ಜಾಬ್ ಚಾರ್ಟ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಲೆಕ್ಕಿಗರ ಪ್ರತಿಭಟನೆ
ಮೈಸೂರು

ಜಾಬ್ ಚಾರ್ಟ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಲೆಕ್ಕಿಗರ ಪ್ರತಿಭಟನೆ

July 18, 2019

ಮೈಸೂರು,ಜು.17(ಪಿಎಂ)-ಗ್ರಾಮ ಲೆಕ್ಕಾಧಿಕಾರಿಗಳಿಗೆ ಜಾಬ್ ಚಾರ್ಟ್ ನೀಡ ಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ಸಂಘದ ವತಿಯಿಂದ ಬುಧವಾರ ಒಂದು ದಿನದ ಸಾಂಕೇತಿಕ ಮುಷ್ಕರ ನಡೆಸಲಾಯಿತಲ್ಲದೆ, ಈ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿ ಗಳ ಕೇಂದ್ರ ಸಂಘದ ಕರೆ ಮೇರೆಗೆ ಇಂದು ರಾಜ್ಯವ್ಯಾಪಿ ಗ್ರಾಮ ಲೆಕ್ಕಿಗರು ಒಂದು ದಿನದ ಮುಷ್ಕರ ನಡೆಸಿ ಎಲ್ಲಾ ಜಿಲ್ಲಾ ಕೇಂದ್ರ ಗಳಲ್ಲಿ ಆಯಾಯ ಜಿಲ್ಲಾಧಿಕಾರಿಗಳಿಗೆ ಬೇಡಿಕೆ ಈಡೇರಿಸುವ ಸಂಬಂಧ ಮನವಿ ಸಲ್ಲಿಸಿದ್ದು, ಅದೇ ರೀತಿ ಮೈಸೂರಿನಲ್ಲೂ ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಮೀಪವೇ ಇರುವ ಕರ್ನಾಟಕ ರಾಜ್ಯ ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾ ಶಾಖೆ ಆವರಣ ದಲ್ಲಿ ಸಮಾವೇಶಗೊಂಡ ನೂರಾರು ಮಂದಿ ಗ್ರಾಮಲೆಕ್ಕಿಗರು, ಡಿಸಿ ಕಚೇರಿ ಆವರಣಕ್ಕೆ ತೆರಳಿ ಮನವಿ ಸಲ್ಲಿಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಸಲು 2017ರಲ್ಲಿ ಗ್ರಾಮ ಲೆಕ್ಕಾಧಿಕಾರಿ ಗಳ ಕೇಂದ್ರ ಸಂಘದ ವತಿಯಿಂದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಈವರೆಗೂ ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅನ್ಯ ಇಲಾಖೆ ಕೆಲಸಗಳಿಂದ ಗ್ರಾಮ ಲೆಕ್ಕಾಧಿಕಾರಿಗಳಿಗೆ ಮುಕ್ತಿ ನೀಡಬೇಕು. ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಯನ್ನು ಮೇಲ್ದರ್ಜೆ ಗೇರಿಸುವ ಬಗ್ಗೆ 6ನೇ ವೇತನ ಆಯೋಗದಲ್ಲಿ ಅನುಮೋದನೆಯಾಗಿದ್ದರೂ ಇದನ್ನು ಹಣ ಕಾಸು ಇಲಾಖೆ ಪರಿಗಣಿಸಿಲ್ಲ. ಈ ಬಗ್ಗೆ ಪುನರ್ ಪರಿಶೀಲಿಸಿ ನಮಗೆ ನ್ಯಾಯ ದೊರ ಕಿಸಿಕೊಡಬೇಕು ಎಂದು ಆಗ್ರಹಿಸಿದರು.

ಸಾರ್ವತ್ರಿಕ ರಜೆ ದಿನಗಳಲ್ಲಿ ಕೆಲಸ ಮಾಡ ಬೇಕೆಂದು ಒತ್ತಡ ಹೇರದಂತೆ ಸರ್ಕಾರ ಆದೇಶ ಹೊರಡಿಸಿದೆ. ಅದಾಗ್ಯೂ ಹಲವು ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ದಿನಗಳಲ್ಲಿ ಕೆಲ ಸದ ಒತ್ತಡ ಹೇರಲಾಗುತ್ತಿದೆ. ಕೂಡಲೇ ಇದನ್ನು ತಪ್ಪಿಸಬೇಕು. ಗ್ರಾಮ ಲೆಕ್ಕಿಗರಿಗೆ ಕಾಲ ಕಾಲಕ್ಕೆ ಮುಂಬಡ್ತಿ ನೀಡಬೇಕು. ಪ್ರಯಾಣ ಭತ್ಯೆಯನ್ನು ಸಾವಿರ ರೂ.ಗಳಿಗೆ ಹೆಚ್ಚಳ ಮಾಡಬೇಕು. ಪ್ರತಿ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಚೇರಿ ಹಾಗೂ ವಸತಿ ಗೃಹ ಒದಗಿಸಬೇಕು ಎಂದು ಒತ್ತಾಯಿಸಿದರು.

ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಾಟೀಲ್ ಎಂಬುವರು ಮರಳು ದಂಧೆಕೋರರಿಂದ ಲಾರಿ ಹರಿದು ಮೃತಪಟ್ಟರು. ಆದರೆ ಈವ ರೆಗೂ ಮೃತರ ಕುಟುಂಬಕ್ಕೆ ವಿಶೇಷ ಪರಿಹಾರ ನೀಡಿಲ್ಲ. ಕೂಡಲೇ 20 ಲಕ್ಷ ರೂ. ವಿಶೇಷ ಪರಿಹಾರ ನೀಡಬೇಕು. ಗ್ರಾಮ ಲೆಕ್ಕಾಧಿಕಾರಿಗಳ ಮೇಲೆ ಹಲ್ಲೆ ನಡೆ ಸುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು. ಗ್ರಾಮ ಸಹಾ ಯಕರ ಹುದ್ದೆಯನ್ನು ಖಾಯಂಗೊಳಿಸ ಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಗ್ರಾಮ ಲೆಕ್ಕಿಗರ ಸಂಘದ ಅಧ್ಯಕ್ಷ ಲೋಹಿತ್, ಪ್ರಧಾನ ಕಾರ್ಯದರ್ಶಿ ಅನಿಲ್‍ಕುಮಾರ್, ಗೌರವಾಧ್ಯಕ್ಷ ರಾಮ ಚಂದ್ರ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಘಟಕದ ಅಧ್ಯಕ್ಷರು, ಪದಾಧಿ ಕಾರಿಗಳು ಹಾಗೂ ನೂರಾರು ಮಂದಿ ಗ್ರಾಮಲೆಕ್ಕಿಗರು ಪಾಲ್ಗೊಂಡಿದ್ದರು.

Translate »