ಮತದಾರರ ಪಟ್ಟಿ ಪರಿಶೀಲನೆ: ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ
ಕೊಡಗು

ಮತದಾರರ ಪಟ್ಟಿ ಪರಿಶೀಲನೆ: ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ

July 25, 2018

ಮಡಿಕೇರಿ:  ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ 2019 ರ ಸಂಬಂಧ ಬೂತ್ ಮಟ್ಟದ ಅಧಿಕಾರಿ ಗಳು ಮನೆ ಮನೆಗೆ ಭೇಟಿ ನೀಡಿ ಮತ ದಾರರ ಪಟ್ಟಿ ಪರಿಶೀಲನೆ/ ಮತದಾರರ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಡಿಸಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.

ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2019 ರ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಭಾರತ ಚುನಾವಣಾ ಆಯೋ ಗವು ಬೂತ್‍ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು ಸೂಚಿಸಿದ್ದು, ಆ.10ರವರೆಗೆ ಬೂತ್ ಮಟ್ಟದ ಅಧಿಕಾರಿ ಗಳು ಮನೆ ಮನೆಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

01-01-2018ಕ್ಕೆ 18 ವರ್ಷ ಪೂರ್ಣ ಗೊಂಡ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತ ದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಯಾಗದೆ ವಂಚಿತರಾಗಿದ್ದಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿದ ಸಂದರ್ಭ ನಮೂನೆ-6 ರಲ್ಲಿ ಅರ್ಜಿ ಸಲ್ಲಿಸಬಹುದು.

01-01-2019ಕ್ಕೆ 18 ವರ್ಷ ಪೂರ್ಣಗೊಳ್ಳಲಿರುವ ಯುವಕ, ಯುವತಿಯರ ವಿವರಗಳನ್ನು ಬೂತ್ ಮಟ್ಟದ ಅಧಿ ಕಾರಿಗಳು ಮನೆ ಮನೆಗೆ ಭೇಟಿ ನೀಡಿದ ಸಂದರ್ಭ ಕುಟುಂಬದ ಮುಖ್ಯಸ್ಥರು ಮಾಹಿತಿ ಒದಗಿಸಬೇಕು. ಈಗಾಗಲೇ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರು ಗಳನ್ನು ತೆಗೆಯಲು ನಮೂನೆ-7 ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ನಮೂನೆ 8 ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-8 ಎ ಅರ್ಜಿಗಳನ್ನು ಸಲ್ಲಿಸಬಹುದು. ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ನಮೂನೆ-6 ಎ ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ www.ceokarnataka.kar.nic.in ಹಾಗೂ ಮತದಾರರ ನೋಂದಣಾಧಿಕಾರಿ/ ಸಹಾಯಕ ಮತದಾರರ ನೋಂದಣಾಧಿಕಾರಿಯವರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.

Translate »