ಅಭಿವೃದ್ಧಿ ಮುಂದಿಟ್ಟು ಮತ ಯಾಚನೆ: ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ
ಮೈಸೂರು

ಅಭಿವೃದ್ಧಿ ಮುಂದಿಟ್ಟು ಮತ ಯಾಚನೆ: ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ

March 25, 2019

ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಭಿ ವೃದ್ಧಿ ಯೋಜನೆ ಹಾಗೂ ತಾವು ಕ್ಷೇತ್ರ ದಲ್ಲಿ ಮಾಡಿರುವ ಕೆಲಸವನ್ನು ಮುಂದಿಟ್ಟು ಜನರ ಬಳಿ ಮತ ಯಾಚನೆ ಮಾಡುವುದಾಗಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿ ಇಂದು ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಸುತ್ತೂರು ಶ್ರೀಗಳು ಹಾಗೂ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀಗಳಿಂದ ಆಶೀರ್ವಾದ ಪಡೆದು, ನಾಮಪತ್ರ ಸಲ್ಲಿಸಿದ್ದೇನೆ ಎಂದರು.

ಕಳೆದ 15 ದಿನಗಳಿಂದಲೂ ತಾವು ಪ್ರಚಾರ ಮಾಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಯೋಜನೆ ಗಳು ಹಾಗೂ ಕ್ಷೇತ್ರದಲ್ಲಿ ಕಳೆದ 5 ವರ್ಷ ಗಳಿಂದ ತಾನು ಮಾಡಿದ ಜನಪರ ಕೆಲಸಗಳ ಆಧಾರದ ಮೇಲೆ ಮತ ಕೇಳು ವುದನ್ನು ಬಿಟ್ಟರೆ ತಾವು ಯಾರ ವಿರು ದ್ಧವೂ ಆರೋಪ ಮಾಡುವುದಿಲ್ಲ ಎಂದು ಪ್ರತಾಪ್ ಸಿಂಹ ನುಡಿದರು.
ನೀವು ಅನೈತಿಕ ಮೈತ್ರಿ ಮಾಡಿಕೊಂಡಿ ರಬಹುದು. ಆದರೆ ಉತ್ತಮ ಕೆಲಸ ಮಾಡುವ ಮೂಲಕ ಬಿಜೆಪಿ ಮತ್ತು ಜನರ ನಡುವೆ ಇರುವ ಮೈತ್ರಿಯು ತಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದ ಅವರು, ನಮ್ಮ ಅಜೆಂಡಾ ಅಭಿವೃದ್ಧಿ, ನಿಮ್ಮದು ಕೆಸರೆರಚಾಟ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಟಾಂಗ್ ನೀಡಿದರು.

ನಮ್ಮ ಪಕ್ಷದ ಕಾರ್ಯಕರ್ತರು ಚುನಾ ವಣೆಯಲ್ಲಿ ನನ್ನ ಪರ ಧೈರ್ಯವಾಗಿ ಮತ ಕೇಳಲು ನನ್ನ ಕೆಲಸಗಳು ನಿದರ್ಶ ನವಾಗಿವೆ. ಮತದಾರರು ಸಹ ಮೋದಿ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಅರಿತು ಬೆಂಬಲಿಸಲಿದ್ದಾರೆ ಎಂದು ಪ್ರತಾಪ್ ಸಿಂಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಾಮುಂಡೇಶ್ವರಿ ವಾಹನ ಸಿಂಹ, ಹೀಗಾಗಿ ಆಕೆಯ ಆಶೀರ್ವಾದ ನನ್ನ ಮೇಲಿದೆ
ಮೈಸೂರು: ಇಲ್ಲಿ ಎಷ್ಟೇ ಹುಲಿಗಳಿರಬಹುದು, ಆದರೆ ಚಾಮುಂಡಿ ತಾಯಿಯ ವಾಹನ ಸಿಂಹ. ಹೀಗಾಗಿ ಆಕೆಯ ಆಶೀರ್ವಾದ ನನ್ನ ಮೇಲಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಪ್ರತಾಪಸಿಂಹ ಹೇಳಿದರು.
ಸೋಮವಾರ ನಾಮಪತ್ರ ಸಲ್ಲಿಸುವ ಮುನ್ನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ತಮ್ಮನ್ನು ಭೇಟಿಯಾದ ಮಾಧ್ಯಮ ಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನರೇಂದ್ರ ಮೋದಿ ಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಶ್ರೀರಾಮುಲು ಸೇರಿದಂತೆ ಪಕ್ಷದ ಇನ್ನಿತರೆ ಪ್ರಮುಖ ನಾಯಕರೂ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

Translate »