ಪಟ್ಟಿಯಿಂದ ಮತದಾರರ ಹೆಸರು  ಬಿಟ್ಟು ಹೋಗದಂತೆ ಎಚ್ಚರ ವಹಿಸಿ
ಮೈಸೂರು

ಪಟ್ಟಿಯಿಂದ ಮತದಾರರ ಹೆಸರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ

April 5, 2023

ಮೈಸೂರು, ಏ.4(ಆರ್‍ಕೆ)-ಮತ ದಾರರ ಪಟ್ಟಿಯಿಂದ ಯಾರ ಹೆಸರೂ ಕೈಬಿಟ್ಟು ಹೋಗದಂತೆ ಎಚ್ಚರ ವಹಿಸು ವಂತೆ ಜಿಲ್ಲಾ ಚುನಾವಣಾಧಿಕಾರಿ ಗಳೂ ಆದ ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಂಜನಗೂಡು ತಾಲೂಕು ಕಚೇರಿಯ ಚುನಾವಣಾಧಿಕಾರಿ ಕಚೇರಿಯಲ್ಲಿ ಇಂದು ಸೆಕ್ಟರಲ್ ಅಧಿಕಾರಿಗಳು, ಸ್ಥಿರ ನಿಗಾ ತಂಡ ಹಾಗೂ ಬೂತ್ ಲೆವೆಲ್ ಅಧಿಕಾರಿ ಗಳ ಸಭೆ ನಡೆಸಿದ ಅವರು, ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಅಥವಾ ಹೊಸದಾಗಿ ಹೆಸರು ಸೇರಿಸಲು ಏಪ್ರಿಲ್ 11ರವರೆಗೆ ಅವಕಾಶವಿರುವುದರಿಂದ ತಡ ಮಾಡದೇ ಬರುವ ಅರ್ಜಿಗಳನ್ನು ಪರಿಶೀಲಿಸಿ ಪಟ್ಟಿ ಯಲ್ಲಿ ಸೇರಿಸಬೇಕೆಂದು ತಿಳಿಸಿದರು.

ಅದೇ ರೀತಿ ಮರಣ ಹೊಂದಿರುವ ವರ ಹೆಸರನ್ನು ಪಟ್ಟಿಯಿಂದ ಡಿಲೀಟ್ ಮಾಡುವ ಜೊತೆಗೆ 80 ವರ್ಷ ಮೇಲ್ಪ ಟ್ಟವರಿಗೆ 12ಡಿ ಮೂಲಕ ಅವರಿರುವ ಸ್ಥಳದಿಂ ದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಅಂತಹವರಿಗೆ ಅಧಿಕಾರಿಗಳು ಆಸಕ್ತಿ ವಹಿಸಿ ಸೌಲಭ್ಯ ಕಲ್ಪಿಸಬೇಕು ಎಂದು ಬೂತ್ ಮಟ್ಟದ ಅಧಿಕಾರಿಗಳಿಗೆ ಡಾ.ರಾಜೇಂದ್ರ ಅವರು ಸಲಹೆ ನೀಡಿದರು. ಸೂಕ್ಷ್ಮ, ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಅತೀ ಎಚ್ಚರಿಕೆ ಯಿಂದ ಕೆಲಸ ಮಾಡಿ, ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಲು ಅನುಕೂಲ ಕಲ್ಪಿಸಬೇಕು. ಮತಗಟ್ಟೆ ಗಳಲ್ಲಿ ಮೂಲ ಸೌಲಭ್ಯ ಒದಗಿಸಲಾಗಿದೆಯೇ ಎಂಬು ದನ್ನು ದೃಢಪಡಿಸಿಕೊಂಡು ಸಮಸ್ಯೆ ಎದುರಾದರೆ ತಡ ಮಾಡದೇ ಬಗೆಹರಿಸಬೇಕೆಂದೂ ತಾಕೀತು ಮಾಡಿದರು. ಸೆಕ್ಟರಲ್ ಅಧಿಕಾರಿಗಳು ಚುನಾವಣಾ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಿ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ನಂಜನಗೂಡು ಮತ್ತು ವರುಣಾ ಕ್ಷೇತ್ರಗಳ ಫ್ಲೈಯಿಂಗ್ ಸ್ಕ್ವಾಡ್ ಮತ್ತು ಸ್ಟ್ಯಾಟಿಕ್ ಸರ್ವೆಲನ್ಸ್ ತಂಡದ ಅಧಿಕಾರಿ ಗಳು ಎಚ್ಚರದಿಂದ ಕಾರ್ಯನಿರ್ವಹಿಸಿ ಚುನಾವಣಾ ಅಕ್ರಮ ಗಳು ನಡೆಯದಂತೆ ತಡೆಯಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಕೆ.ಎಂ.ಗಾಯಿತ್ರಿ, ಪ್ರಾಚ್ಯ ವಸ್ತು ಸಂಗ್ರಹಾಲಯ ಗಳ ಆಯುಕ್ತ ದೇವರಾಜ್, ಎರಡೂ ಕ್ಷೇತ್ರಗಳ ಚುನಾ ವಣಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Translate »