ಬೆಂಗಳೂರು, ಏ.೫ (ಕೆಎಂಶಿ)-ಯಾವುದೇ ಸಮಾಜ, ಸಂಘಟನೆಯಾಗಲಿ ಕಾನೂನನ್ನು ಕೈಗೆ ತೆಗೆದುಕೊಳ್ಳದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು. ಸರ್ಕಾರದ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಯಾವುದೇ ಭೇದಭಾವವಿಲ್ಲದೆ ಕೆಲಸ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಏ.೧೬ರಿಂದ ಪ್ರತಿಭಟನೆ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರಿಗೆ ಪ್ರತಿ ಭಟಿಸುವ ಹಕ್ಕಿದೆ. ಆದರೆ ಆಧಾರರಹಿತವಾದ ಹೇಳಿಕೆಗೆ ನಾನು ಉತ್ತರಿಸುವುದಿಲ್ಲ ಎಂದರು.
ಬಿ.ಜೆ.ಪಿ ರಾಷ್ಟಿçÃಯ ಪಕ್ಷ. ಕರ್ನಾಟಕ ಜನತೆಯ ಆಶೀರ್ವಾದ ಇದೆ. ಬರುವ ದಿನಗಳಲ್ಲಿ ಇನ್ನಷ್ಟು ಉತ್ತಮ ಆಡಳಿತ ನೀಡುವ ವಿಶ್ವಾಸವಿದೆ. ಹೇಳಿಕೆ ಗಳಿಂದ ಸಮಸ್ಯೆ ಇತ್ಯರ್ಥವಾಗುವುದಿಲ್ಲ. ಹಲವಾರು ವಿಚಾರಗಳು ಹಿಂದಿರುವ ವಿಚಾರ. ೨೦೦೧, ೨೦೦೨ರ ಆದೇಶಗಳು. ನಾವು ಯಾವುದೇ ಹೊಸ ಆದೇಶವನ್ನು ಹೊರಡಿಸಿಲ್ಲ. ಎಲ್ಲ ವನ್ನೂ ಗಮನದಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುವುದಾಗಿ ತಿಳಿಸಿದರು. ಆಜಾನ್ ಬಗ್ಗೆ ಈಗಾಗಲೇ ಉಚ್ಛ ನ್ಯಾಯಾಲಯದ ಆದೇಶವಿದೆ. ಆದೇಶ ಅನುಷ್ಠಾನ ಏಕಾಗಿಲ್ಲ ಎಂದು ಮತ್ತೊಂದು ಆದೇಶವಿದೆ. ಎಷ್ಟು ಡೆಸಿಬಲ್ ಇರಬೇಕು ಎಂದು ಸೂಚಿಸಲಾಗಿದೆ. ಡೆಸಿ ಬಲ್ ಮೀಟರ್‌ಗಳನ್ನು ಜಿಲ್ಲಾ ಮಟ್ಟದಲ್ಲಿ ಖರೀದಿ ಸಲು ಆದೇಶವಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಮಾಡುವ ಕೆಲಸವಿದು. ಒತ್ತಾಯಪೂರ್ವಕ ವಾಗಿ ಮಾಡುವಂಥದ್ದಲ್ಲ. ಕ್ಷೇತ್ರ ಮಟ್ಟದಲ್ಲಿ ಹಲ ವಾರು ಸಂಘಟನೆಗಳ
ಜೊತೆಗೆ ಪೊಲೀಸ್ ಠಾಣೆಯಿಂದ ಹಿಡಿದು ಜಿಲ್ಲಾ ಮಟ್ಟದಲ್ಲಿ ಹಿಂದೆಯೇ ಮಾಡಲಾ ಗಿದೆ. ಮುಂದೂ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇದುವರೆಗೂ ಯಾವುದೇ ಚರ್ಚೆಯಾಗಿಲ್ಲ. ಅಮಿತ್ ಷಾ ಮತ್ತು ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ವೇಳೆ ವಿಚಾರ ಪ್ರಸ್ತಾಪವಾಗುವ ನಿರೀಕ್ಷೆ ಇದೆ ಎಂದರು. ಆಂಧ್ರಪ್ರದೇಶದ ಐ.ಟಿ. ಬಿ.ಟಿ ಸಚಿವ ಕೆ.ಟಿ.ರಾಮರಾವ್ ಅವರು ಮಾಡಿರುವ ಟ್ವೀಟ್ ಅತ್ಯಂತ ಹಾಸ್ಯಾಸ್ಪದವಾಗಿದೆ. ಇಡೀ ಜಗತ್ತಿನ ಜನ ಬೆಂಗಳೂರಿಗೆ ಬರುತ್ತಿದ್ದಾರೆ. ಹೆಚ್ಚಿನ ಯೂನಿಕಾರ್ನ್ ಮತ್ತು ಸ್ಟಾರ್ಟ್ ಅಪ್‌ಗಳು ಬೆಂಗಳೂರಿನಲ್ಲಿವೆ ಎಂದರು.