಟೆಯೊಳಗೆ ಪ್ರಸಾದ್ ಅವರು ನಗರದ ಜಿಲ್ಲಾಡಳಿತ ಭವನದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು.

ನಾಮಪತ್ರ ಸಲ್ಲಿಸುವ ಮುನ್ನ ಬೆಳಿಗ್ಗೆ 11 ಗಂಟೆಗೆ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುವುದು. ನಂತರ ಪಕ್ಷದ ಮುಖಂಡರು, ಕಾರ್ಯ ಕರ್ತರು, ಹಿತೈಷಿಗಳೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾ ಡಳಿತ ಭವನಕ್ಕೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು. ಈ ವೇಳೆ ಪಕ್ಷದ ರಾಜ್ಯ ನಾಯಕರು ಆಗಮಿಸುವÀ ನಿರೀಕ್ಷೆ ಇದೆ ಎಂದರು.

ಚಾಮರಾಜನಗರ ಕ್ಷೇತ್ರದ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರಗಳಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ಸುಮಾರು 7ರಿಂದ 8 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಪಕ್ಷದ ಎಲ್ಲಾ ಪದಾಧಿಕಾರಿಗಳು, ಮುಖಂಡರು ಆಗಮಿಸುವಂತೆ ಮಲ್ಲಿಕಾರ್ಜುನಪ್ಪ ಮನವಿ ಮಾಡಿದರು.

ಸಮಾವೇಶ: ನಾಮಪತ್ರ ಸಲ್ಲಿಸಿದ ಬಳಿಕ ನಗರದ ತಹಶೀಲ್ದಾರ್ ಕಚೇರಿಯ ಪಕ್ಕದ ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ಆಯೋಜಿಸಲಾಗಿದೆ ಎಂದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನೂರೊಂದು ಶೆಟ್ಟಿ, ನಾಗೇಂದ್ರ ಸ್ವಾಮಿ, ಮುಖಂಡರಾದ ಸೋಮ ನಾಯಕ್, ಪಾಪು ಸುದ್ದಿಗೋಷ್ಠಿಯಲ್ಲಿದ್ದರು.

Translate »