ಸರ್ಕಾರಿ ಫಾರ್ಮಸಿ ಅಧಿಕಾರಿಗಳ ವಿವಿಧ ಬೇಡಿಕೆ ಈಡೇರಿಸಲು ಶ್ರಮಿಸುವೆ
ಮೈಸೂರು

ಸರ್ಕಾರಿ ಫಾರ್ಮಸಿ ಅಧಿಕಾರಿಗಳ ವಿವಿಧ ಬೇಡಿಕೆ ಈಡೇರಿಸಲು ಶ್ರಮಿಸುವೆ

March 14, 2022

ಮೈಸೂರು,ಮಾ.೧೩(ಪಿಎಂ)- ಕೋವಿಡ್ ಪ್ರೋತ್ಸಾಹಧನ ನೀಡಬೇಕು ಎಂಬ ಬೇಡಿಕೆ ಸೇರಿದಂತೆ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ವಿವಿಧ ಬೇಡಿಕೆಗಳು ನ್ಯಾಯ ಯುತವಾಗಿದ್ದು, ಸರ್ಕಾರದ ಗಮನಕ್ಕೆ ತಂದು ಶೀಘ್ರವೇ ಬೇಡಿಕೆಗಳನ್ನು ಈಡೇ ರಿಸಲು ಶ್ರಮಿಸುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾ ಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಮೈಸೂರಿನ ಖಾಸಗಿ ಹೋಟೆಲ್ ಸಭಾಂ ಗಣದಲ್ಲಿ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ೬೦ನೇ ವರ್ಷದ ರಾಷ್ಟಿçÃಯ ಫಾರ್ಮಸಿ ಸಪ್ತಾಹ ಕಾರ್ಯಕ್ರಮ ಉದ್ಘಾ ಟಿಸಿ ಅವರು ಮಾತನಾಡಿದರು.

ಸರ್ಕಾರಿ ಫಾರ್ಮಸಿ ಅಧಿಕಾರಿಗಳು ಕೋವಿಡ್ ತೀವ್ರವಾಗಿದ್ದ ಸಂದರ್ಭದಲ್ಲಿ ಮುಂಚೂಣ ಯಲ್ಲಿ ನಿಂತು ಕಾರ್ಯನಿರ್ವ ಹಿಸಿದ್ದಾರೆ. ಹಾಗಾಗಿ ಇಂತಹ ಮಹತ್ತರ ಸೇವೆಗೆ ಪ್ರತಿಫಲವಾಗಿ ಸರ್ಕಾರ ಪ್ರೋತ್ಸಾಹ ಧನ ನೀಡಬೇಕೆಂಬ ಬೇಡಿಕೆ ನ್ಯಾಯಯುತ ವಾಗಿದೆ. ಈ ಸಂಬAಧ ಸರ್ಕಾರದ ಗಮನ ಸೆಳೆಯುವುದಾಗಿ ಹೇಳಿದರು.
ಕಳೆದ ೧೮ ವರ್ಷಗಳಿಂದ ವೃಂದ ಮತ್ತು ನೇಮಕಾತಿ ನೆನೆಗುದಿಗೆ ಬಿದ್ದಿರುವ ಹಿನ್ನೆಲೆ ಯಲ್ಲಿ ಬಡ್ತಿಯಿಂದ ವಂಚಿತರಾಗುತ್ತಿದ್ದೇವೆ ಎಂಬ ನಿಮ್ಮ ಅಳಲು ಅರ್ಥವಾಗುತ್ತದೆ. ಈ ಬಗ್ಗೆಯೂ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಿದ್ದೇನೆ. ಕೇಂದ್ರ ಸರ್ಕಾರಿ ನೌಕರರ ವೇತನಕ್ಕೆ ಸರಿಸಮಾನವಾಗಿ ರಾಜ್ಯ ಸರ್ಕಾರಿ ನೌಕರರಿಗೂ ವೇತನ ನೀಡಬೇಕು. ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ವಾರ್ಷಾಂತ್ಯದೊಳಗೆ ಈ ಬೇಡಿಕೆ ಈಡೇ ರಿಕೆಗೆ ಪ್ರಯತ್ನಿಸಲಾಗುವುದು. ಮಾಜಿ ಸಿಎಂ ಯಡಿಯೂರಪ್ಪ ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸರ್ಕಾರದೊಂದಿಗೆ ಮಾತ ನಾಡುವ ಭರವಸೆ ನೀಡಿದ್ದಾರೆ ಎಂದರು.

ಇದಕ್ಕೂ ಮುನ್ನ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ರಾಜ್ಯಾ ಧ್ಯಕ್ಷ ವಿ.ಪ್ರಭಾಕರ್ ಮಾತನಾಡಿ, ವೃಂದ ಮತ್ತು ನೇಮಕಾತಿ ಪ್ರಕ್ರಿಯೆ ನೆನೆಗುದಿಗೆ ಬಿದ್ದಿರುವ ಹಿನ್ನೆಲೆಯಲ್ಲಿ ಸರ್ಕಾರಿ ಫಾರ್ಮಸಿ ಅಧಿಕಾರಿಗಳು ಬಡ್ತಿಯಿಂದ ವಂಚಿತರಾ ಗುತ್ತಿದ್ದಾರೆ. ಸರ್ಕಾರ ಶೀಘ್ರವೇ ವೃಂದ ಮತ್ತು ನೇಮಕಾತಿ ಪ್ರಕ್ರಿಯೆಗೆ ಕ್ರಮ ವಹಿಸ ಬೇಕೆಂದು ಒತ್ತಾಯಿಸಿದರು.
ಈ ವೇಳೆ ೨೦೨೦-೨೧ನೇ ಸಾಲಿನ ಎಸ್‌ಎಸ್ ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಸಂಘದ ಸದಸ್ಯರ ಮಕ್ಕಳಿಗೆ ತಲಾ ಸಾವಿರ ರೂ. ಪ್ರೋತ್ಸಾಹಧನದೊಂದಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಜೊತೆಗೆ ನಿವೃತ್ತಿ ಹೊಂದಿದ ೬ ಮಂದಿ ಫಾರ್ಮಸಿ ಅಧಿಕಾರಿ ಗಳನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ನಿರ್ದೇ ಶಕಿ ಡಾ.ಎಂ.ಇAದುಮತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಮೈಸೂರು ವಿಭಾಗೀಯ ಸಹ ನಿರ್ದೇಶಕ ಡಾ.ಎಂ. ಆರ್.ಉದಯ್‌ಕುಮಾರ್, ಡಿಹೆಚ್‌ಓ ಡಾ.ಕೆ.ಹೆಚ್.ಪ್ರಸಾದ್, ಚಾಮರಾಜನಗರ ಡಿಹೆಚ್‌ಓ ಡಾ.ಕೆ.ಎಂ.ವಿಶ್ವೇಶ್ವರಯ್ಯ, ಜಿಲ್ಲಾ ಔಷಧ ಉಗ್ರಾಣದ ಹಿರಿಯ ಫಾರ್ಮಸಿ ಅಧಿಕಾರಿ ವಿ.ವಿಶುಕುಮಾರ್, ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಶಾಖೆ ಅಧ್ಯಕ್ಷ ಉಮೇಶ್‌ಬಾಬು, ಗೌರವಾಧ್ಯಕ್ಷ ಮಂಜು ನಾಥ್, ಜೆ.ಗೋವಿಂದರಾಜು ಇದ್ದರು.

Translate »