ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರಿಗೆ ಎಚ್ಚರಿಕೆ

ಬೆಂಗಳೂರು, ಜೂ. 12- ಸರ್ಕಾರಿ ಅಧಿಕಾರಿಗಳು, ನೌಕರರು ಮತ್ತು ಅವರ ಅವಲಂಬಿತರು ಪಡೆ ದಿರುವ ಬಿಪಿಎಲ್ ಕಾರ್ಡ್‍ಗಳನ್ನು ಒಂದು ತಿಂಗಳೊಳಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಗಳ ಇಲಾಖೆಗೆ ಹಿಂದಿರುಗಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದರ ಜೊತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಸರ್ಕಾರದ ಮುಖ್ಯ ಕಾರ್ಯ ದರ್ಶಿ ಟಿ.ಎಂ. ವಿಜಯಭಾಸ್ಕರ್ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಸುತ್ತೋಲೆ ಹೊರಡಿಸಿ ರುವ ಅವರು, ನಿಗಮ, ಮಂಡಳಿ, ಪ್ರಾಧಿ ಕಾರ, ವಿಶ್ವವಿದ್ಯಾನಿಲಯ ಸೇರಿದಂತೆ ಸಂಸ್ಥೆಗಳ ಅಧಿಕಾರಿಗಳು, ನೌಕರರು ಹಾಗೂ ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡವರಿಗೆ ವಿತರಿಸುವ ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಬಗ್ಗೆ ಅನೇಕ ದೂರುಗಳು ಹಾಗೂ ಮಾಹಿತಿಗಳು ಬಂದಿವೆ. ಸರ್ಕಾರಿ ನೌಕರರಾಗಿ ಬಿಪಿಎಲ್ ಕಾರ್ಡ್ ಪಡೆಯುವುದು ಅಕ್ಷಮ್ಯ ಅಪರಾಧ ವಾಗಿದೆ. ಅಂತಹವರು 1 ತಿಂಗಳ ಒಳಗಾಗಿ ಬಿಪಿಎಲ್ ಕಾರ್ಡ್ ಹಿಂದಿರುಗಿಸದಿದ್ದಲ್ಲಿ ಶಿಸ್ತು ಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆ ಹೂಡಿ, ಅವರಿಂದ ಸರ್ಕಾರಕ್ಕೆ ಆಗಿರುವ ನಷ್ಟವನ್ನು ವಸೂಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.