ವಿಸಿ ಫಾರಂ ಕೃಷಿ ವಿವಿ ವಿದ್ಯಾರ್ಥಿಗಳ ಮುಷ್ಕರ
ಮಂಡ್ಯ

ವಿಸಿ ಫಾರಂ ಕೃಷಿ ವಿವಿ ವಿದ್ಯಾರ್ಥಿಗಳ ಮುಷ್ಕರ

June 18, 2018

ಮಂಡ್ಯ: ಖಾಸಗಿ ಕೃಷಿ ಕಾಲೇಜುಗಳಿಗೆ ಅಫಿಲೇಷನ್ ನೀಡುವು ದನ್ನು ಕೂಡಲೇ ತಡೆಗಟ್ಟಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿಸಿ ಫಾರಂ ಕೃಷಿ ವಿವಿ ವಿದ್ಯಾರ್ಥಿ ಗಳು ಮುಷ್ಕರ ನಡೆಸಿದರು.

ವಿಸಿ ಫಾರಂ ಆವರಣದಲ್ಲಿ ಮುಷ್ಕರ ಆರಂಭಿಸಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವಿರೋಧಿ ನಿಲುವು ಅನುಸರಿಸುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿದರು.

ಕೃಷಿ ವಿಶ್ವವಿದ್ಯಾಲಯಗಳ ಕಾಯಿದೆಗೆ 2010ರಲ್ಲಿ ತಿದ್ದುಪಡಿ ತಂದು ಖಾಸಗಿ ಕೃಷಿ ವಿವಿ ಕಾಲೇಜುಗಳನ್ನು ಪ್ರಾರಂಭಿಸಲು ಅನುಮತಿ ನೀಡಿರುವುದರಿಂದ ಖಾಸಗಿ ಕಾಲೇಜು ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆ ವಿಭಾಗದಲ್ಲಿ ಹಲವಾರು ನ್ಯೂನತೆ ಗಳು ಕಂಡು ಬಂದಿವೆ. ಪರಿಣಾಮವಾಗಿ ಸರ್ಕಾರಿ ಕೃಷಿ ವಿವಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರಿದೆ. ನಿರು ದ್ಯೋಗದಂತಹ ಸಮಸ್ಯೆ ಎದುರಾಗಿದೆ. ಗುಣಮಟ್ಟದ ಶಿಕ್ಷಣವಿಲ್ಲದೇ ವಿದ್ಯಾರ್ಥಿ ಗಳ ಜೀವನ ಹಾಳಾಗುತ್ತಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ರೈ ಟೆಕ್ನಾಲಜಿ ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಶಾಶ್ವತವಾಗಿ ಅನರ್ಹ ಗೊಳಿಸಬೇಕು. ಖಾಸಗಿ ಕಂಪನಿಗಳ ಕಳಪೆ ಗುಣಮಟ್ಟದ ಬೀಜ, ಗೊಬ್ಬರ ಮತ್ತು ಕೀಟನಾಶಕಗಳ ಬಳಕೆಗೆ ಅನು ಮತಿ ನೀಡಲಾಗುತ್ತಿದೆ. ಇದರಿಂದ ರೈತರಿಗೂ ಭಾರಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.ಪ್ರತಿಭಟನೆಯಲ್ಲಿ ಚರಣ್, ದರ್ಶನ್, ಭರತ್, ಬಾಲಾಜಿ ಸೇರಿದಂತೆ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರು.

Translate »