ಪೌರತ್ವ ಕಾಯ್ದೆ ವಿರೋಧಿಸಿ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ಮೈಸೂರು, ಡಿ.17(ಎಂಕೆ)- ದೆಹಲಿಯ ಜಾಮಿಯ ಮಿಲಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರ ಹಲ್ಲೆ ಹಾಗೂ ಕೇಂದ್ರ ಸರ್ಕಾರ ಜಾರಿಗೊಳಿಸಿ ರುವ ಎನ್‍ಆರ್‍ಸಿ ಮತ್ತು ಸಿಎಎ ಕಾಯ್ದೆ ಯನ್ನು ವಿರೋಧಿಸಿ ವಿವಿಧ ವಿದ್ಯಾರ್ಥಿ ಸಂಘಟನೆ ಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಮಾನಸಗಂಗೋತ್ರಿ ಆವರಣ ದಲ್ಲಿ ಜಮಾಯಿಸಿದ ಸಂಶೋಧಕರ ಸಂಘ, ದಲಿತ ವಿದ್ಯಾರ್ಥಿ ಒಕ್ಕೂಟ, ಎಐಡಿಎಸ್‍ಒ ವಿದ್ಯಾರ್ಥಿ ಸಂಘಟನೆಯ ನೂರಾರು ವಿದ್ಯಾರ್ಥಿಗಳು ಪಂಜುಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರುದ್ಧವಾಗಿರುವ ಎನ್‍ಆರ್‍ಸಿ ಮತ್ತು ಸಿಎಎ ಕಾಯ್ದೆಯನ್ನು ಕೂಡಲೇ ಹಿಂಪಡೆ ಯಬೇಕು ಎಂದು ಒತ್ತಾಯಿಸಿದರು. ಅಲ್ಲದೆ ಕೇಂದ್ರ ಬಿಜೆಪಿ ಸರ್ಕಾರದ ಆಡಳಿತ ಹಾಗೂ ದೆಹಲಿಯ ಜಾಮಿಯ ಮಿಲಿಯಾ ಇಸ್ಲಾ ಮಿಯಾ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಹಲ್ಲೆ ಕುರಿತು ಕಿರು ನಾಟಕ ಪ್ರದರ್ಶನ ಮಾಡಿದರು.

ಕೇಂದ್ರ ಸರ್ಕಾರ ತನ್ನ ಆಡಳಿತದ ವೈಫ ಲ್ಯತೆಗಳನ್ನು ಮರೆಮಾಚಲು ದೇಶದ ಅಭಿ ವೃದ್ಧಿಗೆ ಸಹಕಾರಿಯಾಗದ ಕಾಯ್ದೆಗಳನ್ನು ತಂದು ಸಮುದಾಯಗಳ ನಡುವೆ ದಂಗೆ ಎಬ್ಬಿಸುವ ಕೆಲಸ ಮಾಡುತ್ತಿದೆ ಎಂದು ಕಿಡಿ ಕಾರಿದರು.ಸಂಶೋಧಕರ ಸಂಘದ ಅಧ್ಯಕ್ಷ ಎಸ್.ಮರಿ ದೇವಯ್ಯ, ಎಐಡಿಎಸ್‍ಒ ವಿದ್ಯಾರ್ಥಿ ಸಂಘ ಟನೆಯ ಚಂದ್ರಕಲಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.