ಜನರ ತೀರ್ಪು ಒಪ್ಪಿಕೊಳ್ಳುತ್ತೇವೆ
ಮೈಸೂರು

ಜನರ ತೀರ್ಪು ಒಪ್ಪಿಕೊಳ್ಳುತ್ತೇವೆ

November 11, 2020

ಬಾಗಲಕೋಟೆ, ನ.10-ಉಪ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಶಿರಾದಲ್ಲಿ ನಾವು ಗೆಲ್ಲುವ ನಿರೀಕ್ಷೆ ಇತ್ತು. ಆರ್.ಆರ್. ನಗರದಲ್ಲಿ ಒಳ್ಳೆಯ ಫೈಟ್ ಕೊಡ್ತಿವಿ ಎಂದುಕೊಂಡಿದ್ವಿ. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಕೊಟ್ಟ ತೀರ್ಪು ಒಪ್ಪಿಕೊಳ್ಳಬೇಕಾ ಗುತ್ತೇ. ಹಾಗಾಗಿ ಜನರು ಕೊಟ್ಟ ತೀರ್ಪು ನಾವು ಒಪ್ಪಿಕೊಂಡಿ ದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿರುವವರು ಚುನಾವಣೆ ನಿಷ್ಪಕ್ಷಪಾತ, ಮುಕ್ತವಾಗಿ ನಡೆಸುವ ಜವಾಬ್ದಾರಿ ಹೊಂದಿರುತ್ತಾರೆ. ಆದರೆ ನನಗೆ ಇರುವ ಮಾಹಿತಿ ಪ್ರಕಾರ ಬಿಜೆಪಿ ಅಧಿಕಾರ ದುರುಪಯೋಗಪಡಿಸಿಕೊಂಡಿದೆ. ಆದರೂ ತೀರ್ಪು ಒಪ್ಪಿಕೊಳ್ಳಲೇಬೇಕು, ಹಾಗಾಗಿ ಒಪ್ಪಿಕೊಂಡಿದ್ದೇವೆ ಎಂದರು.

 

Translate »