ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ
ಚಾಮರಾಜನಗರ

ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ

July 17, 2018

ಚಾಮರಾಜನಗರ:  ಕಬಿನಿ ಹಾಗೂ ಕೆಆರ್‌ಎಸ್‌ ಜಲಾಯಶದಿಂದ ಹೆಚ್ಚಿನ ನೀರನ್ನು ನದಿಗೆ ಬಿಡುತ್ತಿರುವುದರಿಂದ ಕೊಳ್ಳೇಗಾಲ ತಾಲೂಕಿನ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ಹಾಗೂ ನದಿ ದಂಡೆಗಳಲ್ಲಿ, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮನವಿ ಮಾಡಿದ್ದಾರೆ.

ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು ಜಲಾಶಯ ಗಳು ಭರ್ತಿಯಾಗಿವೆ. ಕಬಿನಿ ಜಲಾ ಶಯದಿಂದ 40ಸಾವಿರ ಕ್ಯೂಸೆಕ್ಸ್ ಹಾಗೂ ಕೆಆರ್‍ಎಸ್ ಜಲಾಶಯದಿಂದ 70ಸಾವಿರ ಕ್ಯೂಸೆಕ್ಸ್ ಸೇರಿದಂತೆ 1.10 ಲಕ್ಷ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಟ್ಟಿರು ವುದಾಗಿ ತಿಳಿದು ಬಂದಿದ್ದು ನದಿಯಲ್ಲಿ ಹೆಚ್ಚಿನ ಪ್ರವಾಹ ಬರುವ ಸಂಭವವಿದೆ.

ಈ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲೂಕು ವ್ಯಾಪ್ತಿಯ ಕಾವೇರಿ ನದಿ ಪಾತ್ರದಲ್ಲಿ ಬರುವ ಮುಳ್ಳೂರು, ಹಳೆ ಹಂಪಾಪುರ, ದಾಸನಪುರ, ಹಳೆಅಣಗಳ್ಳಿ, ಹರಳೆ, ಸರಗೂರು, ಧನಗೆರೆ, ಎಡಕುರಿಯ, ಸತ್ತೇಗಾಲ ಗ್ರಾಮಗಳಲ್ಲಿ ಹಾಗೂ ನದಿಯ ತಗ್ಗು ಪ್ರದೇಶ ಹಾಗೂ ದಂಡೆಗಳಲ್ಲಿ ವಾಸಿಸುತ್ತಿರುವ ಜನರು ಅವರ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಬೇಕು. ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ತಿಳಿಸಿದ್ದಾರೆ.

ಸಹಾಯವಾಣಿ ಆರಂಭ: ಜನರ ನೆರವಿಗಾಗಿ ಸಹಾಯವಾಣಿ ತೆರೆಯಲಾಗಿದೆ. ಯಾವುದೇ ನೆರವು ಅವಶ್ಯವಿದ್ದಲ್ಲಿ ತಹಶೀಲ್ದಾರ್ ಕೊಳ್ಳೇಗಾಲ ತಾಲೂಕು ಮೊ.94486 25194, ಅಗ್ನಿ ಶಾಮಕ ಅಧಿಕಾರಿ ಚಾಮರಾಜನಗರ ಮೊ.99642 63822, ತಾಲೂಕು ಕಂಟ್ರೋಲ್ ರೂಂ ದೂ.ಸಂ. 08224-252046 ಮತ್ತು 252042, ಜಿಲ್ಲಾ ಕಂಟ್ರೋಲ್ ರೂಂ ದೂ.ಸಂ. 08226-223160, ರಾಜಸ್ವ ನಿರೀಕ್ಷಕರು, ಕಸಬಾ, ಕೊಳ್ಳೇಗಾಲ ಮೊ.97414 89698, ಗ್ರಾಮಲೆಕ್ಕಾಧಿಕಾರಿ ಮೊ.97312 00229 ಸಂಪರ್ಕಿಸಬೇಕು.

Translate »