ಕೇರಳ ಬಂದ್ ವೇಳೆ ಹಿಂಸಾಚಾರ
ಮೈಸೂರು

ಕೇರಳ ಬಂದ್ ವೇಳೆ ಹಿಂಸಾಚಾರ

January 4, 2019

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಇಬ್ಬರು ಮಹಿಳೆಯರು ಪ್ರವೇಶಿಸಿರುವುದನ್ನು ಖಂಡಿಸಿ ಶಬರಿಮಲೆ ಕರ್ಮ ಸಮಿತಿ ಮತ್ತು ಬಿಜೆಪಿ ಇಂದು ಕರೆ ನೀಡಿದ್ದ ಕೇರಳ ಬಂದ್ ವೇಳೆ ಹಿಂಸಾಚಾರ ನಡೆದಿದೆ.

ಪ್ರತಿಭಟನೆ ವೇಳೆ ಕಲ್ಲು ತೂರಾಟದಲ್ಲಿ ಶಬರಿಮಲೆ ಕರ್ಮ ಸಮಿತಿಯ ಕಾರ್ಯಕರ್ತ ಸಾವನ್ನಪ್ಪಿದ್ದು, ಮೂವರು ಬಿಜೆಪಿ ಕಾರ್ಯ ಕರ್ತರು ಇರಿತಕ್ಕೊಳಗಾಗಿದ್ದಾರೆ. 7 ಪೊಲೀಸ್ ವಾಹನಗಳು ಹಾಗೂ 79 ಕೇರಳ ರಾಜ್ಯ ಸಾರಿಗೆ ಬಸ್‍ಗಳನ್ನು ಧ್ವಂಸಗೊಳಿಸಲಾಗಿದೆ. ತಿರುವನಂತಪುರಂನ ನೆಡುಮಂಗಡವಿನಲ್ಲಿ ದುಷ್ಕರ್ಮಿಗಳು ಬಾಂಬ್ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಪ್ರತಿಭಟನೆ ವೇಳೆ ಪೊಲೀಸರು ಮತ್ತು ಮಾಧ್ಯಮ ಪ್ರತಿನಿಧಿಗಳ ಮೇಲೂ ದಾಳಿ ನಡೆದಿದೆ. ಕೇರಳಾದ ಹಲವೆಡೆ ಪ್ರತಿ ಭಟನಾಕಾರರು ರಸ್ತೆ ತಡೆ ನಡೆಸಿ ಟೈರ್ ಗಳನ್ನು ಸುಟ್ಟು
ಆಕ್ರೋಶ ವ್ಯಕ್ತಪಡಿಸಿದರು. ಹಿಂದೂ ಸಂಘಟನೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ತೊಡಗಿದ್ದಾಗ ಅವರ ವಿರುದ್ಧ ಸಿಪಿಐ(ಎಂ) ಕಾರ್ಯಕರ್ತರೂ ಕೂಡ ಪ್ರತಿಭಟನೆಗಿಳಿದ ಕಾರಣ ಅಲ್ಲಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಹಿಂದೂ ಸಂಘಟನೆ ಕಾರ್ಯ ಕರ್ತರು ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವೆ ನಡೆದ ಕಲ್ಲು ತೂರಾಟದಲ್ಲಿ ಶಬರಿಮಲೆ ಕರ್ಮ ಸಮಿತಿಯ ಕಾರ್ಯಕರ್ತ ಚಂದ್ರಂ ಉನ್ನಿತನ್ (55) ಎಂಬ ವ್ಯಕ್ತಿ ಸಾವನ್ನಪ್ಪಿದ್ದು, ಈ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮೀಪುಗುರಿ ಪಾರೇಕಟ್ಟ ನಿವಾಸಿ ಮಾಜಿ ನಗರ ಸಭೆ ಸದಸ್ಯ ಬಿಜೆಪಿಯ ಗಣೇಶ್ (60) ಎಂಬುವರು ನುಳ್ಳಿಪಾಡಿ ಎಂಬಲ್ಲಿ ಬೈಕ್‍ನಲ್ಲಿ ತೆರಳುತ್ತಿ ದ್ದಾಗ ಅವರ ಮೇಲೆ ಹಲ್ಲೆ ನಡೆಸಿದ ಸಿಪಿಐ(ಎಂ) ಕಾರ್ಯಕರ್ತರು ಅವರನ್ನು ಇರಿದು ಗಾಯಗೊಳಿಸಿದ್ದಾರೆ. ರಾಜ್ಯದ ಹಲವೆಡೆ ಹಿಂಸಾಚಾರ ನಡೆದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಹಲವೆಡೆ ಪೊಲೀಸರು ಅಶ್ರುವಾಯು ಪ್ರಯೋಗ ಮತ್ತು ಲಾಠಿ ಚಾರ್ಜ್ ನಡೆಸಿದರು. ನೀಲೇಶ್ವರದ ಬಳಿ ಸಿಪಿಐ(ಎಂ) ಕಾರ್ಯಕರ್ತರು ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಕೇರಳದ ವ್ಯಾಪಾರ-ವಹಿವಾಟು ಹಾಗೂ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕೇರಳದ ವಿವಿಧ ವಿವಿಗಳು ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಿವೆ.

ಹಿಂಸಾಚಾರದ ಪ್ರತಿಭಟನೆಯಲ್ಲಿ ತೊಡಗಿರುವವರನ್ನು ಪೆÇಲೀಸರು ಮುಲಾಜಿಲ್ಲದೇ ಬಂಧಿಸಿದ್ದು, ಈ ರೀತಿಯ ಪ್ರತಿಭಟನೆಯಲ್ಲಿ ತೊಡಗಿ ಬಂಧನಕ್ಕೊಳಗಾದ ಪ್ರತಿಭಟನಾ ಕಾರರ ಸಂಖ್ಯೆ 48 ಗಂಟೆಗಳಲ್ಲಿ 266 ಕ್ಕೆ ಏರಿಕೆಯಾಗಿದೆ. ಇನ್ನು ಮುನ್ನೆಚ್ಚರಿಕಾ ಕ್ರಮವಾಗಿ ಪೆÇಲೀಸರು ಬರೊಬ್ಬರಿ 334 ಜನರನ್ನು ವಶಕ್ಕೆ ಪಡೆದಿದ್ದಾರೆ.
ಹಿಂದೂ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆಯ ನಂತರ ಹಿಂಸಾಚಾರವಾಗಿ ರುವ ಬಗ್ಗೆ ವರದಿಗಳು ಪ್ರಕಟವಾಗಿದ್ದು, ಈ ರೀತಿಯ ಪ್ರತಿಭಟನೆಯನ್ನು ಹತ್ತಿಕ್ಕುವುದಕ್ಕಾಗಿ ಕೇರಳ ರಾಜ್ಯ ಪೆÇಲೀಸರು ಆಪರೇಷನ್ ಬ್ರೋಕನ್ ವಿಂಡೋ ಎಂಬ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಕಾರ್ಯಾಚರಣೆಯ ಭಾಗವಾಗಿ ಹಿಂಸಾಚಾರದಲ್ಲಿ ತೊಡಗಿರುವ ಪ್ರತಿಭಟನಾ ನಿರತರನ್ನು ಬಂಧಿಸುವುದಷ್ಟೇ ಅಲ್ಲದೇ ಅವರ ಮೊಬೈಲ್ ಫೆÇೀನ್‍ಗಳನ್ನು ವಶಕ್ಕೆ ತೆಗೆದುಕೊಂಡು ಡಿಜಿಟಲ್ ಪರಿಶೀಲನೆಗೆ ನೀಡಲಾಗುತ್ತದೆ ಹಾಗೂ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಶಂಕೆಯಿಂದ ಪ್ರತಿಭಟನಾಕಾರರ ಮನೆಗಳ ಮೇಲೆ ದಾಳಿಯನ್ನೂ ನಡೆಸಲಾಗುತ್ತದೆ ಎಂದು ಪೆÇಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು ಸಾಮಾ ಜಿಕ ಜಾಲತಾಣದಲ್ಲಿ ಹಿಂಸಾಚಾರಕ್ಕೆ ಉತ್ತೇಜನ ನೀಡುವವರ ವಿರುದ್ಧವೂ ಪ್ರಕರಣ ದಾಖಲಿಸಲಾಗುತ್ತದೆ ಎಂದು ಕೇರಳ ಪೆÇಲೀಸ್ ಇಲಾಖೆ ತಿಳಿಸಿದೆ.

Translate »