ಶಾಲಾ-ಕಾಲೇಜುಗಳಲ್ಲಿ ಹೆಚ್ಚಿನ ಸೋಂಕು ಹಿನ್ನೆಲೆ ತರಗತಿಯಿಂದ ಹೊರಬಂದ ನಂತರ  ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳಿ
ಮೈಸೂರು

ಶಾಲಾ-ಕಾಲೇಜುಗಳಲ್ಲಿ ಹೆಚ್ಚಿನ ಸೋಂಕು ಹಿನ್ನೆಲೆ ತರಗತಿಯಿಂದ ಹೊರಬಂದ ನಂತರ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳಿ

April 1, 2021

ಮೈಸೂರು, ಮಾ.31(ಎಂಟಿವೈ)- ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಕಂಡು ಬರು ತ್ತಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ತರಗತಿ ಮುಗಿದ ಬಳಿಕ ಕಡ್ಡಾಯ ವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ. ಅಮರನಾಥ್ ಸಲಹೆ ನೀಡಿದ್ದಾರೆ.

ಮೈಸೂರಲ್ಲಿ ಬುಧವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಮೈಸೂರಿನ ಎರಡು ಶಾಲೆ, ಬನ್ನೂರು, ಕೆ.ಆರ್.ನಗರಗಳ ಶಾಲೆಯ ವಿದ್ಯಾರ್ಥಿ ಗಳಿಗೆ ಸೋಂಕು ದೃಢಪಟ್ಟಿದೆ. ಬನ್ನೂರಲ್ಲಿ 23, ಕೆ.ಆರ್.ನಗರದಲ್ಲಿ 13, ಮೈಸೂರು ನಗರದಲ್ಲಿ 4-5 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಶಾಲೆ ಒಳಗೆ ವಿದ್ಯಾರ್ಥಿಗಳೆಲ್ಲರೂ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸುತ್ತಿದ್ದಾರೆ. ತರಗತಿ ಯಿಂದ ಹೊರ ಬಂದ ನಂತರ ವಿದ್ಯಾರ್ಥಿಗಳೆಲ್ಲರೂ ಮಾಸ್ಕ್ ಧರಿಸದೆ ಗುಂಪುಗೂಡುತ್ತಿದ್ದಾರೆ. ಯಾರೋ ಒಬ್ಬರಿಗೆ ಸೋಂಕು ತಗುಲಿದ್ದರೆ ಗುಂಪು ಗೂಡಿದರೆ ಹಲವರಿಗೆ ಹರಡುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಅಧಿ ಕಾರಿಗಳೊಂದಿಗೆ ಚರ್ಚಿಸಿ, ವಿದ್ಯಾರ್ಥಿ ಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ಕ್ರಮಕೈಗೊಳ್ಳುವಂತೆ ಮನವಿ ಮಾಡಿರುವುದಾಗಿ ತಿಳಿಸಿದರು.

ಪ್ರಕರಣ ಕಂಡು ಬಂದರೆ ತಕ್ಷಣ ಸೋಂಕಿತ ವಿದ್ಯಾರ್ಥಿಗಳನ್ನು 14 ದಿನ ಹೋಮ್ ಐಸೋಲೇಷನ್‍ನಲ್ಲಿ ಅಥವಾ ಆಸ್ಪತ್ರೆಗೆ ದಾಖಲಿಸುವಂತೆ ಸೂಚನೆ ನೀಡಲಾಗಿದೆ. ಪ್ರಕರಣ ಕಂಡು ಬಂದ ಶಾಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ಕೋವಿಡ್-19 ಟೆಸ್ಟ್ ಮಾಡಲಾಗುತ್ತಿದೆ. ಬನ್ನೂರಲ್ಲಿ 250 ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಮಾಡ ಲಾಗಿದೆ. ಮೈಸೂರು ಶಾಲೆಯೊಂದರ ಶಿಕ್ಷಕರಿಗೆ ಪಾಸಿಟಿವ್ ಬಂದಿದ್ದ ಕಾರಣ ಆ ಶಾಲೆಯ 600 ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಲಾಗಿದೆ. ಕೆ.ಆರ್.ನಗರದಲ್ಲಿ ಪಾಸಿ ಟಿವ್ ಬಂದಿದ್ದ ಶಾಲೆಯ ಎಲ್ಲಾ ವಿದ್ಯಾರ್ಥಿ ಗಳಿಗೂ ಪರೀಕ್ಷೆ ಮಾಡಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ. ಶಾಲೆಯನ್ನು ಸ್ಯಾನಿಟೈಸ್ ಮಾಡಿಸಲು ಕ್ರಮ ಕೈಗೊಳ್ಳ ಲಾಗಿದೆ. ಶಾಲೆ ಮುಚ್ಚಿಸಲು ಅವಕಾಶವಿಲ್ಲ, ಸ್ಯಾನಿಟೈಸ್ ಮಾಡಿದ ನಂತರ ತರಗತಿ ಗಳು ಪುನರಾರಂಭಗೊಳ್ಳಲಿವೆ ಎಂದರು.

Translate »