ತ್ವರಿತವಾಗಿ ನೆರೆ ಪರಿಹಾರ ಕೈಗೊಳ್ಳುವಂತೆ ಆಗ್ರಹಿಸಿ ವಾಟಾಳ್ ಪ್ರತಿಭಟನೆ
ಮೈಸೂರು

ತ್ವರಿತವಾಗಿ ನೆರೆ ಪರಿಹಾರ ಕೈಗೊಳ್ಳುವಂತೆ ಆಗ್ರಹಿಸಿ ವಾಟಾಳ್ ಪ್ರತಿಭಟನೆ

August 12, 2019

ಮೈಸೂರು,ಆ.11(ಎಂಟಿವೈ)-ಮೈಸೂರು-ಚಾಮರಾಜನಗರ ಜಿಲ್ಲೆ ಸೇರಿ ದಂತೆ ನೆರೆ ಪೀಡಿತ ಜಿಲ್ಲೆಗಳ ಸಂತ್ರಸ್ತರಿಗೆ ಸಮರೋಪಾದಿಯಲ್ಲಿ ನೆರವು ಕಾರ್ಯ ಕೈಗೊಳ್ಳುವಂತೆ ಒತ್ತಾಯಿಸಿ ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟಿಸಿದರು.

ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಮೈಸೂರಿಗೆ ಆಗಮಿ ಸಿದ ವಾಟಾಳ್ ನಾಗರಾಜ್ ರೈಲ್ವೆ ನಿಲ್ದಾ ಣದ ಮುಂಭಾಗದಲ್ಲಿ ಸ್ಥಳೀಯರೊಂದಿಗೆ ಸೇರಿ ಪ್ರತಿಭಟಿಸಿ, ನೆರೆ ಸಂತ್ರಸ್ತರಿಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳು ನೆರೆ ಹಾವಳಿಗೆ ತುತ್ತಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಬೇಕು. ನೆರೆ ಯಿಂದಾಗಿ ಮೃತಪಟ್ಟಿರುವ ಕುಟುಂಬ ಗಳಿಗೆ ತಲಾ 25 ಲಕ್ಷ ರೂಪಾಯಿ ಪರಿ ಹಾರ ನೀಡಬೇಕು. ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿ ನೆರೆ ಪೀಡಿತ ಪ್ರದೇಶದ ಸಮೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.

ಉದ್ದೇಶಿತ ಮೇಕೆದಾಟು ಯೋಜನೆಗೆ ಶೀಘ್ರವೇ ಚಾಲನೆ ನೀಡಬೇಕು. ಈ ಯೋಜನೆ ಜಾರಿಗೆ ಬಂದರೆ ಪ್ರವಾಹದ ಪರಿಸ್ಥಿತಿಯನ್ನು ಸ್ವಲ್ಪ ಮಟ್ಟಿಗೆ ನಿಯಂತ್ರಿಸ ಬಹುದು. ಇದಕ್ಕೆ ತಮಿಳುನಾಡು ವಿರೋಧ ವ್ಯಕ್ತಪಡಿಸಬಾರದು. ನೆರೆ ಹಾವಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರ ನೀಡಲು 50 ಕೋಟಿ ರೂ. ಪರಿಹಾರ ನಿಧಿ ಮೀಸಲಿಡಬೇಕು. ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಯೋಜನೆಯನ್ನು ಪ್ರಕಟಿಸ ಬೇಕು. ನವಕರ್ನಾಟಕ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ತ್ವರಿತ ಗತಿಯಾಗಿ ಸಚಿವ ಸಂಪುಟ ರಚಿಸಿ ಸಚಿವರಿಗೆ ಜವಾಬ್ದಾರಿ ವಹಿಸಬೇಕು ಎಂದು ಒತ್ತಾಯಿಸಿದರು.

Translate »