ನಾಳೆ ವಿಶ್ವಕರ್ಮ ಜಯಂತ್ಯೋತ್ಸವ ಮೆರವಣಿಗೆ
ಮೈಸೂರು

ನಾಳೆ ವಿಶ್ವಕರ್ಮ ಜಯಂತ್ಯೋತ್ಸವ ಮೆರವಣಿಗೆ

September 16, 2018

ಮೈಸೂರು: ಮೈಸೂರು ಜಿಲ್ಲಾ ವಿಶ್ವಕರ್ಮ ಜಯಂತ್ಯೋತ್ಸವ ಸಮಿತಿ, ಜಿಲ್ಲಾಡಳಿತದ ಸಹಯೋಗದಲ್ಲಿ ಸೆ.17ರಂದು ಬೆಳಿಗ್ಗೆ 9 ಗಂಟೆಗೆ ಮೈಸೂರಿನಲ್ಲಿ 3ನೇ ವರ್ಷದ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮ ಏರ್ಪಡಿಸಿದ್ದು, ಇದರ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ಮೆರವಣಿಗೆ, ಮಧ್ಯಾಹ್ನ 12.30 ಗಂಟೆಗೆ ಕಲಾಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಿ.ಹುಚ್ಚಪ್ಪಾಚಾರ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಅಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮೈಸೂರಿನ ಇರ್ವಿನ್ ರಸ್ತೆ ಕಾಳಿಕಾಂಬ ಕಮಠೇಶ್ವರ ದೇವಸ್ಥಾನದ ಮುಂಭಾಗದಿಂದ ಬೆಳ್ಳಿರಥದಲ್ಲಿ ವಿಶ್ವಕರ್ಮ ಮೂರ್ತಿಯ ಮೆರವಣಿಗೆ ಆರಂಭವಾಗಲಿದೆ. ವಿವಿಧ ಕಲಾತಂಡಗಳನ್ನು ಒಳಗೊಂಡಂತೆ ಪಂಚ ಕುಲಕಸುಬುಗಳ ಸ್ಥಬ್ಧ ಚಿತ್ರಗಳೊಂದಿಗೆ ಮೆರವಣಿಗೆಯು ಇರ್ವಿನ್ ರಸ್ತೆ, ಅಶೋಕ ರಸ್ತೆ, ದೇವರಾಜ ಅರಸು ರಸ್ತೆ ಮೂಲಕ ಕಲಾಮಂದಿರದವರೆಗೆ ನಡೆಯಲಿದೆ ಎಂದರು. ಕಲಾಮಂದಿರದಲ್ಲಿ ಮಧ್ಯಾಹ್ನ 12ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮದ ಉದ್ಘಾಟನೆ ನೆರವೇರಿ ಸುವರು. ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು. ಸಚಿವ ಸಾ.ರಾ.ಮಹೇಶ್, ಸಂಸದ ಪ್ರತಾಪ್‍ಸಿಂಹ ಹಾಗೂ ಇನ್ನಿತರ ಪ್ರಮುಖರು, ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪಾಲಿಕೆಗೆ ನೂತನವಾಗಿ ಆಯ್ಕೆಯಾಗಿರುವ ಛಾಯಾದೇವಿ ಹಾಗೂ ರಮೇಶ್ ಅವರನ್ನು ಸನ್ಮಾನಿಸಲಾಗುವುದು ಎಂದರು. ಸುದ್ದಿಗೋಷ್ಠಿ ಯಲ್ಲಿ ಉಪಾಧ್ಯಕ್ಷ ಜಯರಾಮಾಚಾರಿ, ಪುಟ್ಟಸ್ವಾಮಾಚಾರಿ, ಜಯತೀರ್ಥ, ಸಿದ್ದಪ್ಪಾಜಿ ವಿಶ್ವಕರ್ಮ, ಹೆಚ್.ಎಸ್.ಜಯಕುಮಾರ್, ರಾಮಲಿಂಗಾಚಾರ್ ಉಪಸ್ಥಿತರಿದ್ದರು.

Translate »