ಸೋಮವಾರಪೇಟೆಯಲ್ಲಿ ಮೂರು ದಿನದಿಂದ ನೀರು ಸರಬರಾಜಿಲ್ಲಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಎಫೆಕ್ಟ್

ಸೋಮವಾರಪೇಟೆ: ಏ.18 ರಂದು ಸುರಿದ ಧಾರಾಕಾರ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರಿಳಿದ ಪರಿಣಾಮ ಕಳೆದ ಮೂರು ದಿನಗಳಿಂದ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.

ಹಾರಂಗಿ ಡ್ಯಾಂ ನಿಂದ ಪಟ್ಟಣಕ್ಕೆ ನೀರು ಸರಬರಾಜಾಗುವ ಮಾರ್ಗದಲ್ಲಿ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. 30 ಕಂಬಗಳು ನೆಲಕ್ಕುರಿಳಿದ್ದು ಸೆಸ್ಕ್ ಸಿಬ್ಬಂದಿ ಗಳು ಕಂಬಗಳ ದುರಸ್ತಿ ಕಾರ್ಯದಲ್ಲಿ ತೊಡಗಿ ದ್ದಾರೆ. ಇನ್ನೆರಡು ದಿನಗಳಲ್ಲಿ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದ್ದು, ನಂತರ ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜು ಮಾಡ ಲಾಗುತ್ತದೆ ಎಂದು ಪಪಂ ಮುಖ್ಯಾಧಿ ಕಾರಿ ನಟರಾಜ್ ತಿಳಿಸಿದ್ದಾರೆ. ಈಗಾಗಲೆ ದುದ್ದಗಲ್ಲು ಹೊಳೆಯಿಂದ ನೀರನ್ನು ಸರಬರಾಜು ಮಾಡಲಾಗುತ್ತಿತ್ತು. ಪ್ರತಿ ವಾರ್ಡ್‍ಗಳಿಗೆ ಸಾಕಷ್ಟು ನೀರು ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.