ಮೈಸೂರಲ್ಲಿ ವೀರ್ ಸಾವರ್ಕರ್ ರಥಯಾತ್ರೆಗೆ  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ
ಮೈಸೂರು

ಮೈಸೂರಲ್ಲಿ ವೀರ್ ಸಾವರ್ಕರ್ ರಥಯಾತ್ರೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಚಾಲನೆ

August 24, 2022

ಮೈಸೂರು, ಆ. 23(ಆರ್‍ಕೆ)- ಮೈಸೂರಿ ನಲ್ಲಿ ಇಂದಿನಿಂದ ಆರಂಭವಾದ ಸ್ವಾತಂತ್ರ್ಯ ಸೇನಾನಿ ವೀರ್ ಸಾವರ್ಕರ್ ರಥಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ವಿಧ್ಯುಕ್ತ ಚಾಲನೆ ನೀಡಿದರು.

ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಿರುವ 8 ದಿನಗಳ ಈ ರಥ ಯಾತ್ರೆಗೆ ಮೈಸೂರಿನ ಅರಮನೆ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಹಸಿರು ನಿಶಾನೆ ತೋರಿದ ಯಡಿಯೂರಪ್ಪ, ಅದೇ ವೇಳೆ ಸಾವರ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರ ವೇರಿಸಿದರು. ಈ ಸಂದರ್ಭ ಜಿಲ್ಲಾ ಉಸ್ತು ವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಕೆ.ಸಿ.ನಾರಾಯಣಗೌಡ, ಸಾವರ್ಕರ್ ಪ್ರತಿಷ್ಠಾನದ ಅಧ್ಯಕ್ಷೆ ಯಶಸ್ವಿನಿ, ರಥಯಾತ್ರೆ ಸಂಚಾಲಕ ರಜತ್, ಮೃಗಾಲಯ ಪ್ರಾಧಿ ಕಾರದ ಮಾಜಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು. ಸಿದ್ದಲಿಂಗಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.

ರಥಯಾತ್ರೆ ಸಾಗುವ ಮಾರ್ಗದಲ್ಲಿ ಆಯಾ ಠಾಣಾ ವ್ಯಾಪ್ತಿಯ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮೊಬೈಲ್ ಕಮಾಂಡ್ ಸೆಂಟರ್ ವಾಹನದೊಂದಿಗೆ ಸಿಸಿ ಕ್ಯಾಮರಾ ಕಣ್ಗಾವಲು ಮೂಲಕ ಕಟ್ಟೆಚ್ಚರ ವಹಿಸಲಾಗಿತ್ತು.

ರಥಯಾತ್ರೆ ಆರಂಭಕ್ಕೂ ಮುನ್ನ ನೂರಾರು ಮಂದಿ ಆರ್‍ಎಸ್‍ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಜಮಾಯಿಸಿ `ವೀರ್ ಸಾವರ್ಕರ್-ನಾನು ಸಾವರ್ಕರ್’ ಜಯ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ಬೆದರಿಕೆ ಹಿನ್ನೆಲೆಯಲ್ಲಿ ರಥಯಾತ್ರೆಗೆ ಚಾಲನೆ ಸಂದರ್ಭ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಿ, ಭಾರೀ ಭದ್ರತೆ ಒದಗಿಸಲಾಗಿತ್ತು. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಮಾಜಿ ಸಚಿವ ಸಿ.ಹೆಚ್. ವಿಜಯಶಂಕರ್, ಮೈಲ್ಯಾಕ್ ಅಧ್ಯಕ್ಷ ಕೌಟಿಲ್ಯ ರಘು, ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ಮಾಜಿ ಶಾಸಕ ಇ. ಮಾರುತಿರಾವ್ ಪವಾರ್, ಮುಖಂಡರಾದ ಅರುಣ್‍ಕುಮಾರ್‍ಗೌಡ, ಪ್ರಭಾಕರರಾವ್ ಸಿಂಧೆ, ಶಿವಕುಮಾರ್, ಪಾಲಿಕೆ ಬಿಜೆಪಿ ಸದಸ್ಯರು, ವಿವಿಧ ಬ್ಲಾಕ್ ಪದಾಧಿಕಾರಿಗಳು ರಥಯಾತ್ರೆಗೆ ಚಾಲನೆ ನೀಡುವ ವೇಳೆ ಉಪಸ್ಥಿತರಿದ್ದರು.

Translate »