ಕನ್ನಡದ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ನಿಧನ
ಮೈಸೂರು

ಕನ್ನಡದ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ನಿಧನ

February 17, 2022

ಧಾರವಾಡ, ಫೆ. ೧೬- ಕನ್ನಡದ ಖ್ಯಾತ ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರು ಇಂದು ನಿಧನರಾದರು. ಅವರಿಗೆ ೯೩ ವರ್ಷ ವಯಸ್ಸಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಣವಿ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸ ಲಾಗುತ್ತಿತ್ತು. ಆದರೆ ಬುಧವಾರ ಬೆಳಗ್ಗೆ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಮೊದಲು ಕೋವಿಡ್‌ನಿಂದ ಸಂಪೂರ್ಣ ಗುಣ ಮುಖರಾಗಿದ್ದರು. ಜೂನ್ ೨೮,೧೯೨೮ ರಂದು ಧಾರವಾಡ ಜಿಲ್ಲೆಯ ಹೊಂಬಳ ದಲ್ಲಿ ಚೆನ್ನವೀರ ಕಣವಿಯವರು ಜನಿ ಸಿದ್ದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿ ಪಡೆದರು. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಸಂಗ ಪ್ರಸರಣ ಮತ್ತು ಪ್ರಕಟಣಾ ವಿಭಾಗದ ಕಾರ್ಯದರ್ಶಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ಭಾವಜೀವಿ,

ಸಮನ್ವಯ ಕವಿ ಎಂದೇ ಅವರು ಖ್ಯಾತಿ ಗಳಿಸಿದ್ದರು. ೧೯೪೯ರಲ್ಲಿ ಡಾ.ಚನ್ನವೀರ ಕಣವಿ ಮೊದಲ ಕವಲ ಸಂಕಲನ ಕಾವ್ಯಾಕ್ಷಿ ಬಿಡುಗಡೆಗೊಂಡಿತು. ಭಾವಜೀವಿ, ಆಕಾಶ ಬುಟ್ಟಿ, ಮಣ ್ಣನ ಮೆರವಣ ಗೆ, ನೆಲಮುಗಿಲು, ಜೀವಧ್ವನಿ ಮುಂತಾದ ಕವನ ಸಂಕಲನಗಳನ್ನು ಅವರು ರಚಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಅನಕೃ ಪ್ರತಿಷ್ಠಾನ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಹಾಸನ ದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹಂಪಿ ವಿಶ್ವವಿದ್ಯಾಲಯ ನಾಡೋಜ ಪ್ರಶಸ್ತಿ ನೀಡಿ ಗೌರವಿಸಿದೆ. ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ. ಕಣವಿ ಅವರ ಅಂತ್ಯಕ್ರಿಯೆ ಇಂದು ಸಂಜೆ ಗೋವಾ ರಸ್ತೆಯ ಸೃಷ್ಟಿ ಫಾರ್ಮ್ನಲ್ಲಿ ನೆರವೇರಿತು ಎಂದು ಅವರ ಪುತ್ರ ಪ್ರಿಯದರ್ಶಿ ತಿಳಿಸಿದ್ದಾರೆ.

Translate »