ಮಳೆ ಬಂದರೆ ಮಾತ್ರ ತಮಿಳುನಾಡಿಗೆ ನೀರು ಬಿಡಿ
ಮೈಸೂರು

ಮಳೆ ಬಂದರೆ ಮಾತ್ರ ತಮಿಳುನಾಡಿಗೆ ನೀರು ಬಿಡಿ

June 26, 2019
  •  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ
  • ಸದ್ಯ, ಕರ್ನಾಟಕಕ್ಕೆ ನಿರಾಳ

ನವದೆಹಲಿ: ಕಾವೇರಿ ನೀರಿನ ವಿವಾದದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ವಾದವನ್ನು ಪುರಸ್ಕರಿಸದೇ ಮಳೆ ಬಂದರೆ ತಮಿಳುನಾಡಿಗೆ ನೀರು ಹರಿಸಿ ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚನೆ ನೀಡಿದ್ದು, ಇದರಿಂದ ರಾಜ್ಯ ಸರ್ಕಾರ ತುಸು ನಿರಾಳವಾಗಿದೆ. ಸೋಮವಾರ ನವದೆಹಲಿಯಲ್ಲಿ ನಡೆದಿದ್ದ ಕಾವೇರಿ ನೀರು ನಿರ್ವಹಣಾ ಸಭೆಯಲ್ಲಿ, ಕರ್ನಾಟಕ ಜೂನ್ ತಿಂಗಳಲ್ಲಿ ತಮಿಳುನಾಡಿಗೆ ಬಿಡಬೇಕಾಗಿದ್ದ ನೀರನ್ನು ಯಾಕೆ ಬಿಟ್ಟಿಲ್ಲ ಎಂದು ನೀರು ನಿರ್ವಹಣಾ ಮಂಡಳಿ ಪ್ರಶ್ನಿಸಿತ್ತು. ಆದರೆ ಈ ಬಾರಿ ಕಾವೇರಿ ಕೊಳ್ಳದ ಭಾಗದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವಾಗಿಲ್ಲ ಎಂದು ಕರ್ನಾಟಕ ವಾದಿಸಿತ್ತು. ನಮ್ಮ ಜಲಾಶಯಗಳೇ ಖಾಲಿ, ಖಾಲಿಯಾಗಿದೆ. ನಮ್ಮ ರೈತರ ಬೆಳೆಗಳಿಗೆ ನೀರಿಲ್ಲ, ಕುಡಿಯಲೂ ನೀರಿಲ್ಲ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ತಿಳಿಸಿತ್ತು. ಕೊನೆಗೂ ಮಳೆ ಬಂದರೆ ಜೂನ್ 30ರೊಳಗೆ ತಮಿಳುನಾಡಿಗೆ ನೀರು ಹರಿಸಿ ಎಂದು ಸೂಚನೆ ನೀಡಿದೆ.

Translate »