ನಮಗೆ ನೀಡಿರುವ ಸವಾಲು ಸಮರ್ಥವಾಗಿ ಎದುರಿಸುತ್ತೇವೆ: ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ
ಮೈಸೂರು

ನಮಗೆ ನೀಡಿರುವ ಸವಾಲು ಸಮರ್ಥವಾಗಿ ಎದುರಿಸುತ್ತೇವೆ: ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ

July 18, 2018

ಮೈಸೂರು:  ರಾಜ್ಯದ ಕೆಪಿಸಿಸಿ ನೊಗ ಹೊತ್ತಿರುವ ದಿನೇಶ್ ಗುಂಡೂರಾವ್ ಮತ್ತು ತಮ್ಮ ಮೇಲೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂದಿಯವರು ಹೆಚ್ಚಿನ ಜವಾಬ್ದಾರಿ ನೀಡಿದ್ದು, ನಮ್ಮ ಮುಂದಿ ರುವ ಸವಾಲುಗಳನ್ನು ಸಮರ್ಥವಾಗಿ ನಿಭಾ ಯಿಸಿ ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನು ಬಲಿಷ್ಠಗೊಳಿಸಲು ಸಂಕಲ್ಪ ಮಾಡಿ ದ್ಧೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಇಂದಿಲ್ಲಿ ತಿಳಿಸಿದರು.

ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಭೇಟಿ ನೀಡಿದ್ದ ಅವರು, ನಗರ-ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿ ಗಳು, ಮುಖಂಡರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಬುಡ ಸಮೇತಕಿತ್ತು ಹಾಕಬೇಕಿದೆ. ರಾಜ್ಯದಲ್ಲಿ 28 ಸ್ಥಾನಗಳನ್ನೂ ಗೆಲ್ಲುವ ಮೂಲಕ ರಾಹುಲ್ ಗಾಂಧಿ ಅವರನ್ನು ಪ್ರಧಾನಮಂತ್ರಿ ಮಾಡಲು ಸಂಕಲ್ಪ ತೊಡಬೇಕಾಗಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಸರ್ಕಾರದ ಆಡಳಿತ ಅವಧಿಯಲ್ಲಿ ರಾಜ್ಯ ಸರ್ಕಾರ ನುಡಿದಂತೆ ನಡೆದಿದೆ. ಜನಪರ ಕಾರ್ಯಕ್ರಮಗಳನ್ನು ನೀಡಿದೆ. ದೇಶದಲ್ಲೇ ಮುಂಚೂಣಿ ರಾಜ್ಯವಾಗಿ ಹೊರಹೊಮ್ಮಿದೆ. ಹೀಗಿದ್ದರೂ ಕಳೆದ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಯಿ ತೆಂದು ಪಕ್ಷದ ಮುಖಂಡರು, ಕಾರ್ಯಕರ್ತರು ಆಂತಕ ಪಡಬೇಕಾಗಿಲ್ಲ. ಉತ್ತಮ ಆಡಳಿತ, ಜನಪರ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಆದರೂ ರಾಜ್ಯದ ಜನರು ಕಾಂಗ್ರೆಸ್ ಮತ್ತೊಮ್ಮೆ ಅವಕಾಶ ನೀಡ ಬೇಕಾಗಿತ್ತು ಎಂದು ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದರು.

ದೇವರಾಜ ಅರಸುರಿಂದ ಸಿದ್ದರಾಮಯ್ಯ ರವರೆಗೆ ಪ್ರಬಲ ನಾಯಕರನ್ನು ನೀಡಿರುವ ಮೈಸೂರು ಜಿಲ್ಲೆಯಿಂದಲೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೊಸ ಸಂದೇಶ ಬರಬೇಕು. ಆ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮ ವಹಿಸಿ ಕೇಂದ್ರದಲ್ಲಿ ರಾಹುಲ್‍ಗಾಂಧಿ ಪ್ರಧಾನಿ ಹುದ್ದೆಗೇರಿಸಲು ಶ್ರಮವಹಿ ಸುವಂತೆ ಕರೆ ನೀಡಿದರು.

ಕಾಂಗ್ರೆಸ್ ಪಕ್ಷದ ಸಾಧನೆಯನ್ನು ರಾಜ್ಯದ ಜನರ ಮುಂದಿಟ್ಟು ಪಕ್ಷದತ್ತ ಜನರ ಒಲವು ಗಳಿಸುವ ಪ್ರಯತ್ನ ಮಾಡಬೇಕು. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಬೇಕು ಎಂದು ಹೇಳಿದರು.

ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಶಾಸಕರಾದ ವಾಸು, ಕಳಲೆ ಕೇಶವ ಮೂರ್ತಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ ಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಡಾ.ಪುಷ್ಪಾ ಅಮರನಾಥ್, ಜಿಲ್ಲಾಧ್ಯಕ್ಷೆ ನಂದಿನಿ ಚಂದ್ರಶೇಖರ್ ಇನ್ನಿತರರು ಉಪಸ್ಥಿತರಿದ್ದರು.

Translate »