ನಗರದ ವಿವಿಧೆಡೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ಹಾಸನ

ನಗರದ ವಿವಿಧೆಡೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

March 10, 2019

ಹಾಸನ: ನಗರದ ವಿವಿಧೆಡೆಗೆ ಶನಿವಾರ ಜಿಲ್ಲಾಧಿಕಾರಿ ಅಕ್ರಂಪಾಷ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ನಗರದ ಜಿಲ್ಲಾ ಆಸ್ಪತ್ರೆ ಎದುರಿರುವ ಇಂದಿರಾ ಕ್ಯಾಂಟೀನ್‍ಗೆ ದಿಢೀರ್ ಭೇಟಿ ನೀಡಿದ ಅವರು, ಕ್ಯಾಂಟೀನ್ ವ್ಯವಸ್ಥೆ, ಆಹಾರ ಪೂರೈಕೆ, ಸ್ವಚ್ಛತೆ ಹಾಗೂ ಆಹಾರ ಗುಣಮಟ್ಟ ಪರಿಶೀಲಿಸಿದರು.

ಬೆಳಿಗಿನ ಉಪಹಾರವಾದ ಇಡ್ಲಿ ಮತ್ತು ಪಲಾವ್ ಸವಿದು, ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿ ದರು. ಸಾರ್ವಜನಿಕರೊಂದಿಗೆ ಸಮಾ ಲೋಚನೆ ನಡೆಸಿದ ಜಿಲ್ಲಾಧಿಕಾರಿ, ಸಾರ್ವ ಜನಿಕರಿಂದ ಅಭಿಪ್ರಾಯ ಪಡೆದು ಕೊಂಡು ಯಾವುದೇ ಲೋಪ ಇದ್ದಲ್ಲಿ ತಿಳಿಸಬೇಕು ಎಂದು ಹೇಳಿದರು.

ಇಂದಿರಾ ಕ್ಯಾಂಟೀನ್‍ನಲ್ಲಿನ ಸಿಬ್ಬಂದಿ ಗಳಿಗೆ ಸ್ವಚ್ಛತೆ ಕಾಪಾಡುವಂತೆ, ಆಹಾರ ವನ್ನು ರುಚಿ ಮತ್ತು ಶುಚಿಯಾಗಿ ಸಾರ್ವ ಜನಿಕರಿಗೆ ಯಾವುದೇ ತೊಂದರೆಯಾಗ ದಂತೆ ವಿತರಿಸಲು ಸೂಚಿಸಿದರು. ಅಲ್ಲದೇ ಆರೋಗ್ಯ ನಿರೀಕ್ಷಕರಿಗೆ ಆಗಿಂದಾಗ್ಗೆ ಕ್ಯಾಂಟೀನ್‍ಗೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲಿಸುವಂತೆ ನಿರ್ದೇಶಿಸಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಕೆ.ಶಂಕರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೃಷ್ಣಮೂರ್ತಿ, ತಹಸೀಲ್ದಾರ್ ಶ್ರೀನಿವಾಸಯ್ಯ ಮತ್ತಿತರರು ಹಾಜರಿದ್ದರು.
ಹಣ್ಣಿನ ಮಾರುಕಟ್ಟೆಗೆ ಭೇಟಿ: ನಗರ ವ್ಯಾಪ್ತಿಯಲ್ಲಿ ಬರುವಂತಹ ಹಣ್ಣಿನ ಮತ್ತು ಹೂವಿನ ಮಾರುಕಟ್ಟೆಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ಅಭಿವೃದ್ಧಿಪಡಿಸಲಾಗು ತ್ತಿದ್ದ ರಸ್ತೆ ಮತ್ತು ಚರಂಡಿಯ ಕಾಮ ಗಾರಿಯ ಗುಣಮಟ್ಟವನ್ನು ಪರೀಕ್ಷಿಸಿದರು.

ಮಾರುಕಟ್ಟೆಯ ಸುತ್ತಲು ನಿರ್ಮಾಣ ವಾಗುತ್ತಿರುವ ಕಾಂಕ್ರೀಟ್ ರಸ್ತೆಯನ್ನು ಪರಿಶೀಲಿಸಿದರು. ಈ ವೇಳೆ ಜಿಲ್ಲಾಧಿಕಾರಿ ಅವರು ನಗರಸಭೆಯ ತ್ಯಾಜ್ಯ ನಿರ್ವಹಣೆ ಪ್ರದೇಶಕ್ಕೂ ಭೇಟಿ ನೀಡಿ ಸ್ಥಳ ಪರಿಶೀಲಿಸಿ ದರು. ಮಾರುಕಟ್ಟೆಯಲ್ಲಿನ ಸ್ವಚ್ಛತೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆಯ ಕಿರಿಯ ಅಭಿಯಂತರ ಪ್ರವೀಣ್ ಮಾಹಿತಿ ನೀಡಿ, ಸದರಿ ಕಾಮಗಾರಿಯು ಐಡಿಎಸ್‍ಎಂಟಿ ಯೋಜನೆಯಡಿ ಮಂಜೂರಾತಿ ಪಡೆ ದಿದ್ದು, ಸುಮಾರು 102 ಮಳಿಗೆಗಳಿಗೆ ರಸ್ತೆ, ಚರಂಡಿಯನ್ನು ಅಭಿವೃದ್ಧಿಪಡಿಸುತ್ತಿರು ವುದಾಗಿ ವಿವರಿಸಿದರು.
ಕಾಮಗಾರಿಯಲ್ಲಿ ಗುಣಮಟ್ಟಣವನ್ನು ಕಾಯ್ದುಕೊಂಡು ಹಾಗೂ ಯಾವುದೇ ಲೋಪವಾಗದಂತೆ ಕಾಮಗಾರಿ ಪೂರ್ಣ ಗೊಳಿಸಲು ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚಿಸಿದರು. ಬಳಿಕ, ಅಗಿಲೆಯಲ್ಲಿರುವ ನೆಲಭರ್ತಿ ಜಾಗವನ್ನು ಪರಿಶೀಲಿಸಿ ಮತ್ತು ಕೂಡಲೇ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಿದರು.

Translate »