ಮತದಾನ ಪ್ರಜಾಪ್ರಭುತ್ವದ ಅತೀ ದೊಡ್ಡ ಹಬ್ಬ
ಹಾಸನ

ಮತದಾನ ಪ್ರಜಾಪ್ರಭುತ್ವದ ಅತೀ ದೊಡ್ಡ ಹಬ್ಬ

April 10, 2019

ಆಮಿಷಕ್ಕೆ ಒಳಗಾಗದೆ ಕಡ್ಡಾಯ ಮತದಾನ ಮಾಡಿ, ಸಿ-ವಿಜಿಲ್ ಆ್ಯಪ್‍ನಿಂದ ಚುನಾವಣಾ ಅಕ್ರಮ ತಿಳಿಸಿ: ಜಿಲ್ಲಾಧಿಕಾರಿ
ಹಾಸನ: ಮತದಾನ ಪ್ರಜಾ ಪ್ರಭುತ್ವದ ಅತೀ ದೊಡ್ಡ ಹಬ್ಬ. ಪ್ರತಿ ಯೊಬ್ಬರೂ ತಪ್ಪದೆ ಮತ ಚಲಾಯಿಸುವ ಮೂಲಕ ಈ ವ್ಯವಸ್ಥೆಯನ್ನು ಬಲಪಡಿಸ ಬೇಕು ಎಂದು ಜಿಲ್ಲಾ ಚುನಾವಣಾಧಿ ಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂ ಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲಿಂಗ ಅಲ್ಪಸಂಖ್ಯಾ ತರು ಮತ್ತು ದಮನಿತ ಮಹಿಳೆಯರಿಗಾಗಿ ಏರ್ಪಡಿಸಲಾಗಿದ್ದ ಮತದಾನದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮತದಾನ ಕೇವಲ ಹಕ್ಕಷ್ಟೇ ಅಲ್ಲ, ಕರ್ತವ್ಯ ಕೂಡ ಹೌದು. ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು. ಚುನಾವಣಾ ಅಕ್ರಮಗಳ ಬಗ್ಗೆ ಈಗ ಸಾರ್ವಜನಿಕರು ಸಿ.ವಿಜಿಲ್ ಆ್ಯಪ್ ಮೂಲಕ ನೇರವಾಗಿ ದೂರನ್ನು ಸಲ್ಲಿಸಬಹುದಾಗಿದೆ. ಸ್ಮಾರ್ಟ್ ಫೋನ್ ಗಳನ್ನು ಹೊಂದಿರುವವರು ಈ ಆ್ಯಪ್‍ನ್ನು ಡೌನ್‍ಲೋಡ್ ಮಾಡಿ ಹಣ, ಮಧ್ಯ, ಸರಕುಗಳ ಹಂಚಿಕೆ, ಚುನಾವಣಾ ಆಮಿಷಗಳು, ಬೆದರಿಕೆಗಳ ಬಗ್ಗೆ ವರದಿ ಮಾಡಿ ಎಂದು ತಿಳಿಸಿದರು.

ವಿದ್ಯುನ್ಮಾನ ಮತಯಂತ್ರಗಳ ಜೊತೆ ಈ ಬಾರಿ ವಿವಿ ಪ್ಯಾಟ್ ಯಂತ್ರ ಕೂಡ ಇದ್ದು, ತಾವು ಮಾಡಿದ ಮತದಾನದ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದು ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್.ವಿಜಯ ಪ್ರಕಾಶ್ ಮಾತನಾಡಿ, ಇದೊಂದು ವಿನೂ ತನ ಕಾರ್ಯಕ್ರಮವಾಗಿದೆ. ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದ, ಶೋಷಿತ ವರ್ಗದ ಮಹಿಳೆಯರಿಗಾಗಿ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಪ್ರತಿಯೊಬ್ಬರ ಮತವೂ ಅಮೂಲ್ಯ ವಾಗಿದ್ದು, ಎಲ್ಲರು ಚುನಾವಣಾ ವ್ಯವಸ್ಥೆ ಯಲ್ಲಿ ಪಾಲ್ಗೊಳ್ಳÀಬೇಕು. ತಮ್ಮ ಸ್ನೇಹಿತರು ನೆರೆಹೊರೆಯವರಿಗೂ ನೈತಿಕ ಮತದಾ ನದ ಬಗ್ಗೆ ಜಾಗೃತಿ ಮೂಡಿಸಿ ಏ. 18 ರಂದು ತಮ್ಮ ಹಕ್ಕು ಚಲಾಯಿಸಲು ಪ್ರೇರೇ ಪಿಸಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಕಡ್ಡಾಯ ಮತದಾನದ ಪ್ರತಿ ಜ್ಞಾ ವಿಧಿ ಬೋಧಿಸಲಾಯಿತು. ಅಲ್ಲದೆ ಮತದಾನ ಯಂತ್ರ ಮತ್ತು ವಿ.ವಿ.ಪ್ಯಾಟ್ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುಟ್ಟಸ್ವಾಮಿ, ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪಾಪಬೋವಿ ಮತ್ತಿತರರು ಹಾಜರಿದ್ದರು.

Translate »