ಪಿರಿಯಾಪಟ್ಟಣದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಮೈಸೂರು

ಪಿರಿಯಾಪಟ್ಟಣದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

December 10, 2018

ಪಿರಿಯಾಪಟ್ಟಣ: ಯುವ ಜನತೆ ದೇಶದ ಶಕ್ತಿಯಾಗಿದ್ದು, ಒಳ್ಳೆಯ ಮಾರ್ಗದರ್ಶನದಲ್ಲಿ ವಿದ್ಯಾ ವಂತರಾದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಮಹಾರಾಜ ಕೈಗಾರಿಕಾ ತರಬೇತಿ ಸಂಸ್ಥೆ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಹೇಳಿದರು.

ಪಟ್ಟಣದ ಮಹಾರಾಜ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆ ಸಂಯುಕ್ತಾಶ್ರಯ ದಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರದೊಂದಿಗೆ ನಾಗರಿಕರು ಕೈ ಜೋಡಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿದ್ದು, ಹಿರಿಯರ ಮಾರ್ಗದರ್ಶನದಲ್ಲಿ ಯುವ ಜನತೆ ಸಾಗಿದಾಗ ಸಂಸ್ಕಾರಯುತ ಸುಭಿಕ್ಷ ನಾಡು ನಿರ್ಮಾಣವಾಗುತ್ತದೆ ಎಂದ ಅವರು, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ಹಾದಿ ತಪ್ಪುತ್ತಿರುವ ಯುವ ಜನತೆ ಜಾಗೃತರಾಗಿ ಒಳ್ಳೆಯ ಆಲೋಚನೆ ಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿ ನವೀನ್‍ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಮಾನಸಿಕ ವಾಗಿ ಮತ್ತು ದೈಹಿಕವಾಗಿ ಸದೃಢರಾದಾಗ ಮಾತ್ರ ಕಲಿಕೆಯತ್ತ ಆಸಕ್ತಿ ವಹಿಸಬಹುದು ಎಂದು ಸಲಹೆ ನೀಡಿದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ರಮೇಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯೆ ಮಂಜುಳಾ, ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಷಣ್ಮುಖರಾವ್, ಧರ್ಮಸ್ಥಳ ಸಂಸ್ಥೆ ಮೇಲ್ವಿ ಚಾರಕ ಧನಂಜಯ್, ಗ್ರಾಪಂ ಸದಸ್ಯ ಬೂತನಹಳ್ಳಿ ರವಿ, ಪ್ರಾಂಶುಪಾಲ ಶಿವಕುಮಾರ್, ತರಬೇತಿ ಅಧಿಕಾರಿ ವಿಶ್ವನಾಥ್, ಮುಖಂಡರಾದ ಮಹೇಶ್, ಆನಂದ್, ಗಾಯಕ ಸತೀಶ್ ಹಾಜರಿದ್ದರು.

Translate »