ಕಾಂಗ್ರೆಸ್ ಅಭ್ಯರ್ಥಿ ಡಾ.ತಿಮ್ಮಯ್ಯರಿಗೆ ಮೊದಲ ಪ್ರಾಶಸ್ತ್ಯದ ಒಂದೇ ಮತ ಹಾಕಿಸಿ
ಮೈಸೂರು

ಕಾಂಗ್ರೆಸ್ ಅಭ್ಯರ್ಥಿ ಡಾ.ತಿಮ್ಮಯ್ಯರಿಗೆ ಮೊದಲ ಪ್ರಾಶಸ್ತ್ಯದ ಒಂದೇ ಮತ ಹಾಕಿಸಿ

November 27, 2021

ಪಕ್ಷದ ಮುಖಂಡರಿಗೆ ಸಿದ್ದರಾಮಯ್ಯ ಸೂಚನೆ

ಮೈಸೂರು ಖಾಸಗಿ ಹೋಟೆಲ್‌ನಲ್ಲಿ ಮೈಸೂರು, ಚಾ.ನಗರ ಮುಖಂಡರ ಸಭೆ

ಮೊದಲ ಸುತ್ತಿನ ಎಣ ಕೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಬೇಕು

ಮೈಸೂರು, ನ.೨೬(ಎಸ್‌ಬಿಡಿ)- ಮೈಸೂರು-ಚಾಮರಾಜನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿAದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕರೂ ಆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಸಂಜೆ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಎರಡೂ ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದರು.

ದ್ವಿಸದಸ್ಯ ಕ್ಷೇತ್ರವಾಗಿರುವ ಇಲ್ಲಿ ಕಾಂಗ್ರೆಸ್‌ನಿAದ ಒಬ್ಬರೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ ಬೆಂಬಲಿತ ಚುನಾಯಿತ ಪ್ರತಿನಿಧಿಗಳು ಪಕ್ಷದ ಅಭ್ಯರ್ಥಿಗೆ ಮೊದಲ ಪ್ರಾಶಸ್ತö್ಯದ ಒಂದೇ ಒಂದು ಮತವನ್ನು ಮಾತ್ರ ಚಲಾಯಿ ಸುವಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮತ್ತೊಂದು ಮತ ಚಲಾಯಿಸದಂತೆ ಗಮನಹರಿಸಿ, ಮೊದಲ ಸುತ್ತಿನಲ್ಲೇ ಅಭ್ಯರ್ಥಿ ಗೆಲ್ಲುವಂತೆ ಕಾರ್ಯ ನಿರ್ವಹಿಸಬೇಕು ಎಂದು ಮುಖಂಡರಿಗೆ ಸಿದ್ದರಾಮಯ್ಯ ಸೂಚಿಸಿದರು. ಈ ಸಭೆಯಲ್ಲಿ ಚುನಾವಣಾ ಕಾರ್ಯ ತಂತ್ರದ ಬಗ್ಗೆ ಸುದೀರ್ಘ ಸಮಾಲೋಚನೆ ನಡೆದಿದ್ದು, ಮುಖಂಡರಿAದ ಸಿದ್ದರಾಮಯ್ಯ ಸಲಹೆ ಹಾಗೂ ಅಭಿಪ್ರಾಯಗಳನ್ನು ಸಂಗ್ರಹಿಸಿ,

ಚುನಾವಣೆಯಲ್ಲಿ ಯಾವ ರೀತಿ ರಣತಂತ್ರ ರೂಪಿಸಬೇಕು, ಪ್ರಚಾರದ ವೈಖರಿ ಹೇಗಿರಬೇಕು, ಮತದಾರರಿಗೆ ಯಾವ ವಿಚಾರಗಳನ್ನು ಮನದಟ್ಟು ಮಾಡಿ ಬೆಂಬಲ ಕೋರಬೇಕು, ಎಲ್ಲಾ ಮತದಾರರ ಭೇಟಿಗೆ ಯಾವ ತಯಾರಿ ಮಾಡಿಕೊಳ್ಳಬೇಕು, ಹೀಗೆ ಹತ್ತಾರು ವಿಚಾರಗಳ ಬಗ್ಗೆ ಸಿದ್ದರಾಮಯ್ಯನವರು ಸಲಹೆ ನೀಡಿದರು ಎನ್ನಲಾಗಿದೆ. ಇದೇ ವೇಳೆ ನ.೨೯ರಂದು ಚಾಮರಾಜನಗರದಲ್ಲಿ ನಡೆಯುವ ಜನಜಾಗೃತಿ ಸಮಾವೇಶದ ಯಶಸ್ಸಿಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೂಚಿಸಿದರು ಎಂದು ತಿಳಿದುಬಂದಿದೆ. ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ, ಶಾಸಕರಾದ ತನ್ವೀರ್ ಸೇಠ್, ಡಾ.ಯತೀಂದ್ರ ಸಿದ್ದರಾಮಯ್ಯ, ಹೆಚ್.ಪಿ.ಮಂಜುನಾಥ್, ಪುಟ್ಟರಂಗಶೆಟ್ಟಿ, ಅನಿಲ್ ಚಿಕ್ಕಮಾದು, ಆರ್.ನರೇಂದ್ರ, ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಮಾಜಿ ಶಾಸಕರಾದ ಎಂ.ಕೆ.ಸೋಮಶೇಖರ್, ವಾಸು, ಎಸ್.ಬಾಲರಾಜು, ಎಸ್.ಜಯಣ್ಣ, ಕೃಷ್ಣಪ್ಪ, ಕಳಲೆ ಕೇಶವಮೂರ್ತಿ, ಕೆಪಿಸಿಸಿ ವಕ್ತಾರ ಎಂ.ಲಕ್ಷö್ಮಣ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಬಿ.ಪುಷ್ಪ ಅಮರನಾಥ್, ಪಕ್ಷದ ಮೈಸೂರು ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮೈಸೂರು ನಗರಾಧ್ಯಕ್ಷ ಆರ್.ಮೂರ್ತಿ, ಚಾಮರಾಜನಗರ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಮುಖಂಡರಾದ ಕೆ.ಆರ್.ನಗರದ ರವಿಶಂಕರ್, ಜಿಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

ಸಿದ್ದರಾಮಯ್ಯ, ಡಿಕೆಶಿ ಪ್ರವಾಸ: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ವಿಧಾನಸಭಾ ಕ್ಷೇತ್ರವಾರು ಕಾಂಗ್ರೆಸ್ ಮುಖಂಡರು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಸಭೆ ನಡೆಸಿ ಅಭ್ಯರ್ಥಿ ತಿಮ್ಮಯ್ಯ ಪರ ಪ್ರಚಾರ ನಡೆಸಲಿದ್ದಾರೆ. ನಾಳೆ(ನ.೨೭) ಬೆಳಗ್ಗೆ ೧೦.೩೦ಕ್ಕೆ ಪಿರಿಯಾಪಟ್ಟಣ ಕ್ಷೇತ್ರ, ಮಧ್ಯಾಹ್ನ ೨ಕ್ಕೆ ಹುಣಸೂರು, ನ.೨೯ರಂದು ಚಾಮರಾಜನಗರದಲ್ಲಿ ಜನಜಾಗೃತಿ ಸಮಾವೇಶ, ನ.೩೦ರಂದು ಬೆಳಗ್ಗೆ ೧೦.೩೦ಕ್ಕೆ ನಂಜನಗೂಡು, ಮಧ್ಯಾಹ್ನ ೨ಕ್ಕೆ ಹೆಚ್.ಡಿ.ಕೋಟೆ, ಡಿ.೧ರಂದು ಬೆಳಗ್ಗೆ ೧೦.೩೦ಕ್ಕೆ ಕೆ.ಆರ್.ನಗರ, ಮಧ್ಯಾಹ್ನ ೨ಕ್ಕೆ ಚಾಮುಂಡೇಶ್ವರಿ ಕ್ಷೇತ್ರ, ಡಿ.೩ರಂದು ಬೆಳಗ್ಗೆ ೧೦.೩೦ಕ್ಕೆ ತಿ.ನರಸೀಪುರ ಹಾಗೂ ಮಧ್ಯಾಹ್ನ ೨ಕ್ಕೆ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಭೆ ನಡೆಸಲಿದ್ದಾರೆ.

Translate »