ಮೈಸೂರು, ಮಾ.16- ಮೈಸೂರು ಅರಮನೆ ಮಂಡಳಿ ವತಿಯಿಂದ ಕೋವಿಡ್-19 ಕಾಯಿಲೆಯ ಸ್ಫೋಟ ಮತ್ತು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಸೇರುವ ಸ್ಥಳ ಗಳಲ್ಲಿ ಸಾಧ್ಯವಾಗುವ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳುವ ಸಲುವಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ವಿಶ್ವವಿಖ್ಯಾತ ಮೈಸೂರು ಅರಮನೆಯ ವೀಕ್ಷಣೆ, ಧ್ವನಿ ಮತ್ತು ಬೆಳಕು ಕಾರ್ಯಕ್ರಮದ ವೀಕ್ಷಣೆ, ಪ್ರತಿ ಭಾನುವಾರ ಮತ್ತು ರಜೆ ದಿನಗಳಲ್ಲಿ ವಿದ್ಯುತ್ ದೀಪಾಲಂ ಕಾರ ವೀಕ್ಷಣೆಯನ್ನು ಮಾ.22ರವರೆಗೆ ನಿರ್ಬಂಧಿಸಿದೆ ಎಂದು ಮೈಸೂರು ಅರಮನೆ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.