ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರ
ಹಾಸನ

ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರ

September 23, 2018

ಹಾಸನ: ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದದ್ದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಅಭಿಪ್ರಾಯಪಟ್ಟರು.ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಹಾಸನಾಂಬ ಕಲಾಭವನದಲ್ಲಿ ಏರ್ಪಡಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಸಮುದಾಯಕ್ಕೂ ತನ್ನದೇ ಆದ ಮಹತ್ವ ಇದೆ. ಅದನ್ನು ಗೌರವಿಸಬೇಕು ಎಂದರು.

ವಿಶ್ವಕರ್ಮ ಜನಾಂಗವಿಲ್ಲದೆ ಸಮಾಜ ಕಟ್ಟಲು ಸಾಧ್ಯವಿಲ್ಲ. ಏಕೆಂದರೆ ಅಭಿವೃದ್ಧಿಗೆ ಪೂರಕವಾದ ವಿಶ್ವಕರ್ಮ ಸಮಾಜದ ಕುಲ ಕಸುಬುಗಳಿವೆ. ಆದರೆ ಈ ಸಮುದಾಯ ತಮ್ಮ ವೃತ್ತಿಪರತೆಗೆ ನೀಡುವಷ್ಟೇ ಮಹತ್ವವನ್ನು ಶಿಕ್ಷಣಕ್ಕೆ ನೀಡಬೇಕು ಎಂದು ಸಲಹೆ ನೀಡಿದರು.

ವಿಶ್ವಕರ್ಮ ದೇವಶಿಲ್ಪಿ ಕಲೆಗಳ ಚಕ್ರ ವರ್ತಿಯಾಗಿದ್ದಾರೆ. ಸರ್ಕಾರ ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಅವರ ಆದರ್ಶ ಹಾಗೂ ಶ್ರೇಷ್ಠತೆ ಗಳನ್ನು ಪರಿಚಯಿಸಿ ಅನುಸರಿಸಲು ಪ್ರೇರಣೆ ನೀಡುತ್ತಿದೆ ಎಂದು ತಿಳಿಸಿದರು.

ವಿಶೇಷ ಉಪನ್ಯಾಸ ನೀಡಿದ ಸಾರ್ವ ಜನಿಕ ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇ ಶಕ ಮಂಟೇಲಿಂಗಾಚಾರ್ ಮಾತನಾಡಿ, ವಿಶ್ವಕರ್ಮ ಸಮಾಜದಲ್ಲಿ ಒಗ್ಗಟು ಮುಖ್ಯ, ಆ ಮೂಲಕ ಸರ್ಕಾರದ ಸೌಲತ್ತು ಎಲ್ಲಾ ಜನರಿಗೂ ತಲುಪಿಸಿ ಮಧ್ಯವತಿಗಳ ಹಾವಳಿ ತಪ್ಪಿಸಬೇಕು ಎಂದರಲ್ಲದೆ, ಸಮಾಜದ ವೃತ್ತಿ ಪರ ಆಚರಣೆಗಳು ಇತರೆ ಸಮಾಜಕ್ಕೆ ಪೂರಕ, ಕೃಷಿ ಚಟುವಟಿಕೆಗಳು ರೈತರ ಬೆನ್ನೆಲುಬಾದರೆ ಕೃಷಿಕರಿಗೆ ವಿಶ್ವಕರ್ಮ ಸಮುದಾಯದ ಕುಲಕಸುಬುಗಳು ಆಧಾರವಾಗಿ ನಿಲ್ಲುತ್ತವೆ ಎಂದರು.
ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ.ಎಲ್. ಕೃಷ್ಣಕುಮಾರ್ ಮಾತನಾಡಿ, ನಿಗಮದಿಂದ ಲಭ್ಯವಿರುವ ಸೌಲಭ್ಯಗಳು, ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಎಡಿಸಿ ಬಿ.ಆರ್.ಪೂರ್ಣಿಮಾ ಕಾರ್ಯ ಕ್ರಮ ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್, ಸ್ವಾತಂತ್ರ್ಯ ಹೋರಾಟ ಗಾರ ಹೆಚ್.ಎಂ.ಶಿವಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜು ನಾಥ್, ವಿಶ್ವಕರ್ಮ ಸಮುದಾಯದ ಮುಖಂಡ ರಾದ ವಾಸುದೇವ್ ಆಚಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಭಾರಿ ನಿರ್ದೇಶಕ ವಿನೋದ್‍ಚಂದ್ರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹಾಂತಪ್ಪ ಮತ್ತಿತರರಿದ್ದರು,

Translate »