ಕೆ.ಆರ್.ನಗರ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಹೊಸಹಳ್ಳಿ ವೆಂಕಟೇಶ್ ಪದಗ್ರಹಣ
ಮೈಸೂರು

ಕೆ.ಆರ್.ನಗರ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಹೊಸಹಳ್ಳಿ ವೆಂಕಟೇಶ್ ಪದಗ್ರಹಣ

October 16, 2018

ಕೆ.ಆರ್.ನಗರ: ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿಕೊಂಡು ಅಧಿಕಾರಕ್ಕಾಗಿ ತಿಕ್ಕಾಟದಲ್ಲಿ ತೊಡಗಿ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷರೂ ಆದ ಮಾಜಿ ಸಚಿವ ಶಿವಣ್ಣ ಹೇಳಿದರು. ಪಟ್ಟಣದ ಅಕ್ಷತ ಹಾಲ್‍ನಲ್ಲಿ ಆಯೋಜಿಸಿದ್ದ ಬಿಜೆಪಿ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಹೊಸಹಳ್ಳಿ ವೆಂಕಟೇಶ್ ಪದಗ್ರಹಣ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನ.3ರಂದು ನಡೆಯುವ ಉಪ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ವರಿಷ್ಠರ ವಿರುದ್ಧ ಕಾರ್ಯಕರ್ತರು ಈಗಾಗಲೇ ಟಿಕೆಟ್ ಆಯ್ಕೆ ವಿಚಾರದಲ್ಲಿ ಗೊಂದಲವುಂಟಾಗಿದ್ದು, ಇದರ ಲಾಭದಿಂದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿ ದರು. ರಾಜ್ಯದಲ್ಲಿ ಅಧಿಕಾರಕ್ಕಾಗಿ ಮೈತ್ರಿಯಾಗಿದ್ದು, ಗ್ರಾಮಾಂತರ ಮಟ್ಟದಲ್ಲಿ ಕಾರ್ಯಕರ್ತರ ಅಪಸ್ವರವಿದೆ. ಅಲ್ಲದೆ ಮುಂದಿನ ಲೋಕಸಭಾ ಚುನಾವಣೆ ಸಮೀಪದಲ್ಲಿ ಉಪ ಚುನಾವಣೆಯು ದಿಕ್ಸೂಚಿಯಾಗಲಿದೆ. ವಿಶ್ವಮಟ್ಟದಲ್ಲಿ ಭಾರತವನ್ನು ನಂ.1 ಸ್ಥಾನಕ್ಕೆ ತಲುಪಿಸಲು ಪ್ರಧಾನಿ ಮೋದಿಜಿಯವರ ಅಭಿವೃದ್ಧಿ ಕೆಲಸಗಳನ್ನು ದೇಶದ ಜನತೆ ನೋಡುತ್ತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಾರೀ ಬಹುಮತದೊಂದಿಗೆ ಮೋದಿಯವರು ಮತ್ತೆ ಪ್ರಧಾನಿಯಾಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದರು.

ಅಲ್ಲದೆ ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಪಕ್ಷ ಸಂಘಟನೆಗೆ ಒಬ್ಬ ಪ್ರಬಲ ವ್ಯಕ್ತಿ ಅವಶ್ಯಕವಿತ್ತು ಹೊಸಹಳ್ಳಿ ವೆಂಕಟೇಶ್‍ರವರು ಸಮಾಜಮುಖಿ ಕೆಲಸಕಾರ್ಯಗಳನ್ನು ನಡೆಸಿಕೊಂಡು ಬಂದಿರುವುದು ತಾಲೂಕಿನ ಜನತೆ ನೋಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿತ್ತು. ರಾಜಕೀಯ ಬದಲಾವಣೆಯಿಂದಾಗಿ ಅವರಿಗೆ ಟಿಕೆಟ್ ಕೈತಪ್ಪಿತ್ತು. ಅವರಿಗೆ ಟಿಕೆಟ್ ನೀಡಿದ್ದರೆ ಪಕ್ಷಕ್ಕೆ ಅನುಕೂಲವಾಗುತ್ತಿತ್ತು ಎಂದರು.

ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಡಾ.ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಿದ್ದು ಎಲ್ಲಾ ಕಾರ್ಯಕರ್ತರು ಅವರ ಗೆಲುವಿಗೆ ಕೆಲಸ ಮಾಡಬೇಕೆಂದು ಕರೆ ನೀಡಿದರು. ತಾಲೂಕಿನಲ್ಲಿ ಬಿಜೆಪಿ ಶಕ್ತಿ ತಳಮಟ್ಟದಿಂದ ಬಲಪಡಿಸಿ ಮುಂದಿನ ಲೋಕಸಭಾ ಚುನಾ ವಣೆಯಲ್ಲಿ ಮೋದಿಯವರನ್ನು ಪ್ರಧಾನಿಯಾಗುವುದು ಶತಸಿದ್ದ ಎಂದು ಹೇಳಿದರು. ಕೆ.ಆರ್.ನಗರ ತಾಲೂಕಿನಲ್ಲಿ ನೂತನ ಅಧ್ಯಕ್ಷರಾಗಿರುವ ಹೊಸಹಳ್ಳಿ ವೆಂಕಟೇಶ್ ಎಲ್ಲಾ ಕಾರ್ಯಕರ್ತರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಶಕ್ತಿ ಇದೆ ಎಂದರು.

ತಾಲೂಕಿನ ನೂತನ ಅಧ್ಯಕ್ಷರಾದ ಹೊಸಹಳ್ಳಿ ವೆಂಕಟೇಶ್ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರ ಆದೇಶದ ಮೇರೆಗೆ ನನಗೆ ತಾಲೂಕಿನ ಜವಬ್ದಾರಿ ಸ್ಥಾನ ನೀಡಿದ್ದು, ತಾಲೂಕಿನ ಎಲ್ಲಾ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸಮಾಡುವುದಾಗಿ ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಾಮಾಂತರ ಬಿಜೆಪಿ ಕಾರ್ಯದರ್ಶಿಬಾಲಕೃಷ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಿರ್ಲೆಶ್ರೀನಿವಾಸ್‍ಗೌಡ, ಕೆ.ಆರ್.ನಗರ ವಿಧಾನ ಸಭಾ ಕ್ಷೇತ್ರ ವೀಕ್ಷಕರಾದ ಜಾಬಗೆರೆರಮೇಶ್, ತಾಲೂಕು ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನಪ್ಪ, ಜಿಲ್ಲಾ ಬಿಜೆಪಿ ಮೋರ್ಚಾ ಉಪಾಧ್ಯಕ್ಷ ಹೆಚ್.ಪಿ.ಗೋಪಾಲ್, ಪ್ರಭಾಕರ್‍ಜೈನ್, ಪ್ರತಾಪ್, ಕಗ್ಗಂಡಿಕುಮಾರ್, ಕುಪ್ಪೆಪ್ರಕಾಶ್, ಅಶೋಕ್, ನಂಜುಂಡ, ಉಮಾಶಂಕರ್(ಗುಂಡ), ಅನಿಲ್, ಚಿರಾಗ್ ಇದ್ದರು.

Translate »