ವೀರಶೈವ-ಲಿಂಗಾಯತ ಎರಡೂ ಒಂದೇ, ಇಬ್ಬಾಗ ಮಾಡುವುದು ಬೇಡ
ಚಾಮರಾಜನಗರ

ವೀರಶೈವ-ಲಿಂಗಾಯತ ಎರಡೂ ಒಂದೇ, ಇಬ್ಬಾಗ ಮಾಡುವುದು ಬೇಡ

November 11, 2018

ವೀರಶೈವ-ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ ಈಶ್ವರಖಂಡ್ರೆ ಅಭಿಮತ
ಚಾಮರಾಜನಗರ: ವೀರಶೈವ ಲಿಂಗಾಯತ ಎರಡೂ ಒಂದೇ. ಇಬ್ಬಾಗ ಮಾಡುವುದು ಬೇಡ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷರೂ ಆದ ಈಶ್ವರಖಂಡ್ರೆ ಅಭಿಪ್ರಾಯಪಟ್ಟರು.

ಜಿಲ್ಲಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಗರದ ಶಿವಕುಮಾರ ಸ್ವಾಮಿ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವೀರಶೈವ ಲಿಂಗಾಯತರು ಈ ಬಗ್ಗೆ ಗೊಂದಲ ಮಾಡಿಕೊಳ್ಳಬಾರದು. ವೀರಶೈವ ಲಿಂಗಾ ಯತ ಧರ್ಮ ಒಂದೇ ಆಗಿದ್ದು, ಅದನ್ನು ಇಬ್ಬಾಗ ಮಾಡದೇ ಎಲ್ಲರೂ ಒಟ್ಟಾಗಿ ಹೊಂದಾಣಿಕೆಯಿಂದ ಬಾಳಬೇಕು ಎಂದು ಕರೆ ನೀಡಿದರು. ವೀರಶೈವ ಲಿಂಗಾಯತ ಸಮಾಜಕ್ಕೆ ಸಾಮಾಜಿಕ ಸ್ಥಾನಮಾನ ನೀಡಲಾಗಿದ್ದು, ವೀರಶೈವ ಸಮಾಜ ಎಂಬುದನ್ನು ಯಾರೊಬ್ಬರು ಮರೆಯಬಾರದು ಎಂದ ಅವರು, ಧರ್ಮದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು. ಪ್ರತಿಯೊಬ್ಬರು ಸ್ವಾಮೀಜಿಗಳಿಗೆ ಗೌರವ ನೀಡುವುದನ್ನು ರೂಢಿಸಿಕೊಳ್ಳಬೇಕು ಎಂದರು.

ಮುಡಕನಪುರ ಮಠಾಧ್ಯಕ್ಷ ಶ್ರೀಷಡಕ್ಷರ ದೇಶಿಕೇಂದ್ರ ಸ್ವಾಮೀಜಿ ಮುಖ್ಯ ಭಾಷಣ ಮಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಆತ್ಮವಿಶ್ವಾಸದಿಂದ ಸಕಾರಾತ್ಮಕ ಮನೋಭಾವದೊಂದಿಗೆ ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ನಡೆಸುವ ಮೂಲಕ ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳು ವಂತೆ ಸಲಹೆ ನೀಡಿದರು. ಇದೇ ವೇಳೆ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಯಲ್ಲಿ ಶೇ.90ಕ್ಕಿಂತ ಅಧಿಕ ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಹಾಗೂ ಹಿರಿಯ ಭಜನಾ ಕಲಾವಿದರನ್ನು ಸನ್ಮಾನಿಸಲಾಯಿತು.

ವಾಟಾಳು ಮಠದ ಡಾ.ಸಿದ್ದಲಿಂಗಶಿವಾಚಾರ್ಯ ಸ್ವಾಮೀಜಿ, ಹರವೆ ಮಠದ ಶ್ರೀಸರ್ಪಭೂಷಣ ಸ್ವಾಮೀಜಿ, ಚಾ.ನಗರ ಮಠದ ಚನ್ನಬಸವ ಸ್ವಾಮೀಜಿ, ಮರಿಯಾಲ ಮಠದ ಶ್ರೀಇಮ್ಮಡಿ ಮುರುಘರಾಜೇಂದ್ರ ಸ್ವಾಮೀಜಿ, ಶಾಸಕ ಸಿ.ಎಸ್.ನಿರಂಜನ್ ಕುಮಾರ್, ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಮಹಾಸಭಾ ಜಿಲ್ಲಾಧ್ಯಕ್ಷ ಕೊಡಸೋಗೆ ಶಿವಬಸಪ್ಪ, ಪ್ರಧಾನ ಕಾರ್ಯದರ್ಶಿ ನಟೇಶ್, ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಎಸ್.ನಾಗರಾಜಪ್ಪ, ತಾಲೂಕು ಅಧ್ಯಕ್ಷ ಹೆಚ್.ಎಸ್. ನಂಜಪ್ಪ, ಕಾವುದವಾಡಿ ಗುರು, ಡಿ.ಪುಟ್ಟಮಲ್ಲಪ್ಪ, ವೈ.ಎನ್.ಪ್ರಕಾಶ್, ಉಪಾಧ್ಯಕ್ಷ ತೋಟೇಶ್, ನಿರ್ದೇಶಕರಾದ ಪಿ.ಮರಿಸ್ವಾಮಿ, ಕೆ.ಎಂ.ಮಲ್ಲೇಶಪ್ಪ, ರತ್ನಮ್ಮ, ನಾಗಶ್ರೀ ಪ್ರತಾಪ್, ಪ್ರಧಾನ ಕಾರ್ಯದರ್ಶಿಗಳಾದ ಮಹದೇವಸ್ವಾಮಿ, ಪುಟ್ಟಣ್ಣ, ಜಿ.ವೀರ ಭದ್ರಸ್ವಾಮಿ,

Translate »