ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ
ಚಾಮರಾಜನಗರ

ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ

July 18, 2018

ಚಾಮರಾಜನಗರ: ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಜುಲೈ 20 ರಿಂದ 25ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕ ರಿಂದ ದೂರುಗಳನ್ನು ಸ್ವೀಕರಿಸುವರು.

ಜುಲೈ 20ರಂದು ಕೊಳ್ಳೇಗಾಲ, 21 ರಂದು ಯಳಂದೂರು, 23ರಂದು ಚಾಮ ರಾಜನಗರ, 24ರಂದು ಗುಂಡ್ಲುಪೇಟೆ ಹಾಗೂ 25ರಂದು ಹನೂರು ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು.

ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿ ರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾ ಗಿದ್ದು, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರ.

Translate »