ನವದೆಹಲಿ, ನ.9- ಸುಪ್ರೀಂಕೋರ್ಟ್ ಬುಧವಾರ (ನವೆಂಬರ್ 13) ಬೆಳಿಗ್ಗೆ 10.30ಕ್ಕೆ ಅನರ್ಹ ಶಾಸಕರ ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ. ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಅನರ್ಹ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾ ಧೀಶ ಎನ್.ವಿ.ರಮಣ ಪೀಠ ಪ್ರಕರಣದ ವಾದವನ್ನು ಆಲಿಸಿ ತೀರ್ಪನ್ನು ಕಾಯ್ದರಿ ಸಿತ್ತು. ಈ ನಡುವೆ ಕಾಂಗ್ರೆಸ್ ಸಿಎಂ ಯಡಿಯೂರಪ್ಪನವರ ಹುಬ್ಬಳ್ಳಿಯ ಆಡಿಯೋವನ್ನು ಸಾಕ್ಷ್ಯವಾಗಿ ಪರಿಗಣಿಸಬೇಕೆಂದು ಮನವಿ ಮಾಡಿಕೊಂಡಿತ್ತು. ಕಾಂಗ್ರೆಸ್ ಪರ ವಕೀಲ ವಾದವನ್ನು ಆಲಿಸಿದ ಪೀಠ ತೀರ್ಪು ನೀಡುವ ಸಂದರ್ಭದಲ್ಲಿ ಆಡಿಯೋವನ್ನ ಸಾಕ್ಷ್ಯವನ್ನಾಗಿ ಪರಿಗಣಿಸಲಾಗುತ್ತದೆ ಎಂದು ಸೂಚಿಸಿತ್ತು. ತೀರ್ಪು ವಿಳಂಬವಾದ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಪರ ವಕೀಲರಾದ ಮುಕುಲ್ ರೊಹ್ಟಗಿ, ಕರ್ನಾಟಕದಲ್ಲಿ ಘೋಷಣೆಯಾಗಿರುವ ಉಪಚುನಾವಣೆಯನ್ನು ಮುಂದೂಡು ವಂತೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು. ರೊಹ್ಟಗಿಯವರ ವಾದ ಆಲಿಸಿದ್ದ ನ್ಯಾಯಾ ಲಯ, ಅನರ್ಹ ಶಾಸಕರಿಗಾಗಿ ಚುನಾವಣೆ ಮುಂದೂಡಲು ಸಾಧ್ಯವಿಲ್ಲ ಎಂದು ಹೇಳಿತ್ತು.