ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ಎನ್‌ಡಿಎ ಉಪರಾಷ್ಟçಪತಿ ಅಭ್ಯರ್ಥಿ
ಮೈಸೂರು

ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ಎನ್‌ಡಿಎ ಉಪರಾಷ್ಟçಪತಿ ಅಭ್ಯರ್ಥಿ

July 17, 2022

ನವದೆಹಲಿ: ನೂತನ ಉಪರಾಷ್ಟçಪತಿ ಆಯ್ಕೆಗೆ ಆಗಸ್ಟ್ ೬ರಂದು ಚುನಾವಣೆ ನಡೆಯಲಿದೆ. ಎನ್‌ಡಿಎ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ಕಣಕ್ಕಿಳಿಯಲಿದ್ದಾರೆ. ಇದಕ್ಕೆ ಸಂಬAಧಿ ಸಿದಂತೆ ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾ ಅಧಿಕೃತವಾಗಿ ಘೋಷಿಸಿದ್ದಾರೆ.

ದೆಹಲಿ ಪ್ರಧಾನಿ ಕಚೇರಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಗಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು.

ಪ್ರಧಾನಿ ಭೇಟಿಯಾಗಿದ್ದ ಧನ್ಕರ್: ಎನ್‌ಡಿಎ ಅಭ್ಯರ್ಥಿಯಾಗಿ ಹೆಸರು ಘೋಷಣೆಯಾ ಗುವುದಕ್ಕೂ ಕೆಲ ಗಂಟೆಗಳ ಮುಂಚೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಧನ್ಕರ್ ಭೇಟಿ ಮಾಡಿದ್ದರು. ಎಲ್ಲಾ ಪರಿ ಗಣನೆಗಳು ಮತ್ತು ಸಮಾಲೋಚನೆ ನಂತರ ಕಿಸಾನ್ ಪುತ್ರ(ರೈತರ ಮಗ) ಜಗದೀಪ್ ಧನ್ಕರ್ ಅವರನ್ನು
ಬಿಜೆಪಿ ಉಪರಾಷ್ಟçಪತಿ ಹುದ್ದೆಗೆ ಅಭ್ಯರ್ಥಿಯಾಗಿ ಘೋಷಿಸಿದ್ದೇವೆ ಎಂದು ಬಿಜೆಪಿ ರಾಷ್ಟಾçಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದರು. ೨೦೧೯ರ ಜುಲೈ ತಿಂಗಳಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ಜಗದೀಪ್ ಧನ್ಕರ್ ಅಧಿಕಾರ ವಹಿಸಿಕೊಂಡಿದ್ದರು.

ಅಧಿಕಾರ ವಹಿಸಿಕೊಂಡಾಗಿನಿAದಲೂ ಬಂಗಾಳ ಮುಖ್ಯಮಂತ್ರಿ ಜೊತೆ ಮುಸುಕಿನ ಗುದ್ದಾಟ ಮುಂದುವರೆದಿದ್ದು, ಅನೇಕ ಸಲ ಸುದ್ದಿಯಾಗಿದ್ದಾರೆ. ಮೂರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಸೇವೆಯಲ್ಲಿರುವ ಧನ್ಕರ್ ೧೯೮೯ರ ಲೋಕಸಭೆ ಚುನಾ ವಣೆಯಲ್ಲಿ ಜುಂಜುನು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ ೧೯೯೦ರಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದು, ೧೯೯೩ರಲ್ಲಿ ಕಿಶನ್‌ಗಢ ಕ್ಷೇತ್ರದಿಂದ ರಾಜಸ್ಥಾನ ವಿಧಾನಸಭೆಗೆ ಆಯ್ಕೆಯಾಗಿದ್ದರು.

ಉಪ ರಾಷ್ಟçಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ ೧೦ರಂದು ಅಂತ್ಯಗೊಳ್ಳಲಿದೆ. ಉಪರಾಷ್ಟçಪತಿ ಸ್ಥಾನಕ್ಕೆ ಆಗಸ್ಟ್ ೬ರಂದು ಚುನಾವಣೆ ನಡೆಯಲಿದೆ. ರಾಷ್ಟçಪತಿ ಚುನಾವಣೆಗೆ ಜುಲೈ ೧೮ರಂದು ಮತದಾನ ನಡೆಯಲಿದ್ದು, ಜುಲೈ ೨೧ರಂದು ಫಲಿತಾಂಶ ಹೊರಬರಲಿದೆ. ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಸ್ಪರ್ಧಿಸಿದ್ದರೆ, ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಕಣಕ್ಕಿಳಿದಿದ್ದಾರೆ.

Translate »