ಮೈಸೂರು, ಜೂ.24(ಎಂಕೆ)- ಕೊರೊನಾ ಸೋಂಕು ನಿಯಂತ್ರಣಕ್ಕೆ ಮೈಸೂರು ನಗರ ಪೊಲೀಸರು ಕೈಗೊಂಡಿರುವÀ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬುಧವಾರ 8 ಪ್ರಕರಣಗಳಲ್ಲಿ 9 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.
ವಿಶೇಷ ಕಾರ್ಯಾಚರಣೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗುಂಪು ಗೂಡಿ ನಿಷೇಧಾಜ್ಞೆಯನ್ನು ಉಲ್ಲಂಘಿಸಿದವರ ವಿರುದ್ಧ ಹೆಬ್ಬಾಳ, ಆಲನಹಳ್ಳಿ, ವಿದ್ಯಾ ರಣ್ಯಪುರಂ, ದೇವರಾಜ ಪೆÇಲೀಸ್ ಠಾಣೆಗಳಲ್ಲಿ 9 ಮಂದಿ ವಿರುದ್ಧ ಐಪಿಸಿ ಸೆಕ್ಷನ್ 160, 188, 269 ಮತ್ತು ದಿ ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ (ವಿಪತ್ತು ನಿರ್ವಹಣಾ ಕಾಯ್ದೆಯ) ಸೆಕ್ಷನ್ 51ರಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧ ಮೈಸೂರು ನಗರ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ಮುಂದುವರೆದಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ರೀತ್ಯಾ ಪ್ರಕರಣ ದಾಖ ಲಿಸುವುದಾಗಿ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಸಾರ್ವ ಜನಿಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ