ಪಶ್ಚಿಮ ಘಟ್ಟ ಸಂರಕ್ಷಣೆ ಸಂಬಂಧ: ಡಾ. ಕಸ್ತೂರಿರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ
ಮೈಸೂರು

ಪಶ್ಚಿಮ ಘಟ್ಟ ಸಂರಕ್ಷಣೆ ಸಂಬಂಧ: ಡಾ. ಕಸ್ತೂರಿರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

August 22, 2018

ಬೆಂಗಳೂರು:  ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತು ವಿಜ್ಞಾನಿ ಡಾ. ಕಸ್ತೂರಿರಂಗನ್ ಸಮಿತಿ ನೀಡಿದ್ದ ವರದಿ ಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ.

ಇದರೊಂದಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಕಳೆದ 5 ವರ್ಷಗಳಿಂದ ನಡೆಯುತ್ತಿದ್ದ ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಸಮರಕ್ಕೆ ತೆರೆ ಬಿದ್ದಂತಾಗಿದೆ.

ರಾಜ್ಯ ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಸಂದೀಪ್ ದವೆ, ಈ ತಿಂಗಳ 17ರಂದು ಕೇಂದ್ರಕ್ಕೆ ಪತ್ರ ಬರೆದಿದ್ದು, ಡಾ.ಕಸ್ತೂರಿರಂಗನ್ ವರದಿ ಅನುಷ್ಠಾನ ಸಾಧ್ಯವಿಲ್ಲ, ಪಶ್ಚಿಮ ಘಟ್ಟ ಸಂರಕ್ಷಣೆಗೆ ರಾಜ್ಯ ಸರ್ಕಾರ ತನ್ನದೇ ಆದ ಕ್ರಮಗಳನ್ನು ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಅರಣ್ಯ ಮತ್ತು ಹವಾಮಾನ ಸಚಿವಾಲಯಕ್ಕೆ ಬರೆದಿರುವ ಪತ್ರದಲ್ಲಿ, ಕರ್ನಾಟಕ ಸರ್ಕಾರ ವರದಿ ತಿರಸ್ಕರಿಸಲು ಕಾರಣಗಳೇನು ಎಂದು ತಿಳಿಸಿದ್ದಾರೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿನ ಅರಣ್ಯ, ಜೀವ ವೈವಿಧ್ಯತೆ ಹಾಗೂ ಪರಿಸರ ಸಂರಕ್ಷಣೆಗೆ ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗಿದೆ.

ಪಶ್ಚಿಮಘಟ್ಟ ಪ್ರದೇಶದಲ್ಲಿ ವಾಸಿಸು ತ್ತಿರುವ ಆದಿವಾಸಿಗಳನ್ನು ಒಕ್ಕಲೆಬ್ಬಿಸಲು ಸಾಧ್ಯವಿಲ್ಲ, ತಲತಲಾಂತರಗಳಿಂದ ಈ ಕಸುಬನ್ನೇ ಅವರುಗಳು ನಂಬಿಕೊಂಡು ಬದುಕುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳು, ಪರಿಸರತಜ್ಞರು ಪ್ರಾಣಿ-ಪಕ್ಷಿಗಳ ತಜ್ಞರು ಸೇರಿದಂತೆ ಹಲವರು ವರದಿ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ, ವರದಿ ತಿರಸ್ಕರಿಸುವುದರಿಂದ ಈ ಭಾಗದ ಪರಿಸರದ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರ ತಿಳಿಸಿದೆ.

ವರದಿ ಅನುಷ್ಠಾನ ಸಂಬಂಧ ಪಶ್ಚಿಮಘಟ್ಟ ವ್ಯಾಪ್ತಿಗೆ ಒಳಪಡುವ ರಾಜ್ಯ ಗಳು ಅಕ್ಟೋಬರ್ 25ರೊಳಗೆ ತಮ್ಮ ಅಭಿಪ್ರಾಯ ತಿಳಿಸಬೇಕು, ಆಕ್ಷೇಪಣೆ ಸಲ್ಲಿಸಲು ಈ ತಿಂಗಳ 25 ಕೊನೆಯ ದಿನವಾಗಿತ್ತು.

ಡಾ.ಕಸ್ತೂರಿ ರಂಗನ್ ವರದಿ ಅನ್ವಯ ಪಶ್ಚಿಮಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯ 607 ಹಳ್ಳಿ, ಕೊಡಗಿನ 50 ಗ್ರಾಮಗಳು, ಶಿವ ಮೊಗ್ಗ 470, ಚಿಕ್ಕಮಗಳೂರು 143, ದಕ್ಷಿಣ ಕನ್ನಡ 48 ಮತ್ತು ಉಡುಪಿ 40, ಹಾಸನ 38 ಹಾಗೂ ಚಾಮರಾಜನಗರ ಜಿಲ್ಲೆಯ 24 ಹಳ್ಳಿಗಳು ಸೇರುತ್ತವೆ. ಈ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ವಾಗಿ ಘೋಷಿಸಿದಲ್ಲಿ ಕೃಷಿ, ಹೈನುಗಾರಿಕೆ, ಅಭಿವೃದ್ಧಿ ಕಾರ್ಯ, ಗಣಿಗಾರಿಕೆ ಸೇರಿ ದಂತೆ ಯಾವುದೇ ಚಟುವಟಿಕೆಗಳನ್ನು ನಡೆಸಲು ಅವಕಾಶ ಇರುವುದಿಲ್ಲ.

Translate »