ವಿದ್ಯಾಗಮ: ಪರ-ವಿರೋಧ ಅಭಿಮತ
ಮೈಸೂರು

ವಿದ್ಯಾಗಮ: ಪರ-ವಿರೋಧ ಅಭಿಮತ

October 11, 2020

ಮೈಸೂರು, ಅ.10(ಎಸ್‍ಪಿಎನ್)- ಕೊರೊನಾದಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿ ಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ `ವಿದ್ಯಾಗಮ’ ಯೋಜನೆ ಉತ್ತಮವಾಗಿದೆ ಎಂದು ಕರ್ನಾಟಕ ಜಾನಪದ ವಿವಿ ಸಿಂಡಿ ಕೇಟ್ ಸದಸ್ಯ ಕೆ.ವಸಂತಕುಮಾರ್ ಅಭಿ ಪ್ರಾಯಪಟ್ಟಿದ್ದಾರೆ. ಈ ಯೋಜನೆ ವೈಜ್ಞಾ ನಿಕವಾಗಿ ಅನುಷ್ಠಾನಗೊಳಿಸಲು ಪೋಷಕರು ಮತ್ತು ಸಾರ್ವಜನಿಕರ ಸಹಕಾರ ಅಗತ್ಯ. ಆದರೆ, ಕೆಲವರು ಅಪಪ್ರಚಾರ ಮಾಡಿ ಯೋಜನೆಯನ್ನೇ ನಿಲ್ಲಿಸಲು ಯತ್ನಿಸುತ್ತಿರುವುದು ಬೇಸರದ ಸಂಗತಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾಗಮ ಯೋಜನೆಯ ಅನುಷ್ಠಾನದ ಜವಾಬ್ದಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಶಿಕ್ಷಣ ಅಧಿಕಾರಿಗಳಿಗೆ ನೀಡಿದೆ. ಶಿಕ್ಷಕರನ್ನು ವಿಶ್ವಾಸಕ್ಕೆ ಪಡೆದು ಯೋಜನೆಯ ವೈಜ್ಞಾನಿಕವಾಗಿ ಅನುಷ್ಠಾನಕ್ಕೆ ಆಸಕ್ತಿ ತೋರದ ಅಧಿಕಾರಿಗಳು ಮಾಧ್ಯಮಗಳ ಮೂಲಕ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ವಿದ್ಯಾಗಮ ಸ್ಥಗಿತಕ್ಕೆ ಆಗ್ರಹ: ವಿದ್ಯಾಗಮ ಯೋಜನೆಯ ಶೈಕ್ಷಣಿಕ ಚಟುವಟಿಕೆಗಳನ್ನು ಕೂಡಲೇ ಸ್ಥಗಿತಗೊಳಿಸುವಂತೆ ಜೆಡಿಎಸ್ ಮೈಸೂರು ಜಿಲ್ಲಾ ಘಟಕ ವಕ್ತಾರ ದೂರ ಮಂಜುನಾಥ್ ಆಗ್ರಹಿಸಿದ್ದಾರೆ. ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗುತ್ತಿದ್ದು, ಮಕ್ಕಳಿಗೂ ಕೊರೊನಾ ತಗುಲುವ ಅಪಾಯವಿದೆ ಎಂದು ಪ್ರಕಟಣೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

Translate »