ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಕೊಡಗು  ವಲಯ ಮಹಿಳೆಯರ ಗ್ರಾಮೀಣ ಕ್ರೀಡಾಕೂಟ
ಕೊಡಗು

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಕೊಡಗು ವಲಯ ಮಹಿಳೆಯರ ಗ್ರಾಮೀಣ ಕ್ರೀಡಾಕೂಟ

March 25, 2019

ವಿರಾಜಪೇಟೆ: ವಿರಾಜ ಪೇಟೆಯ ಕಾವೇರಿ ಪದವಿ ಕಾಲೇಜಿನಲ್ಲಿ ಕೊಡಗು ವಲಯ ಮಟ್ಟದ ಮಹಿಳೆಯರ ಅಂತರ ಕಾಲೇಜು ಗ್ರಾಮೀಣ ಕ್ರೀಡಾ ಕೂಟವನ್ನು ಅಯೋಜಿಸಲಾಗಿತ್ತು.

ಈ ಕ್ರೀಡಾಕೂಟದಲ್ಲಿ ವಾಲಿಬಾಲ್‍ನಲ್ಲಿ ವಿರಾಜಪೇಟೆ ಗೋಣಿಕೊಪ್ಪದ ಕಾವೇರಿ ಕಾಲೇಜು ತಂಡ ಪ್ರಥಮ ಹಾಗು ವಿರಾಜ ಪೇಟೆಯ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಹಾಕಿ ಕ್ರೀಡೆಯಲ್ಲಿ ಗೋಣಿಕೊಪ್ಪದ ಕಾವೇರಿ ಕಾಲೇಜು ತಂಡ ಪ್ರಥಮ ಹಾಗು ವಿರಾಜ ಪೇಟೆಯ ಕಾವೇರಿ ಕಾಲೇಜು ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

ಥ್ರೋ ಬಾಲ್ ಕ್ರೀಡೆಯಲ್ಲಿ ಗೋಣಿ ಕೊಪ್ಪದ ಕಾವೇರಿ ಕಾಲೇಜು ತಂಡ ಪ್ರಥಮ ಹಾಗು ವಿರಾಜಪೇಟೆಯ ಕಾವೇರಿ ಕಾಲೇಜು ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಕಬಡ್ಡಿಯಲ್ಲಿ ವಿರಾಜ ಪೇಟೆಯ ಕಾವೇರಿ ಕಾಲೇಜು ತಂಡ ಪ್ರಥಮ ಹಾಗು ವಿರಾಜ ಪೇಟೆಯ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

ಹಗ್ಗ ಜಗ್ಗಾಟದಲ್ಲಿ ವಿರಾಜಪೇಟೆಯ ಕಾವೇರಿ ಕಾಲೇಜು ತಂಡ ಪ್ರಥಮ ಹಾಗೂ ಗೋಣಿಕೊಪ್ಪದ ಕಾವೇರಿ ಕಾಲೇಜು ತಂಡ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿತು. ಲಗೋರಿ ಕ್ರೀಡೆಯಲ್ಲಿ ಗೋಣಿ ಕೊಪ್ಪದ ಕಾವೇರಿ ಕಾಲೇಜು ತಂಡ ಪ್ರಥಮ ಹಾಗೂ ವಿರಾಜಪೇಟೆಯ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಆರಂಭದಲ್ಲಿ ಕಾವೇರಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಮಾಜಿ ನಿರ್ದೇಶಕರಾದ ಕೋದಂಡ ಸ್ವಾತಿ ಬೋಪಣ್ಣ ಕ್ರೀಡಾಕೂಟವನ್ನು ಉದ್ಘಾಟಿಸಿದರು.

ಈ ಸಂದರ್ಭ ಗೋಣಿಕೊಪ್ಪಲು ಲಯನ್ಸ್‍ಸಂಸ್ಥೆಯ ಮಾಜಿ ಅಧ್ಯಕ್ಷರಾದ ಚಿರಿಯಪಂಡ ಡಾಟಿ ಪೂಣಚ್ಚ ಹಾಗೂ ಗೋಣಿಕೊಪ್ಪ ಕಾವೇರಿ ಪದವಿ ಕಾಲೇಜಿ ನಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತ ರಾದ ಬೆಲ್ಲತಂಡ ತಾರ ಕಾವೇರಮ್ಮ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದಿಂದ ವೀಕ್ಷಕ ರಾಗಿ ಆಗಮಿಸಿದ ಪವನ್ ಕೃಷ್ಣ ಹಾಜರಿದ್ದರು.

ವಿರಾಜಪೇಟೆಯ ಕಾವೇರಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಂ.ಎಂ.ದೇಚಮ್ಮ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮಹಿಳೆಯರ ಕ್ರೀಡೆಗೆ ಅತ್ಯಂತ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಹೇಳಿದರು.
ಕ್ರೀಡಾಕೂಟವನ್ನು ಕಾವೇರಿ ವಿದ್ಯಾ ಸಂಸ್ಥೆ ಯ ಮಾಜಿ ನಿರ್ದೇಶಕಿ ಸ್ವಾತಿ ಬೋಪಣ್ಣ ಉದ್ಘಾಟಿಸಿ ಮಾತನಾಡಿ, ಕ್ರೀಡೆ ನಮ್ಮ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿ ಯಾಗುತ್ತದೆ ಎಂದು ಹೇಳಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ ಎ.ಎಂ. ಕಮಲಾಕ್ಷಿ ಅಧ್ಯಕ್ಷತೆ ವಹಿಸಿ ಮಾತನಾಡಿ ದರು. ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ಎನ್.ಸಿ. ನೀಲಮ್ಮ, ಎಂ.ಡಿ.ಅಕ್ಕಮ್ಮ, ಕೆ.ಎಸ್. ಜ್ಯೋತಿ ಹಾಗೂ ಕೆ.ಕೆಸರಸ್ವತಿಯವರನ್ನು ಸನ್ಮಾನಿಸಲಾಯಿತು.

Translate »