ಸಂಸದ ವಿ.ಶ್ರೀನಿವಾಸ ಪ್ರಸಾದ್ ಭೇಟಿ ಮಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್
ಮೈಸೂರು

ಸಂಸದ ವಿ.ಶ್ರೀನಿವಾಸ ಪ್ರಸಾದ್ ಭೇಟಿ ಮಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್

May 25, 2020

ಮೈಸೂರು, ಮೇ 24(ಪಿಎಂ)- ಚಾಮ ರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ಹಾಗೂ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಭಾನುವಾರ ಭೇಟಿ ಮಾಡಿದರು.

ಮೈಸೂರಿನ ಜಯಲಕ್ಷ್ಮೀಪುರಂ ನಲ್ಲಿರುವ ವಿ.ಶ್ರೀನಿವಾಸ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿದ ವಾಟಾಳ್ ನಾಗ ರಾಜ್, ಶ್ರೀನಿವಾಸ ಪ್ರಸಾದ್ ಅವರ ಆರೋಗ್ಯ ವಿಚಾರಿಸಿದರು. ಅಲ್ಲದೆ, ಉಭಯ ನಾಯ ಕರು ಕುಶಲೋಪರಿ ನಡೆಸಿ ತಮ್ಮ ಹಿಂದಿನ ಸ್ನೇಹದ ದಿನಗಳನ್ನು ಮೆಲಕು ಹಾಕಿದರು.

ಬಳಿಕ `ಮೈಸೂರು ಮಿತ್ರ’ನೊಂದಿಗೆ ಮಾತ ನಾಡಿದ ವಾಟಾಳ್ ನಾಗರಾಜ್, ಶ್ರೀನಿ ವಾಸ್ ಪ್ರಸಾದ್ ಅವರನ್ನು ಭೇಟಿ ಮಾಡಿ ಬಹಳ ದಿನಗಳಾಗಿದ್ದವು. ಅವರ ಆರೋಗ್ಯ ವಿಚಾರಿಸುವ ಹಿನ್ನೆಲೆಯಲ್ಲಿ ಇಂದು ಭೇಟಿ ಮಾಡಿದ್ದೆ. ನಾನು ಮತ್ತು ಅವರು ಸ್ನೇಹಿ ತರು. ಸುಮಾರು 55 ವರ್ಷಗಳ ಸ್ನೇಹ ನಮ್ಮದು. ಅವರು ಚುನಾವಣೆಗೆ ಸ್ಪರ್ಧಿ ಸಿದ ಸಂದರ್ಭಗಳಲ್ಲಿ ಬೆಂಬಲವಾಗಿ ನಿಂತಿದ್ದು ಮಾತ್ರವಲ್ಲದೆ, ಅವರ ಪರವಾಗಿ ಭಾಷಣ ಮಾಡಿದ್ದೇನೆ ಎಂದು ತಿಳಿಸಿದರು.

20 ಲಕ್ಷ ಕೋಟಿ ರೂ. ಪ್ಯಾಕೇಜ್ ಹಂಚಿಕೆ ವಿಧಾನ ಸರಿಯಲ್ಲ
ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್
ಮೈಸೂರು, ಮೇ 24(ಪಿಎಂ)- ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಸ್ವಾಗತಾರ್ಹ. ಆದರೆ ಆಯಾಯ ರಾಜ್ಯ ಸರ್ಕಾರಗಳ ಮೂಲಕ ಪ್ಯಾಕೇಜ್ ಹಂಚಿಕೆ ಮಾಡದೇ ಕೇಂದ್ರ ಸರ್ಕಾರವೇ ನೇರವಾಗಿ ಹಂಚಿಕೆ ಮಾಡಿದ ಕ್ರಮ ಒಕ್ಕೂಟ ವ್ಯವಸ್ಥೆಯಲ್ಲಿ ಸರಿಯಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.

ಮೈಸೂರಿನಲ್ಲಿ ಭಾನುವಾರ `ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಅನ್ನು ರಾಜ್ಯ ಸರ್ಕಾರಗಳ ಮೂಲಕ ಹಂಚಿಕೆ ಮಾಡುವ ವ್ಯವಸ್ಥೆ ಮಾಡಬೇಕಿತ್ತು. ಆದರೆ ಕೇಂದ್ರವೇ ನೇರವಾಗಿ ಹಂಚಿಕೆ ಮಾಡಲು ಹೊರಟಿದೆ. ಇದು ಪ್ರಜಾಪ್ರಭುತ್ವ ಹಾಗೂ ದೇಶದ ಒಕ್ಕೂಟದ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರಗಳನ್ನು ಕಡೆಗಣಿಸಿದಂತೆ ಆಗಿದೆ ಎಂದರು.

ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕಾರ್ಮಿಕ ವರ್ಗ ಸಾಕಷ್ಟು ಸಂಕಷ್ಟ ಎದುರಿ ಸುವಂತಾಗಿದೆ. ಆದರೆ ಅವರ ಸಮಸ್ಯೆ ಬಗೆಹರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೂಲಕ ಪ್ರಾಮಾಣಿಕ ಪ್ರಯತ್ನ ಆಗಲಿಲ್ಲ. ಕರ್ನಾಟಕದಲ್ಲೂ ಲಕ್ಷಾಂತರ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಅವರ ಸಮಸ್ಯೆ ಬಗೆಹರಿಸಲು ಪರಿಣಾಮಕಾರಿ ಕ್ರಮ ಅಗತ್ಯವಿತ್ತು. ಆದರೆ ಅದಾಗಲಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕರ ಬಗ್ಗೆ ಪ್ರಾಮಾಣಿಕ ಚಿಂತನೆ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Translate »