ಕೆ.ಆರ್.ಪೇಟೆಯಲ್ಲಿ ಕಪ್ಪುಪಟ್ಟಿ ಧರಿಸಿ ಧರಣಿ
ಮಂಡ್ಯ

ಕೆ.ಆರ್.ಪೇಟೆಯಲ್ಲಿ ಕಪ್ಪುಪಟ್ಟಿ ಧರಿಸಿ ಧರಣಿ

May 6, 2021

ಕೆ.ಆರ್.ಪೇಟೆ, ಮೇ 5(ಶ್ರೀನಿವಾಸ್)- ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ಅಲ್ಲಿನ ಬಿಜೆಪಿ ಕಾರ್ಯ ಕರ್ತರು ಹಾಗೂ ಜನಸಾಮಾನ್ಯರ ಮೇಲೆ ನಡೆ ಸುತ್ತಿರುವ ರಾಜಕೀಯ ವೈಷಮ್ಯದ ದಬ್ಬಾಳಿಕೆ ಯನ್ನು ಖಂಡಿಸಿ ತಾಲೂಕು ಬಿಜೆಪಿ ಕಾರ್ಯ ಕರ್ತರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ ದರು. ತಾಲ್ಲೂಕು ಬಿಜೆಪಿ ಅಧ್ಯಕ್ಷ ಎ.ಜಿ. ಪರಮೇಶ್ ಅರವಿಂದ್ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ ಪಶ್ಚಿಮಬಂಗಾಳ ರಾಜ್ಯ ದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿ ಸಬೇಕು ಎಂದು ಆಗ್ರಹಿಸಿದರು.

ಪಶ್ಚಿಮ ಬಂಗಾಳದಲ್ಲಿ ದ್ವೇಷÀದ ರಾಜ ಕಾರಣ ಮಾಡುತ್ತಿರುವ ಮಮತಾ ಬ್ಯಾನರ್ಜಿ ಅವ ರಿಗೆ ಸರ್ಕಾರ ನಡೆಸಲು ಯೋಗ್ಯತೆ ಇಲ್ಲವಾಗಿದೆ. ಮುಖ್ಯಮಂತ್ರಿ ಪದವಿಗೆ ಅವಮಾನ ಮಾಡಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿರುವ ಮಮತಾ ಬ್ಯಾನರ್ಜಿ ರಾಜಕೀಯದ ಕಪ್ಪುಚುಕ್ಕೆ ಯಾಗಿದ್ದಾರೆ. ತಕ್ಷಣವೇ ಪಶ್ಚಿಮಬಂಗಾಳ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು. ಇಲ್ಲದಿದ್ದರೆ ಪಶ್ಚಿಮಬಂಗಾಳ ರಾಜ್ಯದ ಜನತೆಯ ನೆಮ್ಮದಿಯನ್ನು ಹಾಳು ಮಾಡಿ ದೌರ್ಜನ್ಯ ದಬ್ಬಾಳಿಕೆ, ರಕ್ತಪಾತ ನಡೆಸಲಿ ದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಜಾಪ್ರಭುತ್ವ ಸರ್ಕಾರ ನಡೆಸುವ ಯೋಗ್ಯತೆಯನ್ನು ಕಳೆದುಕೊಂಡಿರುವ ಮಮತಾಬ್ಯಾನರ್ಜಿ ಅವರನ್ನು ಮುಖ್ಯ ಮಂತ್ರಿ ಸ್ಥಾನದಿಂದ ಕಿತ್ತೊಗೆಯಬೇಕು. ಪಶ್ವಿಮಬಂಗಾಳದಲ್ಲಿ ಬಿಜೆಪಿ ಕಾರ್ಯ ಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯ ಮಾಡಿದರು. ಕೋವಿಡ್ ಹಿನ್ನೆಲೆ ಯಲ್ಲಿ ಸರಳವಾಗಿ ಪ್ರತಿಭಟನೆ ಮಾಡಲಾಗಿದೆ. ಇದೇ ರೀತಿ ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ, ದಬ್ಬಾಳಿಕೆಗಳು ಮುಂದುವರೆದರೆ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ತಾಲೂಕು ಬಿಜೆಪಿ ಉಪಾಧ್ಯಕ್ಷ ಕೃಷ್ಣÉ್ಣೀಗೌಡ, ಪ್ರಧಾನ ಕಾರ್ಯ ದರ್ಶಿ ಚೋಕನಹಳ್ಳಿ ಪ್ರಕಾಶ್, ಟೆನ್ನಿಸ್ ನಂಜಪ್ಪ, ತಾಲೂಕು ಬಿಜೆಪಿ ಕಾರ್ಯದರ್ಶಿ ಭಾರತೀಪುರ ಪುಟ್ಟಣ್ಣ, ತಾಲೂಕು ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಸಾರಂಗಿ ನಾಗಣ್ಣ, ಪ್ರಧಾನ ಕಾರ್ಯದರ್ಶಿ ಭಾರತೀಪುರ ಶ್ರೀನಿ ವಾಸ್, ತಾಲೂಕು ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೇಶ್ ಗೌಡ, ರೈತ ಮೋರ್ಚಾ ನಗರ ಘಟಕದ ಅಧ್ಯಕ್ಷ ಹೊಸಹೊಳಲು ರಾಜು, ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ರವಿಶಿವಕುಮಾರ್, ಎಸ್.ಟಿ. ಮೋರ್ಚಾ ಅಧ್ಯಕ್ಷ ಮಹೇಶ್ ನಾಯಕ್, ಸಂತೇಬಾಚಹಳ್ಳಿ ಹೋಬಳಿ ಘಟಕದ ಬಿಜೆಪಿ ಅಧ್ಯಕ್ಷ ರಂಗಸ್ವಾಮಿ, ಓಬಿಸಿ ಮೋರ್ಚಾ ಅಧ್ಯಕ್ಷ ಸೋಮಶೇಖರ್, ರೈತ ಮೋರ್ಚಾ ಅಧ್ಯಕ್ಷ ತೇಜುಕುಮಾರ್, ಉಪಾಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಹಲವು ಬಿಜೆಪಿ ಕಾರ್ಯ ಕರ್ತರು ಭಾಗವಹಿಸಿದ್ದರು.

Translate »