ನಾಳೆ ಚಾಮರಾಜನಗರದಲ್ಲಿ ವಿಶ್ವಕರ್ಮ ಜಯಂತಿ
ಚಾಮರಾಜನಗರ

ನಾಳೆ ಚಾಮರಾಜನಗರದಲ್ಲಿ ವಿಶ್ವಕರ್ಮ ಜಯಂತಿ

September 21, 2018

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೆ.22ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಉದ್ಘಾಟನೆ ನೆರವೇರಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟ ರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಉಪಸ್ಥಿತಿ ವಹಿಸುವರು. ಸಂಸದ ಆರ್. ಧ್ರುವನಾರಾಯಣ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಶಾಸಕರಾದ ಆರ್. ನರೇಂದ್ರ, ಸಿ.ಎಸ್. ನಿರಂಜನಕುಮಾರ್, ವಿಧಾನ ಪರಿಷತ್ ಸÀದಸ್ಯ ರಾದ ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಜೆ. ಯೋಗೇಶ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ದೊಡ್ಡಮ್ಮ, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗ ವಹಿಸುವರು. ಮೈಸೂರು ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಮಂಟೆ ಲಿಂಗಚಾರ್ ಮುಖ್ಯ ಭಾಷಣ ಮಾಡುವರು.
ಬೆಳಿಗ್ಗೆ 9.30 ಗಂಟೆಗೆ ವೇದಿಕೆಯಲ್ಲಿ ನಗರದ ರಾಜಮೂರ್ತಿ ಮತ್ತು ತಂಡದವರಿಂದ ಹಾಡುಗಾರಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Translate »